ಜನವರಿ ತಿಂಗಳ ಮೊದಲ ವಾರದಲ್ಲಿ ಇನ್ನಷ್ಟು ರೈಲುಗಳ ಸಂಚಾರ ಆರಂಭ
Team Udayavani, Dec 30, 2021, 6:10 AM IST
ಮಂಗಳೂರು: ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ವ್ಯಾಪ್ತಿಯಲ್ಲಿ ಕೊರೊನಾ ಸಂದರ್ಭದಲ್ಲಿ ನಿಲುಗಡೆಯಾಗಿದ್ದ ರೈಲುಗಳು ಹಂತ ಹಂತವಾಗಿ ಸಂಚಾರ ಪುನರಾರಂಭಿಸಿದ್ದು, ಜನವರಿ ಮೊದಲ ವಾರದಲ್ಲಿ ಇನ್ನಷ್ಟು ರೈಲುಗಳು ಓಡಾಟ ನಡೆಸಲಿವೆ ಎಂದು ವಿಭಾಗೀಯ ಮ್ಯಾನೇಜರ್ ತ್ರಿಲೋಕ್ ಕೊಠಾರಿ ತಿಳಿಸಿದ್ದಾರೆ.
ಬುಧವಾರ ಆನ್‌ಲೈನ್ ಮೂಲಕ ನಡೆದ ವಿಭಾಗೀಯ ರೈಲು ಬಳಕೆದಾರರ ಸಲಹಾ ಸಮಿತಿ (ಡಿಆರ್‌ಯುಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2020- 21ನೇ ಸಾಲಿನಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಪ್ರಯಾಣಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ವರ್ಷ 27.76 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದೆ ಎಂದರು.
ಸಲಹಾ ಸಮಿತಿ ಸದಸ್ಯ ಮಂಗಳೂರಿನ ಹನುಮಂತ ಕಾಮತ್ ಅವರು, ಕಳೆದ 2 ವರ್ಷಗಳಲ್ಲಿ ಕೊರೊನಾ ಕಾರಣದಿಂದಾಗಿ ಹೆಚ್ಚು ಸಭೆ ಹಾಗೂ ಚರ್ಚೆ ನಡೆಸಲು ಸಾಧ್ಯವಾಗಿಲ್ಲ; ಹಾಗಾಗಿ ಪ್ರಸಕ್ತ ಸಲಹಾ ಸಮಿತಿಯ ಅವಧಿಯನ್ನು ಇನ್ನೂ 2 ವರ್ಷ ಮುಂದುವರಿಸಬೇಕೆಂದು ಸಲಹೆ
ಮಾಡಿದರು.
ಇದನ್ನೂ ಓದಿ:ದಲಿತರ ರಕ್ಷಣೆಗೆ ಸರಕಾರ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು- ಕಬಕ ಪುತ್ತೂರು ರೈಲಿನ ಸಂಚಾರವನ್ನು ಸುಬ್ರಹ್ಮಣ್ಯ ತನಕ ವಿಸ್ತರಿಸುವುದು, ಬೆಂಗಳೂರು- ಕಣ್ಣೂರು ಎಕ್ಸ್‌ಪ್ರೆಸ್ ರೈಲು ಮಂಗಳೂರು ಜಂಕ್ಷನ್ ತಲಪುವ ವೇಳೆಯನ್ನು ಪರಿಷ್ಕರಿಸುವುದು, ಚೆರುವತ್ತೂರು- ಮಂಗಳೂರು ಪ್ಯಾಸೆಂಜರ್ ರೈಲಿನ ಸಂಚಾರ ಪುನರಾರಂಭ ಮಾಡುವುದು, ವಿಜಯಪುರ- ಮಂಗಳೂರು ಜಂಕ್ಷನ್ ರೈಲನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸುವುದು, ಮುಂಬಯಿ- ಮಂಗಳೂರು ಮತ್ಸéಗಂಧಾ ಎಕ್ಸ್‌ಪ್ರೆಸ್ ರೈಲಿಗೆ ಮಂಗಳೂರು ಜಂಕ್ಷನ್‌ನಲ್ಲಿ ನಿಲುಗಡೆ ಕೊಡುವುದು, ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಎಲೆಕ್ಟ್ರಾನಿಕ್ ವ್ಯವಸ್ಥೆಯಲ್ಲಿ ಟಿಕೆಟ್ ಮಾಡಲು ಅವಕಾಶ ಮತ್ತಿತರ ಬೇಡಿಕೆಗಳನ್ನು ಹನುಮಂತ ಕಾಮತ್ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.