ಮುದ್ದೇಬಿಹಾಳ: ಶಿವಾಜಿ ಜಯಂತಿ ಮೆರವಣಿಗೆಯಲ್ಲಿ ಹುಚ್ಚು ನಾಯಿ ದಾಳಿ
Team Udayavani, Feb 19, 2023, 2:35 PM IST
ಮುದ್ದೇಬಿಹಾಳ: ಪಟ್ಟಣದಲ್ಲಿ ಫೆ. 19 ರಂದು ನಡೆದ ಛತ್ರಪತಿ ಶಿವಾಜಿ ಮೆರವಣಿಗೆ ಸಂದರ್ಭ ಹುಚ್ಚು ನಾಯಿಯೊಂದು ಮೆರವಣಿಗೆಯಲ್ಲಿದ್ದವರ ಮೇಲೆ ದಾಳಿ ನಡೆಸಿದ್ದು 20-25 ಜನ ಗಾಯಗೊಂಡಿದ್ದಾರೆ.
ಮೆರವಣಿಗೆಯನ್ನು ಹಳೆ ತಹಸೀಲ್ದಾರ್ ಕಚೇರಿಯಿಂದಲೇ ಹಿಂಬಾಲಿಸಿಕೊಂಡು ಬಂದ ನಾಯಿ ಬಸವೇಶ್ವರ ವೃತ್ತಕ್ಕೆ ಬರುತ್ತಿದ್ದಂತೆಯೇ ಹುಚ್ಚು ಕೆರಳಿ ಸಿಕ್ಕಸಿಕ್ಕವರ ಕಾಲನ್ನು ಕಚ್ಚಿದೆ.
ಮೆರವಣಿಗೆಯಲ್ಲಿ ಡಿಜೆ ಸೌಂಡಿಗೆ ಕುಣಿಯುತ್ತಿದ್ದ ಹುಡುಗನೊಬ್ಬನ ಮೇಲೆ ತೀವ್ರ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡವರೆಲ್ಲ ಸ್ಥಳೀಯ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಎಲ್ಲರಿಗೂ ರೇಬಿಸ್ ಗೆ ನೀಡುವ ಇಂಜೆಕ್ಷನ್, ಮಾತ್ರೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಧ್ಯ ನಾಪತ್ತೆಯಾಗಿರುವ ಹುಚ್ಚು ನಾಯಿಗಾಗಿ ಜನ ಹುಡುಕಾಟ ನಡೆಸುತ್ತಿದ್ದಾರೆ. ನಾಯಿ ಸಿಗುವವರೆಗೂ ಸಾರ್ವಜನಿಕರು ಮಕ್ಕಳನ್ನು ಬೀದಿಗೆ ಬಿಡದಂತೆ, ತಾವೂ ಜಾಗೃತರಾಗಿರುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.