ವಿಧಾನ ಪರಿಷತ್ ಚುನಾವಣೆ: ಅವಧಿ ಮುಗಿದರೂ ಕ್ಷೇತ್ರದಲ್ಲಿ ಉಳಿದರೆ ಕಾನೂನು ಕ್ರಮ: ಡಿಸಿ
Team Udayavani, Dec 8, 2021, 4:50 AM IST
ಮಂಗಳೂರು: ರಾಜ್ಯ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿ. 10ರಂದು ನಡೆಯಲಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭಗಳು, ಬೈಕ್ ರ‍್ಯಾಲಿ, ಬೀದಿ ನಾಟಕ ಮುಂತಾದ ಬಹಿ
ರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯವಾದ ಗಡುವಿನ ಅನಂತರ (ಡಿ. 7ರ ಸಂಜೆ4 ಗಂಟೆಯಿಂದ) ಚುನಾವಣಾ ಕ್ಷೇತ್ರದಮತದಾರರಲ್ಲದವರು, ರಾಜಕೀಯ ಕಾರ್ಯಕರ್ತರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ದ.ಕ. ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿರುವ ಮತದಾರರಲ್ಲದ ಹೊರಗಿನ ರಾಜಕೀಯ ಕಾರ್ಯಕರ್ತರು ಮತ್ತು ಮುಖಂಡರು ಬಹಿರಂಗ ಪ್ರಚಾರದ ಗಡುವು ಮುಕ್ತಾಯದ ಅನಂತರವೂ ಚುನಾವಣೆ ಕ್ಷೇತ್ರದಲ್ಲಿ ಇದ್ದಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಎಸ್‌ಬಿಐ ಕ್ರೆಡಿಟ್ ಕಾರ್ಡ್ ಇಎಂಐ ಶುಲ್ಕ ದುಬಾರಿ
ಮದ್ಯ ಮಾರಾಟ, ಸಾಗಾಣಿಕೆ ನಿಷೇಧ
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಡಿ. 9ರ ಮಧ್ಯರಾತ್ರಿ 12ರಿಂದ ಡಿ. 10ರ ಮಧ್ಯರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಮದ್ಯ ಮುಕ್ತ ದಿನವೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.