ಗಂಡ ದುಬೈನಲ್ಲಿ,ಪತ್ನಿ ಬೆಂಗಳೂರಲ್ಲಿ,ಆವಿನಹಳ್ಳಿಯಲ್ಲಿ ಸಾಗುವಳಿ! : ಶಾಸಕ ಹಾಲಪ್ಪ
ಸಾಗುವಳಿ ಮಾಡದೆ ಇದ್ದವರಿಂದಲೂ ಸಹ ಬಗರ್‌ಹುಕುಂ ಕೋರಿ ಅರ್ಜಿ
Team Udayavani, Jan 14, 2022, 3:30 PM IST
ಸಾಗರ: ಗಂಡ ದುಬೈನಲ್ಲಿದ್ದಾನೆ, ಹೆಂಡತಿ ಬೆಂಗಳೂರಿನಲ್ಲಿ ವಾಸವಿದ್ದಾರೆ. ತಾವು ಆವಿನಹಳ್ಳಿಯಲ್ಲಿ ಸಾಗುವಳಿ ಮಾಡುತ್ತಿದ್ದೇವೆ ಎಂದು 3 ಎಕರೆ ಜಮೀನು ಮಂಜೂರಿಗೆ ಬಗರ್‌ಹುಕುಂ ಅಡಿ ಅರ್ಜಿ ಸಲ್ಲಿಸಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಗಮನ ಸೆಳೆದರು.
ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಗರ್‌ಹುಕುಂ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆವಿನಹಳ್ಳಿಯಲ್ಲಿ ಸಾಗುವಳಿ ಮಾಡದೆ ಇದ್ದವರು ಸಹ ಬಗರ್‌ಹುಕುಂ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಪ್ರಕರಣಗಳಿಂದ ನಿಜವಾಗಿಯೂ ಕೃಷಿ ನಡೆಸುತ್ತಿರುವ ರೈತರಿಗೆ ಅನ್ಯಾಯವಾಗುತ್ತದೆ. ಇಂತಹದ್ದಕ್ಕೆಲ್ಲ ಎಂದಿಗೂ ಅವಕಾಶ ಮಾಡಿಕೊಡುವುದಿಲ್ಲ ಎಂದು ಘೋಷಿಸಿದರು.
ತಾಲೂಕಿನ 28 ರೈತರಿಗೆ ಶೀಘ್ರದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹಕ್ಕುಪತ್ರ ನೀಡಲಾಗುತ್ತದೆ. ಜಮೀನು ಮಂಜೂರಾದ ರೈತರ ಜಮೀನುಗಳಿಗೆ ಇಂದಿನಿಂದಲೇ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಸುಮಾರು 3 ಲಕ್ಷ ಹೆಕ್ಟೇರ್ ಸಿ ಎಂಡ್ ಡಿ ಲ್ಯಾಂಡ್ ಇದ್ದು ಅದನ್ನು ಬಿಡಿಸಿ ಅರ್ಜಿ ಸಲ್ಲಿಸಿದ ರೈತರಿಗೆ ನೀಡುವ ನಿಟ್ಟಿನಲ್ಲಿ ಕಂದಾಯ ಸಚಿವರು, ಅರಣ್ಯ ಸಚಿವರು ಮತ್ತು ಗೃಹ ಸಚಿವರ ಜೊತೆ ಸದ್ಯದಲ್ಲಿ ಸಭೆ ಕರೆಯಲಾಗುತ್ತದೆ. ಈಗಾಗಲೆ ಕಂದಾಯ ಮತ್ತು ಅರಣ್ಯ ಸಚಿವರ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದರು.
ಬಗರ್‌ಹುಕುಂ ಕಾಯ್ದೆಯಡಿ ಫಾರಂ ನಂ. 53 ಮತ್ತು 57 ಅಡಿ ಅರ್ಜಿ ಸಲ್ಲಿಸಿದ ಅರ್ಹರಿಗೆ ಜಮೀನು ಮಂಜೂರಾತಿಗೆ ಅಗತ್ಯಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಮೀಸಲು ಅರಣ್ಯದ ನೋಟಿಸ್ ನೀಡಿ ತಮ್ಮನ್ನು ಒಕ್ಕಲೆಬ್ಬಿಸುತ್ತಾರೆ ಎನ್ನುವ ಭಯ ರೈತರಿಗೆ ಬೇಡ. ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಜೊತೆಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ಸಂಬಂಧ ಸಹ ಸದ್ಯದಲ್ಲಿಯೆ ಗಮನ ಹರಿಸಲಾಗುತ್ತದೆ ಎಂದು ಹೇಳಿದರು.
ಬಗರ್‌ಹುಕುಂ ಸಮಿತಿ ಸದಸ್ಯರಾದ ಆರ್.ಎಸ್.ಗಿರಿ, ರೇವಪ್ಪ ಕೆ.ಹೊಸಕೊಪ್ಪ, ಗಂಗಮ್ಮ, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಗ್ರೇಡ್-೨ ತಹಶೀಲ್ದಾರ್ ಪರಮೇಶ್ವರ ಟಿ. ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.