MLC Election; ಇಂದು ವಿಧಾನಪರಿಷತ್ ಉಪ ಚುನಾವಣೆ
ಉಭಯ ಜಿಲ್ಲೆಯಲ್ಲಿ ಒಟ್ಟು 392 ಮತಗಟ್ಟೆ, 6,032 ಮತದಾರರು
Team Udayavani, Oct 21, 2024, 6:30 AM IST
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾ ಧಿಕಾರದ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ.
ರವಿವಾರ ಮತಗಟ್ಟೆಗಳಿಗೆ ಮತಪತ್ರ ಮತ್ತು ಸಿಬಂದಿ ಕಳುಹಿಸಿಕೊಡುವ ಮಸ್ಟರಿಂಗ್ ಕಾರ್ಯ ಜಿಲ್ಲಾದ್ಯಂತ ನಡೆಯಿತು. ಚುನಾವಣಾ ಧಿಕಾರಿ ಹಾಗೂ ಜಿಲ್ಲಾ ಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ ವಿವಿಧ ಕಡೆಗಳ ಚುನಾವಣೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆ ಗಳನ್ನು ಪರೀಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಚುನಾವಣೆ ಕಣದಲ್ಲಿ
ಚುನಾವಣ ಕಣದಲ್ಲಿ ಕಿಶೋರ್ ಬಿ.ಆರ್. (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಸ್ಪರ್ಧಿಸುತ್ತಿದ್ದಾರೆ.
ನಿಷೇಧಾಜ್ಞೆ ಜಾರಿ
ಮತಗಟ್ಟೆ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು, ಜನಸಂದಣಿ ಗುಂಪು ಗುಂಪಾಗಿ ಜನ ಸೇರದಂತೆ ಸೂಚಿಸಲಾಗಿದೆ. ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂ ಧಿಸಿದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಎಲ್ಲ ಮತಗಟ್ಟೆಗಳಿಗೆ ಭದ್ರತೆ ಸಂಬಂಧಿಸಿ ಒಟ್ಟು 540 ಪೊಲೀಸ್ ಅ ಧಿಕಾರಿ/ ಸಿಬಂದಿ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್ ಅಧಿ ಕಾರಿ/ಸಿಬಂದಿ ಕೂಡ ನಿಯೋಜಿಸಲಾಗಿದೆ.
ಅ.24ರಂದು ಮತ ಎಣಿಕೆ
ಅ.21ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಅ.24ರಂದು ಮಂಗಳೂರು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು, 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.