ಹೆಬ್ಬರಿಗೆಯಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು: ಪ್ರಕರಣ ಭೇದಿಸಿದ ಪೊಲೀಸರು
ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ ಪ್ರಕರಣ
Team Udayavani, Apr 29, 2023, 8:05 PM IST
ಮೂಡಿಗೆರೆ: ಕಳೆದ ಮೂರು ದಿನಗಳ ಹಿಂದೆ ಕೊಟ್ಟಿಗೆಹಾರದ ಸಮೀಪ ಹೆಬ್ಬರಿಗೆ ಎಂಬಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ನಡೆಸಿದ ವಾಹನ ಮತ್ತು ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆ ಹಿನ್ನೆಲೆ: ಬುಧವಾರ ಸಂಜೆ ಬಣಕಲ್-ಕೊಟ್ಟಿಗೆಹಾರ ಮಧ್ಯದ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಪರಿಚಿತ ಪುರುಷನ ಮೃತದೇಹವೊಂದು ಪತ್ತೆಯಾಗಿತ್ತು. ಅಲ್ಲದೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಚಾರ್ಮಾಡಿ ಘಾಟಿ ಬಳಿ ಪತ್ತೆಯಾಗಿತ್ತು. ಮೃತ ವ್ಯಕ್ತಿ ಚಿಕ್ಕಮಗಳೂರು ಸಮೀಪದ ತೇಗೂರು ಮೂಲದ ದಿಲೀಪ ಎನ್ನಲಾಗಿದ್ದು ಅವರು ಧರ್ಮಸ್ಥಳದಲ್ಲಿ ಮುಡಿತೆಗೆಯುವ ಕಾಯಕ ಮಾಡುತ್ತಿದ್ದರು ಅಲ್ಲದೆ ಧರ್ಮಸ್ಥಳದಲ್ಲಿ ತಾನು ಕಟ್ಟಿಸಿದ ಮನೆಯ ಗೃಹಪ್ರವೇಶಕ್ಕೆ ಸಂಬಂಧಿಕರಿಗೆ ಆಹ್ವಾನ ಪತ್ರಿಕೆ ನೀಡಿ ಹೆಂಡತಿ ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಉಜಿರೆಗೆ ಮರಳುತ್ತಿದ್ದಾಗ ಮಳೆ ಬಂದ ಪರಿಣಾಮ ಹೆಂಡತಿ ಮಕ್ಕಳನ್ನು ಬಸ್ಸಿನಲ್ಲಿ ಕಳುಹಿಸಿ ತಾನು ಸ್ಕೂಟಿಯಲ್ಲಿ ಬರುವುದಾಗಿ ಹೇಳಿ ಹೊರಟಿದ್ದರು ಆದರೆ ಅವರು ಧರ್ಮಸ್ಥಳಕ್ಕೆ ಬಾರದೆ ಹೆಬ್ಬರಿಗೆ ಸಮೀಪ ಮೃತಪಟ್ಟಿದ್ದರು ಈ ಕುರಿತು ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣ ಭೇದಿಸಿದ ಪೊಲೀಸರು ಅಪಘಾತವೆಸಗಿದ್ದ ವಾಹನವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಸಿರಾ ಮೂಲದ ಬೊಲೆಯೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನವು ತರಕಾರಿ ಸಾಗಾಟ ಮಾಡುವುದಾಗಿದ್ದು, ಮಂಗಳೂರಿಗೆ ತರಕಾರಿ ತಲುಪಿಸಿ ವಾಪಾಸ್ಸು ಬರುತ್ತಿತ್ತು ಎನ್ನಲಾಗಿದೆ. ಚಾರ್ಮಾಡಿ ಸಮೀಪ ತಮ್ಮ ವಾಹನ ದಿಲೀಪ್ ಪ್ರಯಾಣಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಾಯಗೊಂಡಿದ್ದ ದಿಲೀಪ್ ಅವರನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಹೆಬ್ಬರಿಗೆ ಸಮೀಪ ಹೊಟ್ಟೆನೋವು ಮೂತ್ರವಿಸರ್ಜನೆ ಮಾಡಬೇಕು ಎಂದಾಗ ಅವರನ್ನು ಕೆಳಗೆ ಇಳಿಸಿದೆವು. ಮೂತ್ರ ವಿಸರ್ಜನೆಗೆ ಕುಳಿತವರು ಎಷ್ಟು ಕರೆದರು ಮೇಲೆ ಏಳಲಿಲ್ಲ. ಹಾಗಾಗಿ ಎದ್ದು ಸರಿಯಾಗಬಹುದು ಎಂದು ಹಾಗೆಯೇ ಬಿಟ್ಟು ಹೋದೆವು ಎಂದು ಹೇಳಿದ್ದಾರೆ.
ಆದರೆ ಹೊಟ್ಟೆಯ ಭಾಗಕ್ಕೆ ತೀವ್ರ ಹೊಡೆತ ಬಿದ್ದು ಅವರ ಲಿವರ್ ಗೆ ಪೆಟ್ಟಾಗಿತ್ತು ಎನ್ನಲಾಗಿದ್ದು, ನೋವನ್ನು ತಾಳಲಾರದೇ ರಸ್ತೆ ಬದಿಯಲ್ಲಿ ಒದ್ದಾಡಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೇಗೌಡ, ಬಣಕಲ್ ಸಬ್ ಇನ್ಸ್ ಪೆಕ್ಟರ್ ಗಳಾದ ಜಂಬೂ ಮಹಾರಾಜನ್, ರನ್ನಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಪ್ರಕರಣವನ್ನು ಬೇದಿಸಲಾಗಿದೆ.
ಇದನ್ನೂ ಓದಿ: ಪರಮೇಶ್ವರ್ ತಲೆಗೆ ಕಲ್ಲು :ಕೊರಟಗೆರೆ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.