Moodabidri ಪರಂಪರೆ, ತಂತ್ರಜ್ಞಾನ ಬೆರೆತ ಯುವಶಕ್ತಿಯಿಂದ ದೇಶ ಗುರುಸ್ಥಾನದತ್ತ

ಎಕ್ಸಲೆಂಟ್‌ ಮೂಡುಬಿದಿರೆಯ "ರಾಜ ಸಭಾಂಗಣ' ಉದ್ಘಾಟಿಸಿ ಮೈಸೂರು ಒಡೆಯರ್‌

Team Udayavani, Aug 17, 2023, 12:35 AM IST

Moodabidri ಪರಂಪರೆ, ತಂತ್ರಜ್ಞಾನ ಬೆರೆತ ಯುವಶಕ್ತಿಯಿಂದ ದೇಶ ಗುರುಸ್ಥಾನದತ್ತ

ಮೂಡುಬಿದಿರೆ: ಜಗತ್ತಿನಲ್ಲೇ ಗರಿಷ್ಠ ಪ್ರಮಾಣದ ಯುವಶಕ್ತಿಯನ್ನು ಹೊಂದಿರುವ ಭಾರತ ಆಧುನಿಕ ತಂತ್ರಜ್ಞಾನದಲ್ಲೂ ಸಶಕ್ತವಾಗಿದೆ. ಇದರೊಂದಿಗೆ ನಮ್ಮ ಪರಂಪರೆ, ಸಂಸ್ಕೃತಿಯನ್ನು ಉಳಿಸಿಕೊಂಡು ಮುನ್ನಡೆದರೆ ಭಾರತ ಜಗತ್ತಿನಲ್ಲೇ ಗುರುಸ್ಥಾನಕ್ಕೇರುವುದು ಖಂಡಿತ ಎಂದು ಮೈಸೂರು ಸಂಸ್ಥಾನದ ಯದುವೀರ ಕೃಷ್ಣದತ್ತ ಒಡೆಯರ್‌ ಹೇಳಿದರು.

ಅವರು ಮೂಡುಬಿದಿರೆ ಎಕ್ಸಲೆಂಟ್‌ ವಿದ್ಯಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ರಾಜ ಸಭಾಂಗಣ’ವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್‌ ಮಾತನಾಡಿ, ಈ ನೆಲ, ಜಲ, ನಾಡು ನುಡಿಯ ರಕ್ಷಣೆಯಲ್ಲಿ ಮೈಸೂರು ಅರಸರ ಕೊಡುಗೆ ಅನನ್ಯ ಎಂದರು.

ಸಾಧಕರಿಗೆ ಸಮ್ಮಾನ
ನೀಟ್‌, ಜೆಇಇ ಸಾಧಕರಾಗಿ ಏಮ್ಸ್‌, ಐಐಟಿಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು, ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ್‍ಯಾಂಕ್‌ ಗಳಿಸಿದ ಪ.ಪೂ. ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಸಹಿತ ಒಟ್ಟು 23 ಮಂದಿಯನ್ನು ಅರಸರು ಸಂಸ್ಥೆಯ ವತಿಯಿಂದ ಸಮ್ಮಾನ ಪತ್ರ, ನಗದು ನೀಡಿ ಗೌರವಿಸಿದರು. ಎರಡನೇ ಬಾರಿಗೆ ಶಾಸಕರಾಗಿರುವ ಉಮಾನಾಥ ಕೋಟ್ಯಾನ್‌ ಅವರನ್ನು ಸಮ್ಮಾನಿಸಲಾಯಿತು.

ಅರಸರಿಗೆ ಗೌರವ
ಅರಸರನ್ನು ನವಧಾನ್ಯ, ನವಫಲ, ನವಪುಷ್ಪ, ನವಭಕ್ಷ್ಯ, ಮಹಾವೀರ ಸ್ವಾಮಿಯ ಸ್ಮರಣಿಕೆ, ಐದೆಳೆ ಮಲ್ಲಿಗೆ ಹಾರ, ಹೊತ್ತಗೆ, ರೇಷ್ಮೆ ಶಾಲು ನೀಡಿ ಸಮ್ಮಾನಿಸಲಾಯಿತು.

