ಬಹುನಿರೀಕ್ಷಿತ ಮಂಗಳೂರು ವೀಕೆಂಡ್ ಸ್ಟ್ರೀಟ್ ಫೆಸ್ಟಿವಲ್ ಆಯೋಜನೆ ವಿಳಂಬ,ಚುನಾವಣೆಯೂ ಅಡ್ಡಿ
ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಪ್ರೋತ್ಸಾಹಿಸುವ ಉದ್ದೇಶ
Team Udayavani, Feb 27, 2023, 10:53 AM IST
ಮಂಗಳೂರು: ಕೋವಿಡ್ ಅನಂತರದ ದಿನಗಳಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಮತ್ತು ಜಿಲ್ಲೆಯ ವ್ಯಾಪಾರ ವಹಿವಾಟನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಲು ಉದ್ದೇಶಿಸಿದ್ದ ಬಹುನಿರೀಕ್ಷಿತ ವೀಕೆಂಡ್ ಸ್ಟ್ರೀಟ್ ಫೆಸ್ಟಿವಲ್ ಮತ್ತಷ್ಟು ವಿಳಂಬವಾಗಲಿದೆ. ಹಿಂದಿನ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಭಾಗವಾಗಿ ನಗರದ ಹಂಪನಕಟ್ಟೆ ಕ್ಲಾಕ್‌ಟವರ್ ಬಳಿ ಯಿಂದ ಎ.ಬಿ.ಶೆಟ್ಟಿ ವೃತ್ತದ ವರೆಗಿನ ಲೂಪ್ ರಸ್ತೆ (ಏಕಮುಖ ರಸ್ತೆ)ಯ ಎರಡೂ ಬದಿಯಲ್ಲಿ ವಾರಾಂತ್ಯದಲ್ಲಿ ಸ್ಟ್ರೀಟ್ ಫೆಸ್ಟಿವಲ್ ಆಯೋಜನೆಗೆ ಉದ್ದೇಶಿಸಿದ್ದರು. ಆಹಾರ ಮಳಿಗೆಗಳು, ಕರಕುಶಲ ವಸ್ತುಗಳ ಮಾರಾಟ, ಮಕ್ಕಳಿಗೆ ಮನರಂಜನೆ ಹೀಗೆ ಒಂದು ಸಂತೆಯ ಮಾದರಿಯಲ್ಲಿ ಸ್ಟ್ರೀಟ್ ಫೆಸ್ಟಿವಲ್ ಆಯೋಜಿ ಸುವುದು ಉದ್ದೇಶವಾಗಿತ್ತು.
ಈ ಕುರಿತು ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯಲ್ಲೂ ಚರ್ಚೆಯಾಗಿ ಕೆಲವೊಂದು ಸಲಹೆ ಸೂಚನೆ ಮೂಲಕ ಯೋಜನೆ ಸಿದ್ಧವಾಗಿತ್ತು. ಆದರಂತೆ ಕದ್ರಿ ಪಾರ್ಕ್‌ನ ನೂತನ ಸ್ಮಾರ್ಟ್ ರಸ್ತೆ, ಕ್ಲಾಕ್ ಟವರ್ ಲೂಪ್ ರಸ್ತೆ ಈ ಎರಡೂ ಕಡೆಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಒಂದು ವಾರ ಕದ್ರಿಯಲ್ಲಿ ಆಯೋಜನೆಗೊಂಡರೆ ಇನ್ನೊಂದು ವಾರ ಕ್ಲಾಕ್ ಟವರ್ ಈ ರೀತಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿತ್ತು. ಆದರೆ ಅನಂತರದ ಅನುಷ್ಠಾನದಲ್ಲಿ ವಿಳಂಬವಾಗಿದ್ದು, ಜಿಲ್ಲಾಧಿಕಾರಿಯವರೂ ವರ್ಗಾವಣೆಗೊಂಡರು.
