ಉಡುಪಿ ಭೋಜನ ಸವಿದ ಮೋದಿ
Team Udayavani, Aug 4, 2023, 7:49 AM IST
ಉಡುಪಿ: ಎಲ್ಲೆಡೆ ಪ್ರಸಿದ್ಧಿ ಪಡೆದಿರುವ ಉಡುಪಿ ಅಡುಗೆ ಈಗ ದೇಶದ ಶಕ್ತಿ ಕೇಂದ್ರ ಸಂಸತ್ತಿನಲ್ಲಿ ಘಮಘಮಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಾಳೆ ಎಲೆಯಲ್ಲಿ ಬಡಿಸಿದ ಉಡುಪಿ ಸಾರು, ಪತ್ರೊಡೆ, ಸುಕ್ರುಂಡೆ, ಹಲಸಿನ ಹಣ್ಣಿನ ಗಟ್ಟಿ, ತಿಮರೆ ಚಟ್ನಿ ಮೊದಲಾದ ಖಾದ್ಯ ಸಹಿತ ಆಂಧ್ರ, ತಮಿಳುನಾಡಿನ ಕೆಲವು ಖಾದ್ಯಗಳನ್ನೊಳಗೊಂಡ ಬಗೆಬಗೆಯ ತಿನಿಸುಗಳ ಭೋಜನವನ್ನು ಸವಿದು ಟ್ವೀಟ್ ಮಾಡಿರುವುದು ವಿಶೇಷವಾಗಿದೆ.
ಗುರುವಾರ ಸಂಸತ್ ಭವನದ ಒಳಾಂಗಣದಲ್ಲಿ ನಡೆದ ಎನ್‌ಡಿಎ ಸಂಸದರ ಸಭೆಯ ಅನಂತರ ಏರ್ಪಡಿಸಿದ್ದ ಭೋಜನಕೂಟಕ್ಕೆ ಉಡುಪಿಯ ಬುಡ್ನಾರು ಸುಬ್ರಹ್ಮಣ್ಯ ಆಚಾರ್ಯ ಅವರು ದಿಲ್ಲಿಗೆ ತೆರಳಿ ಉಡುಪಿ ಅಡುಗೆಯನ್ನು ಸಿದ್ಧಪಡಿಸಿ, ಊಟವನ್ನೂ ಬಡಿಸಿದ್ದರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿತಿನ್ ಗಡ್ಕರಿ, ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಎಲ್ಲರೂ ಉಡುಪಿ ಅಡುಗೆಯ ಸವಿಯುಂಡರು. ಸುಬ್ರಹ್ಮಣ್ಯ ಅವರ ಜತೆ ಸಹಾಯಕರಾಗಿ ರಾಜಶೇಖರ್ ತೆರಳಿದ್ದರು.
Last evening, I had a wonderful meeting with NDA MPs from Southern India, followed by a great dinner in which a variety of South Indian dishes were served including Paniyaram, Appam, Vegetable Korma, Pulihora, Pappu Charu, Adai Aviyal and more. pic.twitter.com/bTHsG8uVg0
— Narendra Modi (@narendramodi) August 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.