ತುರ್ತು ರಕ್ಷಣಾ ಕಾರ್ಯಕ್ಕೆ ಮಲ್ಟಿರೋಲ್ ಹೆಲಿಕಾಪ್ಟರ್‌!

ಎಚ್‌ಎಎಲ್‌ ಜತೆ ಒಪ್ಪಂದ ಸಾಧ್ಯತೆ ; ಗುತ್ತಿಗೆ, ನಿರ್ವಹಣೆಯ ಖರ್ಚು ವೆಚ್ಚಗಳ ಬಗ್ಗೆ ಸಮಾಲೋಚನೆ

Team Udayavani, Jun 28, 2019, 5:38 AM IST

Ban28061906Medn

ಬೆಂಗಳೂರು: ರಾಜ್ಯದಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪ, ಅಗ್ನಿ ಅವಘಡ ಹಾಗೂ ಕಟ್ಟಡ ಕುಸಿತದಂತಹ ತುರ್ತು ಸಂದರ್ಭದಲ್ಲಿ ತ್ವರಿತ ಕಾರ್ಯಾಚರಣೆ ಹಾಗೂ ಸಿಬ್ಬಂದಿ ಕರೆದೊಯ್ಯಲು ಮಲ್ಟಿರೋಲ್ ಹೆಲಿಕಾಪ್ಟರ್‌ ಬಳಕೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮುಂದಾಗಿದೆ.

ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್ಎಎಲ್)ನಿಂದ ಮಲ್ಟಿರೋಲ್(ಬಹುಪಯೋಗಿ) ಹೆಲಿಕಾಪ್ಟರ್‌ ಅನ್ನು ಗುತ್ತಿಗೆ ಅಥವಾ ಬಾಡಿಗೆ ರೂಪದಲ್ಲಿ ಪಡೆಯುವ ಪ್ರಸ್ತಾವನೆಗೆ ಇದೀಗ ಚಾಲನೆ ಸಿಕ್ಕಿದೆ.

ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿಗಳ ಜತೆ ನಾಲ್ಕೈದು ಬಾರಿ ಚರ್ಚೆ ನಡೆಸಿದ್ದು, ಎಚ್ಎಎಲ್ ಜತೆ ಒಪ್ಪಂದ ಮಾಡಿಕೊಳ್ಳಲು ಮೌಖೀಕ ಸೂಚನೆ ಸಿಕ್ಕಿದೆ. ಆದರೆ, ಖರೀದಿ ಮಾಡಲು ಸಾಧ್ಯವಿಲ್ಲ. ಸರ್ಕಾರದಿಂದ ಇಲಾಖೆಗೆ ಬರುವ ಅನುದಾನವನ್ನು ಆಧರಿಸಿ ಹೆಲಿಕಾಪ್ಟರ್‌ ಅನ್ನು ಗುತ್ತಿಗೆ ರೂಪದಲ್ಲಿ ಪಡೆಯಬೇಕೋ ಅಥವಾ ಬಾಡಿಗೆ ಆಧಾರದಲ್ಲಿ ಪಡೆಯಬೇಕೋ ಎಂಬ ಬಗ್ಗೆ ಲೆಕ್ಕಾಚಾರದ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಹೀಗಾಗಿ ಎಚ್ಎಎಲ್ನ ಹಿರಿಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಸದ್ಯದಲ್ಲೇ ರಾಜ್ಯದಲ್ಲೂ ವಿದೇಶಿ ಮಾದರಿಯಲ್ಲಿ ತುರ್ತು ಸಂದರ್ಭದಲ್ಲಿ ಹೆಲಿಕಾಪ್ಟರ್‌ ಮೂಲಕ ರಕ್ಷಣಾ ಕಾರ್ಯಚರಣೆ ನಡೆಯಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ವಿದೇಶಗಳಲ್ಲಿ ತುರ್ತು ಸೇವೆಗಳ ಇಲಾಖೆಗಳು ಸ್ವಂತ ಹೆಲಿಕಾಪ್ಟ್ರ್‌ಗಳನ್ನು ಹೊಂದಿದ್ದು, ಕ್ಷಣಾರ್ಧದಲ್ಲಿ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ರಕ್ಷಣಾ ಕಾರ್ಯ ಮಾಡಬಹುದು. ಈ ಎಲ್ಲ ವಿಚಾರ ಗಮನದಲ್ಲಿಟ್ಟುಕೊಂಡು ಹೆಲಿಕಾಪ್ಟರ್‌ ಗುತ್ತಿಗೆ ಪಡೆಯಲು ನಿರ್ಧರಿಸಲಾಗಿದೆ. ಈಗಾಗಲೇ ಎರಡು ಬಾರಿ ಎಚ್ಎಎಲ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಹೆಲಿಕಾಪ್ಟರ್‌ ಗುತ್ತಿಗೆ ಹಾಗೂ ಅದರ ನಿರ್ವಹಣೆಯ ಖರ್ಚುವೆಚ್ಚಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಉಪಯೋಗ ಏನು?
ಹೆಲಿಕಾಪ್ಟರ್‌ ಗುತ್ತಿಗೆ ಅಥವಾ ಬಾಡಿಗೆ ಪಡೆಯುವುದರಿಂದ ಹತ್ತಾರು ಪ್ರಯೋಜನಗಳಿವೆ. ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದಾಗ ಹೆಲಿಕಾಪ್ಟರ್‌ನಿಂದ ಮೇಲಿಂದಲೇ ಸಿಬ್ಬಂದಿ ಮತ್ತು ನೀರು ಕೊಂಡೊಯ್ಯಬಹುದು. ಎತ್ತರ ಪ್ರದೇಶದಿಂದ ಹೆಲಿಕಾಪ್ಟರ್‌ ಮೂಲಕ ರಕ್ಷಣೆ ಮಾಡಬಹುದು. ಬೇಸಿಗೆಯಲ್ಲಿ ಅರಣ್ಯಪ್ರದೇಶದಲ್ಲಿ ಸಂಭವಿಸುವ ಕಾಡ್ಗಿಚ್ಚು ನಿಯಂತ್ರಿಸಲು ಹೆಲಿಕಾಪ್ಟರ್‌ ಮೂಲಕವೇ ನೀರು ಹಾಕಬಹುದು. ನಷ್ಟದ ಪ್ರಮಾಣ ತಿಳಿಯಲು ವೈಮಾನಿಕ ಸರ್ವೇ, ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ರಕ್ಷಣಾ ಇಲಾಖೆ ಅನುಮತಿ ಪಡೆಯುವ ಅನಿವಾರ್ಯ ತಪ್ಪಲಿದೆ. ಮಳೆಗಾಲದಲ್ಲಿ ಉಂಟಾಗುವ ಪ್ರವಾಹದ ವೈಮಾನಿಕ ಸರ್ವೇ ಹಾಗೂ ತಗ್ಗು ಪ್ರದೇಶದಿಂದ ಸುರಕ್ಷಿತ ಪ್ರದೇಶಕ್ಕೆ ಜನರ ಸ್ಥಳಾಂತರ, ದೊಡ್ಡ ಮಟ್ಟದಲ್ಲಿ ಪೊಲೀಸ್‌ ಬಂದೋಬಸ್ತ್ ನಿಯೋಜನೆಗೆ ಸಿಬ್ಬಂದಿ ಕರೆದುಕೊಂಡು ಹೋಗಲು, ವೈದ್ಯಕೀಯ ನೆರವು ಹೀಗೆ ಬಹುಪಯೋಗಿಯಾಗಿ ಹೆಲಿಕಾಪ್ಟರ್‌ ಬಳಕೆಯಾಗಲಿದೆ.

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.