Pakistan: ರಾಜತಾಂತ್ರಿಕ ಮಾಹಿತಿ ದುರುಪಯೋಗ: ತಪ್ಪೊಪ್ಪಿಕೊಂಡ ಇಮ್ರಾನ್ ಖಾನ್
- ಜೈಲಿನಲ್ಲಿ ವಿಚಾರಣೆ ವೇಳೆ ಬಾಯಿಬಿಟ್ಟ ಪಾಕ್ ಮಾಜಿ ಪ್ರಧಾನಿ
Team Udayavani, Aug 27, 2023, 9:53 PM IST
ಇಸ್ಲಾಮಾಬಾದ್: ಅಧಿಕಾರದಲ್ಲಿ ಇರುವ ಸಂದರ್ಭದಲ್ಲಿ ಅತ್ಯಂತ ರಹಸ್ಯ ರಾಜತಾಂತ್ರಿಕ ಮಾಹಿತಿಯನ್ನು ದುರುಪಯೋಗ ಮಾಡಿಕೊಂಡಿರುವುದನ್ನು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ. ಸದ್ಯ ಅವರನ್ನು ಇರಿಸಲಾಗಿರುವ ಅಟ್ಟೋಕ್ ಜೈಲಿನಲ್ಲಿ ಪಾಕಿಸ್ತಾನ ಸರ್ಕಾರ ನೇಮಿಸಿದ ತನಿಖಾ ತಂಡ ಅವರನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ಅಂಶ ಬಯಲಾಗಿದೆ ಎಂದು ಆ ದೇಶದ ಮಾಧ್ಯಮಗಳು ವರದಿ ಮಾಡಿವೆ.
2022ರ ಏಪ್ರಿಲ್‌ನಲ್ಲಿ ನಡೆದಿದ್ದ ರ್ಯಾಲಿಯಲ್ಲಿ ಅವರು ಈ ದಾಖಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ತನಿಖೆಯ ವೇಳೆ ಅದನ್ನು ಪ್ರದರ್ಶಿಸಿದ್ದನ್ನು ಒಪ್ಪಿಕೊಳ್ಳಲಿಲ್ಲ. ಅಲ್ಲಿ ಪ್ರದರ್ಶನ ಮಾಡಿದ್ದು ಸಚಿವ ಸಂಪುಟದ ಟಿಪ್ಪಣಿ ಎಂದು ಹೇಳಿದ್ದರು. ಆದರೆ, ಮಾತನಾಡುವ ಸಂದರ್ಭದಲ್ಲಿ ಅಮೆರಿಕ ಸರ್ಕಾರ ತಮ್ಮನ್ನು ಪ್ರಧಾನಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸಲು ಮುಂದಾಗಿದೆ. ಅದಕ್ಕೆ ಸೂಕ್ತ ದಾಖಲೆಗಳು ಇವೆ ಎಂದು ಆ ಸಂದರ್ಭದಲ್ಲಿ ಇಮ್ರಾನ್ ಖಾನ್ ಆರೋಪ ಮಾಡಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಸೆರೆಮನೆ ಶಿಕ್ಷೆ ಅನುಭವಿಸುತ್ತಿರುವ ಇಮ್ರಾನ್ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ ಆರೋಪದಡಿಯಲ್ಲಿ ಕೇಸು ದಾಖಲಾಗಿರುವಂತೆಯೇ ಶನಿವಾರ ಅವರ ವಿಚಾರಣೆಯನ್ನು ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ನಡೆಸಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತೆ ಮಾಜಿ ಸಚಿವ ಶಾ ಮೆಹಮೂದ್ ಖುರೇಷಿ ವಿರುದ್ಧವೂ ಕೇಸು ದಾಖಲಾಗಿದ್ದು, ಆ.19ರಂದು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.