ಚುನಾವಣೆ ಹಿನ್ನೆಲೆ ಸದ್ಯ ಅಸಾಧ್ಯ
ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿ ಯಿಂದ ಪ್ರತಿವರ್ಷ ಜಿಲ್ಲಾಡಳಿತ ವತಿಯಿಂದ ಆಯೋಜನೆಗೊಳ್ಳುತ್ತಿದ್ದ ಕರಾವಳಿ ಉತ್ಸವ- ಬೀಚ್ ಉತ್ಸವ ಈ ಬಾರಿಯೂ ಆಯೋಜನೆಗೊಂಡಿಲ್ಲ. ವೀಕೆಂಡ್ ಸ್ಟ್ರೀಟ್ ಫೆಸ್ಟಿವಲ್ ಆಯೋಜನೆ ಮೂಲ ಕವಾದರೂ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿ
ಸಲಾಗಿತ್ತಾದರೂ ಅದೂ ಸಾಧ್ಯವಾಗಿಲ್ಲ. ನೂತನ ಜಿಲ್ಲಾಧಿಕಾರಿಯವರು ಈ ನಿಟ್ಟಿನಲ್ಲಿ ಉತ್ಸುಕತೆ ತೋರಿಸಿದ್ದರು. ಆದರೆ ಇನ್ನು ಕೆಲವೇ ದಿನಗಳಲ್ಲಿ ನೀತಿ ಸಂಹಿತೆ ಜಾರಿ ಯಾಗುವುದರಿಂದ ಮತ್ತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಈಗಾಗಲೇ ನೀತಿ ಸಂಹಿತೆಗೆ ಒಳಪಟ್ಟಿರುವುದರಿಂದ ಆಯೋಜನೆ ದೂರದ ಮಾತು. ಚುನಾವಣೆ ಮುಗಿಯುತ್ತಲೇ ಮುಂಗಾರು ಆರಂಭವಾಗಲಿದ್ದು, ಮಳೆ ನಿಂತ ಬಳಿಕ ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ಆಯೋಜನೆ ನಿರ್ಧಾರವಾಗಲಿದೆ.
ಸ್ಟ್ರೀಟ್ ಫೆಸ್ಟಿವಲ್ ಆಯೋಜನೆಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಉದ್ದೇಶಿಸಿದೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಸದ್ಯ ಆಯೋಜನೆ ಕಷ್ಟ. ಚುನಾವಣೆ ನಂತರದಲ್ಲಿ ಮಳೆಗಾಲ ಆರಂಭವಾಗುವುದರಿಂದ ಮಳೆಗಾಲ ಮುಗಿದ ಬಳಿಕ ಆಯೋಜಿಸುವ ಚಿಂತನೆಯಿದೆ.
-ಮಾಣಿಕ್ಯ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ
ವಿದೇಶಗಳಲ್ಲಿ ಹೆಚ್ಚು ಪ್ರಸಿದ್ಧಿ
ಸ್ಟ್ರೀಟ್ ಫೆಸ್ಟಿವಲ್ ಪರಿಕಲ್ಪನೆ ವಿದೇಶಗಳಲ್ಲಿ ಹೆಚ್ಚು ಪ್ರಸಿದ್ಧವಾಗಿದೆ. ಭಾರತದ ಕೆಲವು ನಗರಗಳಲ್ಲೂ ಇತ್ತೀಚಿನ ದಿನಗಳಲ್ಲಿ ವಿವಿಧ ಮಾದರಿಗಳಲ್ಲಿ ಸ್ಟ್ರೀಟ್ ಫೆಸ್ಟಿವಲ್‌ನಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಂಗಳೂರಿಗೆ ಹೊಸದಾಗಿರುವ ಈ ಕಾರ್ಯಕ್ರಮ ಪ್ರತಿ ವಾರಾಂತ್ಯ ಆಯೋಜನೆಗೊಳ್ಳಬೇಕಾದ ಅಗತ್ಯವಿದೆ. ಈಗಾಲೇ ಹೊಟೇಲ್ ಮಾಲಕರ ಸಂಘ ಸಹಿತ, ವಿವಿಧ ಸಂಘ – ಸಂಸ್ಥೆಗಳು ಸ್ಟ್ರೀಟ್ ಫೆಸ್ಟಿವಲ್‌ನಲ್ಲಿ ಭಾಗವಹಿಸಲು ಉತ್ಸುಕತೆ ತೋರಿಸಿವೆ ಎನ್ನುತ್ತಾರೆ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.