ರೈತರೇ, ನಿಮ್ಮ ಬೆಳೆ ಸಮೀಕ್ಷೆ ನೀವೇ ದಾಖಲಿಸಿ : ಬೆಳೆ ಸಮೀಕ್ಷೆ-2020 ಮೊಬೈಲ್ ಆ್ಯಪ್
Team Udayavani, Aug 13, 2020, 12:41 PM IST
ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆ ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ರೈತರೇ ಸ್ವಯಂ ಸಮೀಕ್ಷೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ಹೇಳಿದರು. ಜಿಲ್ಲಾಡಳಿತ ಕಚೇರಿ ಸಭಾ ಭವನದಲ್ಲಿ ಬುಧವಾರ ಬೆಳೆ ಸಮೀಕ್ಷೆ ಕಾರ್ಯ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು. ರೈತರು ನೂತನ ಆ್ಯಪ್ ಮೂಲಕ ತಾವು ಬೆಳೆದ ಬೆಳೆ ನಮೂದಿಸಲು ಆ.24 ಕೊನೆ ದಿನವಾಗಿದೆ. ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್ ವಾರು ತಾವು ಬೆಳೆದ ಕೃಷಿ ಬೆಳೆ ಹಾಗೂ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆ ಸಮೀಕ್ಷೆ 2020 ಆ್ಯಪ್ ಡೌನ್ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನೋಂದಾಯಿಬಹುದು ಎಂದರು.
ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಪ್ರಕೃತಿ ವಿಕೋಪದ
ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವುದಕ್ಕೆ, ಬೆಳೆ ವಿಮಾ ಯೋಜನೆಯಡಿ ಸರ್ವೇ
ನಂಬರ್‌ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗ ಕೈಗೊಳ್ಳಲು ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಠ
ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಸಮೀಕ್ಷೆಯಿಂದ ಅನುಕೂಲವಾಗಲಿದೆ ಎಂದು
ತಿಳಿಸಿದರು.
ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ
ಅನುಷ್ಠಾನಕ್ಕಾಗಿ ಹಾಗೂ ಆರ್‌ಟಿಸಿ ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದು. ಆದ್ದರಿಂದ ಜಿಲ್ಲೆಯ ರೈತ ಬಾಂಧವರು
ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ಮಾಹಿತಿ ದಾಖಲಿಸಲು ಸಹಕರಿಸಬೇಕು ಎಂದರು.
ಈ ಸಮೀಕ್ಷೆ ಕಾರ್ಯ ಆ.24ರ ಒಳಗಾಗಿ ಅಪ್ಲೋಡ್ ಮಾಡಲು ಕಾಲಮಿತಿ ನಿಗದಿಪಡಿಸಲಾಗಿದೆ. ರೈತರು ನಿಗದಿತ ಸಮಯದೊಳಗೆ ಬೆಳೆದ ಮಾಹಿತಿ ಅಪ್ಲೋಡ್ ಮಾಡದಿದ್ದಲ್ಲಿ ಆ.24ರ ನಂತರ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನಿನಲ್ಲಿರುವ ಬೆಳೆ ಮಾಹಿತಿ ದಾಖಲಿಸಬಹುದು. ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿ ಕಾರಿಗಳು, ರೇಷ್ಮೆ-ನೀರಾವರಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆ ಆ್ಯಪ್‌ನಲ್ಲಿ ನಮೂದಿಸಿದನ್ನು ನೋಡಲ್ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳತಕ್ಕದ್ದು. ಪ್ರತಿ ಮೂರು ದಿನಗಳಿಗೊಮ್ಮೆ ಬೆಳೆ ನೋಂದಣಿಯಾದ ಪ್ರತಿಶತ ವಿವರ ನೀಡುವಂತೆ ತಿಳಿಸಿದರು.
ತಹಶೀಲ್ದಾರರ ನೇತೃತ್ವದಲ್ಲಿ ಬೆಳೆ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯಾಗಿದ್ದು, ತಾಂತ್ರಿಕ ಸಮಸ್ಯೆ ಏನೇ ಬಂದರು ಪ್ರತಿ ತಾಲೂಕಿಗೊಬ್ಬರಂದತೆ ಟೆಕ್ನಿಷಿಯನ್ ನೀಡಲಾಗುವುದು ಎಂದರು.
ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ ಮಾತನಾಡಿ, ಮಿಶ್ರ ಬೆಳೆ ಸರಿಯಾಗಿ ನಮೂದು ಮಾಡಬೇಕು. ನಮೂದಾದ
ಬಗ್ಗೆ ರೂಪ್ ಲೆವೆಲ್ ಮಾನಿಟರ್ ಆಗುವ ಅಗ್ಯವಿದೆ ಎಂದರು. ಈ ವೇಳೆ ಜಿಪಂ ಸಿಇಒ ಟಿ. ಭೂಬಾಲನ, ಅಪರ ಜಿಲ್ಲಾಧಿಕಾರಿ
ಮಹಾದೇವ ಮುರಗಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಕೃಷಿ ಇಲಾಖೆ ಉಪ ನಿರ್ದೇಶಕ ಕೊಂಗವಾಡ ಇತರರಿದ್ದರು.
ೋವಿಡ್-19 ಲಾಕ್‌ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಮೆಕ್ಕೆ ಜೋಳ ಬೆಳೆದ ರೈತರಿಗೆ 5 ಸಾವಿರ ರೂ. ಆರ್ಥಿಕ ನೆರವು ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 12,087 ಮೆಕ್ಕೆಜೋಳ ಬೆಳೆದ ಜಂಟಿ ಖಾತೆ ಭೂ ಹಿಡುವಳಿ ರೈತರ ಪೈಕಿ 4,732
ರೈತರು ಮಾತ್ರ ಆರ್ಥಿಕ ನೆರವಿಗಾಗಿ ದಾಖಲೆ ಸಲ್ಲಿಸಿದ್ದಾರೆ. ಉಳಿದ ರೈತರು ದಾಖಲಾತಿ ಸಲ್ಲಿಸಲು ಆ.15 ಕೊನೆ ದಿನವಾಗಿದೆ. ರೈತರು ಕೊನೆ ದಿನ ಕಾಯದೇ ಇಂದೇ ದಾಖಲಾತಿ ಸಲ್ಲಿಸಿ ಆರ್ಥಿಕ ನೆರವು ಪಡೆದುಕೊಳ್ಳಬೇಕು.
– ಕ್ಯಾಪ್ಟನ್ ಡಾ|ಕೆ. ರಾಜೇಂದ್ರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.