“ಕೋವಿಡ್ ಮೊಬೈಲ್ ಫೀವರ್ ಕ್ಲಿನಿಕ್’ಗೆ ಚಾಲನೆ
Team Udayavani, Apr 30, 2020, 12:35 PM IST
ಮಂಗಳೂರು: ಕೋವಿಡ್ ವಿರುದ್ಧದ ಕಾರ್ಯಾಚರಣೆಗಾಗಿ ಕೆಎಸ್ಸಾರ್ಟಿಸಿ ಬಸ್ಸನ್ನು “ಕೋವಿಡ್ ಮೊಬೈಲ್ ಫೀವರ್ ಕ್ಲಿನಿಕ್’ ಆಗಿ ಪರಿವರ್ತಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಮಂಗಳೂರಿನ ಬಿಜೈಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು.
ಕೆಎಸ್ಸಾರ್ಟಿಸಿ ವತಿಯಿಂದ ಚಾಲಕನನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತದ ಆದೇಶದಂತೆ ಕಾರ್ಯಾಚರಿಸಲಿದೆ.
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಕಾರ್ಯಾಗಾರದಲ್ಲಿಯೇ ಹಳೆಯ ಬಸ್ಸನ್ನು ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಮಾರ್ಪಾಡು ಮಾಡಲಾ ಗಿದ್ದು 50,000 ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಎಡಿಸಿ ರೂಪಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕೆಎಸ್ಸಾ ರ್ಟಿಸಿ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿ ಅರುಣ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.