ಮುದ್ದೇಬಿಹಾಳ: ದಾಖಲೆ ಇಲ್ಲದ 10 ಲಕ್ಷ ರೂ.ವಶಕ್ಕೆ
Team Udayavani, Mar 24, 2023, 10:20 PM IST
ಮುದ್ದೇಬಿಹಾಳ: ದಾಖಲೆ ಇಲ್ಲದೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ ನಗದವನ್ನು ಪೊಲೀಸರು ವಶಪಡಿಸಿಕೊಂಡು ಕೋರ್ಟ ವಶಕ್ಕೆ ಒಪ್ಪಿಸಿದ ಘಟನೆ ತಂಗಡಗಿ ಗ್ರಾಮದ ಹೊರವಲಯದಲ್ಲಿರುವ ಕೃಷ್ಣಾ ನದಿಯ ನೀಲಮ್ಮನ ಸೇತುವೆ ಹತ್ತಿರ ಹಾಕಲಾದ ಪೊಲೀಸ್ ಚಕ್ ಪೋಸ್ಟ್ ನಲ್ಲಿ ಶುಕ್ರವಾರ ನಡೆದಿದೆ.
ಗಜೇಂದ್ರಗಡ ಸಾರಿಗೆ ಘಟಕಕ್ಕೆ ಸೇರಿದ ಗಜೇಂದ್ರಗಡ- ಮುದ್ದೇಬಿಹಾಳ ಬಸ್ಸು ಮುದ್ದೇಬಿಹಾಳದಿಂದ ತಂಗಡಗಿ, ಧನ್ನೂರ, ಹುನಗುಂದ ಮಾರ್ಗವಾಗಿ ಗಜೇಂದ್ರಗಡಕ್ಕೆ ಹೋಗುತ್ತಿತ್ತು. ಚಕ್ ಪೋಸ್ಟ್ ನಲ್ಲಿದ್ದ ಪೊಲೀಸರು ಎಲ್ಲ ವಾಹನಗಳನ್ನು ತಪಾಸಣೆ ನಡೆಸಿದಂತೆ ಬಸ್ಸಿನಲ್ಲಿರುವ ಪ್ರಯಾಣಿಕರನ್ನೂ ಸಹಿತ ತಪಾಸಣೆ ನಡೆಸಿದ್ದಾರೆ. ಆಗ ಸ್ಟಾರ್ ಗುಟ್ಕಾ ಚೀಲದ ಬಟ್ಟೆಯ ಬ್ಯಾಗ್ನಲ್ಲಿ 500, 200 ಮತ್ತು 50 ಮುಖಬೆಲೆಯ 10 ಲಕ್ಷ ನಗದು ಇದ್ದದ್ದು ಪತ್ತೆ ಆಗಿದೆ.
ಈ ವೇಳೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಮುದ್ದೇಬಿಹಾಳದ ಸಹಕಾರಿ ಬ್ಯಾಂಕ್ ಮ್ಯಾನೇಜರ್ ಬಸಪ್ಪ ನಿಂಗಪ್ಪ ಹಡಗಲಿ ಅವರನ್ನು ವಿಚಾರಣೆ ನಡೆಸಿದಾಗ ಬ್ಯಾಂಕ್ನಿಂದ ಬ್ಯಾಂಕ್ ಗೆ ವರ್ಗಾವಣೆ ಮಾಡಲು ಒಯ್ಯುತ್ತಿರುವುದಾಗಿ ತಿಳಿಸಿದ್ದಾರೆ. ಹಣ ಸಾಗಿಸುತ್ತಿದ್ದ ವ್ಯಕ್ತಿ ಮುದ್ದೇಬಿಹಾಳದಿಂದ ಧನ್ನೂರವರೆಗೆ ಬಸ್ ಟಿಕೆಟ್ ತೆಗೆದುಕೊಂಡಿದ್ದರು. ಆದರೆ ಹಣಕ್ಕೆ ಇವರ ಹತ್ತಿರ ಯಾವುದೇ ದಾಖಲೆ ಇರಲಿಲ್ಲ. ಇದರಿಂದ ಸಂಶಯಗೊಂಡ ಪೊಲೀಸ್ ಅಧಿಕಾರಿಗಳು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಹಣವನ್ನು ವಶಪಡಿಸಿಕೊಂಡು ಎಫ್ಐಆರ್ ಹಾಕಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಮ್ಯಾನೇಜರ್ ಹಡಗಲಿ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಆರೀಫ ಮುಷಾಪುರಿ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಘಟನೆಯಿಂದ ಜಾಗೃತರಾಗಿರುವ ಪೊಲೀಸರು ತಾಲೂಕಿನ ಆಯಕಟ್ಟಿನ ಸ್ಥಳಗಳಲ್ಲಿ ಹಾಕಿರುವ ಚಕ್ಪೋಸ್ಟ್ಗಳಲ್ಲಿ ಜಾಗೃತರಾಗಿ ಪ್ರತಿಯೊಂದು ವಾಹನ, ಬಸ್ ಪರಿಶೀಲಿಸತೊಡಗಿದ್ದಾರೆ. ತಾಲೂಕಿನಲ್ಲಿ ಈ ರೀತಿ ನಗದು ಸಿಕ್ಕ ಮೊದಲ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.