ನೆರೆ ಹಾನಿ ಸೌಲಭ್ಯಕ್ಕೆ ಹಣ ಹೊಂದಾಣಿಕೆ
Team Udayavani, Feb 25, 2020, 3:09 AM IST
ಹಾವೇರಿ: ಅತಿವೃಷ್ಟಿಯಿಂದ ಹಾನಿಗೊಳಗಾದ ವರಿಗೆ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಹಣ ಹೊಂದಿಸುವ ಕೆಲಸ ಆಗುತ್ತಿದೆ. ಅಭಿವೃದ್ಧಿ ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಸಂಪನ್ಮೂಲ ಕೊರತೆ ಆಗದಂತೆ ಸರ್ಕಾರ ಎಚ್ಚರ ವಹಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹಾನಗಲ್ಲ ತಾಲೂಕಿನ ಬಾಳಂಬೀಡ ಬಳಿ ಸೋಮವಾರ ನಡೆದ ಕೆರೆ ತುಂಬಿಸುವ ಬಾಳಂಬೀಡ ಹಾಗೂ ಹಿರೆಕೌಂಶಿ ಏತ ನೀರಾವರಿ ಯೋಜನೆ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳನ್ನು ಸರಿಸಮನಾಗಿ ಅಭಿವೃದ್ಧಿ ಮಾಡುವುದು ಬಿಜೆಪಿ ಸರ್ಕಾರದ ಗುರಿ. ಇದಕ್ಕಾಗಿ ಸೂಕ್ತ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.
ಕಳೆದ 25-30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಟ್ರಾಕ್ಟರ್, ಪಂಪ್‌ಸೆಟ್ ಖರೀದಿಸಿದ ರೈತರ ಸಾಲದ ಸಂಪೂರ್ಣ ಸುಸ್ತಿ ಬಡ್ಡಿ ಮನ್ನಾ ಮಾಡಿದೆ. ರೈತರು ಮಾರ್ಚ್ ಒಳಗೆ ಅಸಲು ತುಂಬಿ ಸಹಕರಿಸಬೇಕು. ಇದರಿಂದ ಸರ್ಕಾರ ನಡೆಸಲು ಅನುಕೂಲವಾಗುತ್ತದೆ. ಈ ವಿಚಾರದಲ್ಲಿ ರೈತರು ತೃಪ್ತಿ ಮತ್ತು ಸಮಾಧಾನದಿಂದ ಇರಬೇಕು ಎಂದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಸಿ. ಪಾಟೀಲ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಸಿ.ಎಂ. ಉದಾಸಿ, ವಿರುಪಾಕ್ಷಪ್ಪ ಬಳ್ಳಾರಿ, ನೆಹರು ಓಲೇಕಾರ, ವಿ.ಪ. ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ ಇತರರಿದ್ದರು.
ಟ್ರಂಪ್‌ಗೆ ಏರ್ಪಡಿಸಿರುವ ಔತಣಕೂಟದಲ್ಲಿ ಬಿಎಸ್‌ವೈ ಭಾಗಿ
ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ರಾತ್ರಿ ಹಮ್ಮಿಕೊಂಡಿರುವ ಔತಣ ಕೂಟದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ.
ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ರಾತ್ರಿ ಔತಣ ಏರ್ಪಡಿಸಿದ್ದಾರೆ. ಈ ಔತಣ ಕೂಟದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಅವರಿಗೂ ಆಹ್ವಾನ ಬಂದಿತ್ತು.
ಅದರಂತೆ ಯಡಿಯೂರಪ್ಪ ಅವರು ಮಂಗಳವಾರ ಬೆಳಗ್ಗೆ 11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸುವರು. ರಾತ್ರಿ 8 ಗಂಟೆಗೆ ಔತಣ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಬೆಳಗ್ಗೆ 6.20ಕ್ಕೆ ದೆಹಲಿಯಿಂದ ಹೊರಟು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಎಷ್ಟು ಮುಖ್ಯವೋ ಹಾಗೆಯೇ ಉದ್ಯಮಗಳ ಅಭಿವೃದ್ಧಿಯೂ ಮುಖ್ಯ. ದಾವೋಸ್‌ಗೆ ಹೋಗಿ ಬಂದ ಬಳಿಕ ಹುಬ್ಬಳ್ಳಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶ ನಡೆಸಿದ ಪರಿಣಾಮ ಸಾಕಷ್ಟು ಉದ್ಯಮಿಗಳು ಬಂಡವಾಳ ಹೂಡಿಕೆಗೆ ಮುಂದೆ ಬಂದಿದ್ದಾರೆ.
-ಬಿ.ಎಸ್.ಯಡಿಯೂರಪ್ಪ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.