ಸಂಸದ ಬಿ.ಎನ್.ಬಚ್ಚೇಗೌಡ ಉತ್ತರಾಧಿಕಾರಿಗೆ BJP ಯಲ್ಲಿ ತಲಾಷ್!
Team Udayavani, Aug 28, 2023, 12:27 AM IST
2019ರಲ್ಲಿ ಗೆದ್ದಿದ್ದ ಬಚ್ಚೇಗೌಡರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳ ಹುಡುಕಾಟದಲ್ಲಿವೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಲಿ ಸಂಸದರಾದ ಬಿ.ಎನ್.ಬಚ್ಚೇಗೌಡ ಚುನಾವಣ ರಾಜಕಾರಣದಿಂದ ದೂರ ಉಳಿಯುವ ಮಾತುಗಳನ್ನಾಡಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ವಯಸ್ಸು 80 ದಾಟಿರುವುದು, ಪುತ್ರ ಹೊಸಕೋಟೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಕಾಂಗ್ರೆಸ್‌ನಲ್ಲಿ ಭದ್ರ ನೆಲೆ ಕಂಡುಕೊಳ್ಳುತ್ತಿರುವುದು.
ಒಂದು ಕಾಲಕ್ಕೆ ಕಟ್ಟಾ ಜನತಾ ಪರಿವಾರದ ಹಿರಿಯ ನಾಯಕರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಪ್ತ ವಲಯದಲ್ಲಿದ್ದ ಬಚ್ಚೇಗೌಡ ತಮ್ಮ ರಾಜಕೀಯ ಜೀವನವನ್ನು ಬಿಜೆಪಿ ಮೂಲಕ ಅಂತ್ಯಗೊಳಿಸುತ್ತಿರುವುದು ವಿಶೇಷ.
ಹೊಸಕೋಟೆ ಕ್ಷೇತ್ರದಲ್ಲಿ ಸ್ಪರ್ಧಿಸಿ 5 ಬಾರಿ ಗೆದ್ದು 3 ಬಾರಿ ಸೋತಿದ್ದ ಬಚ್ಚೇಗೌಡ 2013ರಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ಸೋತ ಅನಂತರ ಮತ್ತೆ ರಾಜಕಿಯವಾಗಿ ಪುನರ್ ಜನ್ಮಕೊಟ್ಟಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ. 2014ರಲ್ಲಿ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದರೂ ಜನ ಕೈ ಹಿಡಿಯಲಿಲ್ಲ. 2ನೇ ಬಾರಿಗೆ 2019ರಲ್ಲಿ ಸ್ಪರ್ಧಿಸಿ ಮೋದಿ ಅಲೆಯಲ್ಲಿ ಸಂಸತ್‌ಗೆ ಆಯ್ಕೆಗೊಳ್ಳುವ ಮೂಲಕ ಕಾಂಗ್ರೆಸ್ ಭದ್ರಕೋಟೆಯಲ್ಲಿ ಮೊದಲ ಬಾರಿ ಕಮಲ ಅರಳಿಸಿದ ಖ್ಯಾತಿ ಬಿ.ಎನ್.ಬಚ್ಚೇಗೌಡರದು.
ಸದ್ಯ ಬಚ್ಚೇಗೌಡರು ಚುನಾವಣ ರಾಜಕಾರಣದಿಂದ ದೂರ ಸರಿಯುತ್ತಿರುವುದು ಬಿಜೆಪಿಗೆ ಹೊಸ ಅಭ್ಯರ್ಥಿ ಹುಡುಕಾಡಬೇಕಾದ ತಲೆ ಬಿಸಿ ಶುರುವಾಗಿದೆ. ಆ ಮೂಲಕ ಬಿಜೆಪಿಗೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ಬಚ್ಚೇಗೌಡಗೆ ವಯಸ್ಸಿನ ಕಾರಣಕ್ಕೆ ಬಿಜೆಪಿಯಲ್ಲಿದ್ದರೂ ಟಿಕೆಟ್ ಸಿಗುವ ಖಾತ್ರಿ ಇರಲಿಲ್ಲ. ಜತೆಗೆ ತಮ್ಮ ಪುತ್ರ ಶರತ್‌ಬಚ್ಚೇಗೌಡ ಕಾಂಗ್ರೆಸ್ ಸೇರಿ ಶಾಸಕರಾಗಿರುವುದರಿಂದ ತಂದೆ ಬಿಜೆಪಿ, ಮಗ ಕಾಂಗ್ರೆಸ್ ಎನ್ನುವ ಅಪಹಾಸ್ಯಕ್ಕೆ ಒಳಗಬಾರದೆಂದು ಬಚ್ಚೇಗೌಡರು ಬಿಜೆಪಿ ತೊರೆಯುವ ಮಾತುಗಳನ್ನಾಡದೇ ಚುನಾವಣ ರಾಜಕಾರಣದಿಂದ ದೂರ ಇರುವುದಾಗಿ ಜಾಣ್ಮೆಯಿಂದ ಹೇಳಿದ್ದಾರೆ.
ಸಂಸದ ಬಚ್ಚೇಗೌಡರ ಉತ್ತರಾಧಿಕಾರಿ ಯಾರೆಂಬ ಪ್ರಶ್ನೆಗೆ ಬಿಜೆಪಿ ವಲಯದಲ್ಲಿ ಸದ್ಯಕ್ಕೆ ಉತ್ತರ ಇಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಚ್ಚರಿ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಸೋತ ಮಾಜಿ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಲೋಕಸಭೆಗೆ ಟಿಕೆಟ್ ಕೇಳಿದ್ದಾರೆ. ಜತೆಗೆ ಇದೇ ಕ್ಷೇತ್ರಕ್ಕೆ ಒಳಪಡುವ ಯಲಹಂಕ ಶಾಸಕ ಎಸ್.ಎಸ್.ವಿಶ್ವನಾಥ್ ತಮ್ಮ ಪುತ್ರನಿಗೆ ಟಿಕೆಟ್ ಬೇಡಿಕೆ ಇಟ್ಟಿದ್ದಾರಂತೆ. ಹೊಸಕೋಟೆ ಎಂಬಿಟಿ ನಾಗರಾಜ್ ಬಿಜೆಪಿ ಟಿಕೆಟ್ ಕೇಳಿದ್ದಾರೆ ಎನ್ನುವ ಮಾಹಿತಿ ಇದೆ. ಇನ್ನೂ ಕಾಂಗ್ರೆಸ್‌ನಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವಂತೆ 2 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ವೀರಪ್ಪ ಮೊಲಿ ಮತ್ತೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೌರಿಬಿದನೂರಲ್ಲಿ 5 ಬಾರಿ ಗೆದ್ದು 6ನೇ ಬಾರಿ ಸೋತಿರುವ ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಮಗೆ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ವಿಧಾನ ಪರಿಷತ್ತು ಸದಸ್ಯ ಎಂ.ಆರ್.ಸೀತಾರಾಮ್ ಪುತ್ರ ರಕ್ಷಾ ರಾಮಯ್ಯ ಕೂಡ ಕಾಂಗ್ರೆಸ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.