MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Team Udayavani, Nov 9, 2024, 1:58 AM IST
ಬೆಂಗಳೂರು: ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದು, ಆರೋಪಿ ಸ್ಥಾನದಲ್ಲಿ ನಿಂತಿರುವ ಅವರು ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಯಾಗಿ ಮುಂದುವರಿಯುತ್ತೇನೆಂದು ಹೇಳುವ ಮೂಲಕ ಶಾಸಕರಿಗೆ ವಿಶ್ವಾಸ ತುಂಬುವ ಪ್ರಯತ್ನ ವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಅವರು ಯಾವಾಗ ರಾಜೀನಾಮೆ ಕೊಡುತ್ತಾರೆಂಬುದು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಗೊತ್ತಿದೆ ಎಂದರು.
ಶಿಗ್ಗಾಂವಿಯಲ್ಲಿ ಬಿಜೆಪಿ ಗೆದ್ದಾಗಿದೆ ಎಂಬ ವಾತಾ ವರಣ ಸೃಷ್ಟಿಯಾಗಿದೆ. ಚನ್ನಪಟ್ಟಣ, ಸಂಡೂರಿನಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಸಿದ್ದರಾಮಯ್ಯನವರಿದ್ದರು. ಆದರೆ ಈಗ ಚನ್ನಪಟ್ಟಣ ಕೈಜಾರಿ ಹೋಗುತ್ತಿದೆ ಎಂದು ಕಾಂಗ್ರೆಸ್ನವರಿಗೆ ಅರ್ಥವಾಗುತ್ತಿದೆ. ಸಂಡೂರು, ಚನ್ನಪಟ್ಟಣದಲ್ಲಿ ಬಿಜೆಪಿ ಕೈ ಮೇಲಾಗುತ್ತಿರುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಖುದ್ದು ಸಿಎಂ ಸಂಡೂರು ಕಡೆ ಗಮನ ಕೊಟ್ಟಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.