ಶೂನ್ಯ ತ್ಯಾಜ್ಯ ಕ್ಯಾಂಪಸ್‌
ಮೂಡುಬಿದಿರೆ ಪುರಸಭೆಯ ವ್ಯಾಪ್ತಿಯಲ್ಲಿ ಶೂನ್ಯ ತ್ಯಾಜ್ಯ ಕ್ಯಾಂಪಸ್‌ ಆಗಿ ಪರಿವರ್ತನೆಗೊಂಡ ಪ್ರಥಮ ಅನುದಾನರಹಿತ ವಿದ್ಯಾ ಸಂಸ್ಥೆ ಎಂಬ ಘೋಷಣೆಗೆ ಎಕ್ಸಲೆಂಟ್‌ ಪಾತ್ರವಾಗಿದ್ದು ಆ ಘೋಷಣಾ ಪತ್ರವನ್ನು ಪ್ರಾಂಶುಪಾಲ ಪ್ರದೀಪ್‌ ಕುಮಾರ ಶೆಟ್ಟಿ ವಾಚಿಸಿದರು. ಶಿಕ್ಷಕಿ ಜಯಲಕ್ಷಿ$¾à ಸಾಧಕ ವಿದ್ಯಾರ್ಥಿಗಳ ವಿವರ ನೀಡಿದರು.

ಮಾಜಿ ಶಾಸಕ, ಎಕ್ಸಲೆಂಟ್‌ ಗೌರವಾಧ್ಯಕ್ಷ ಅಭಯಚಂದ್ರ, ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್‌ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್‌ ಸ್ವಾಗತಿಸಿ, ಶೈಕ್ಷಣಿಕ ನಿರ್ದೇಶಕ ಡಾ| ಬಿ.ಪಿ. ಸಂಪತ್‌ ಕುಮಾರ್‌ ವಂದಿಸಿದರು. ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ನಿರ್ವಹಿಸಿದರು.

ಸೈಬರ್‌ ಕ್ರೈಂ ತಡೆ: 5 ಲಕ್ಷ ಉದ್ಯೋಗಾವಕಾಶ
ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಒಡೆಯರ್‌ ಅವರು, ಬದುಕಿನಲ್ಲಿ ರೂಢಿಸಿಕೊಂಡು ಬಂದಿರುವ ಕಟ್ಟು ಕಟ್ಟಲೆಗಳು ಸೈಬರ್‌ ಜಗತ್ತಿನಲ್ಲಿಲ್ಲದ ಕಾರಣ ಸೈಬರ್‌ ಕ್ರೈಂ ಪ್ರಮಾಣ ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ಮೈಸೂರು ಕೇಂದ್ರವಾಗಿ ದೊಡ್ಡ ಮಟ್ಟದ ಸೈಬರ್‌ ಕ್ರೈಂ ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲು ಸಿದ್ಧತೆ ನಡೆದಿದೆ. ಇದರ ಮೂಲಕ 5 ಲಕ್ಷ ಯುವಜನರಿಗೆ ಉದ್ಯೋಗ ಅವಕಾಶ ನಿರ್ಮಾಣವಾಗಲಿದೆ ಎಂದರು.

ವಸಾಹತುಶಾಹಿಯ ಇತಿಹಾಸ ದಿಲ್ಲಿ ಕೇಂದ್ರಿತವಾಗಿದ್ದು ಕರ್ನಾಟಕ ಒಳಗೊಂಡಂತೆ ದೇಶದ ಇತರೆಡೆಗಳ ಅರಸು ಮನೆತನಗಳ ಬಗ್ಗೆ ನಮಗೆ ತಿಳಿಸುವ ಯತ್ನ ನಡೆದಿಲ್ಲ. ಜ್ಞಾನವನ್ನು ವಿಸ್ತರಿಸಬೇಕಾದರೆ ಹೊಸ ವಿಚಾರಗಳಿಗೆ ನಮ್ಮನ್ನು ನಾವು ತೆರೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಹೊಸಶಿಕ್ಷಣ ನೀತಿಯ ಆವಶ್ಯಕತೆ ತುಂಬಾ ಇದೆ ಎಂದವರು ಅಭಿಪ್ರಾಯಪಟ್ಟರು. ಉದ್ಯೋಗದಲ್ಲಿ ಮೀಸಲಾತಿಯ ಪರಿಕಲ್ಪನೆಯನ್ನು ದೇಶದಲ್ಲಿ ಮೊತ್ತ ಮೊದಲು ಜಾರಿಗೆ ತಂದವರೇ ಮೈಸೂರು ಆರಸರು. ಅಂಬೇಡ್ಕರ್‌ ಅವರಿಗೆ ಪ್ರೇರಣೆಯಾದರು ಎಂದು ಯದುವೀರ್‌ ಉಲ್ಲೇಖಿಸಿದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.