ಬರ್ತ್ ಡೇ ಸಂಭ್ರಮದಲ್ಲಿ ಕಾಲು ತಾಗಿತೆಂದು ಸ್ನೇಹಿತನನ್ನೇ ಕೊಂದರು
Team Udayavani, Sep 30, 2019, 3:52 PM IST
ಬೆಳಗಾವಿ: ಬರ್ತ್ ಡೇ ಸೆಲೆಬ್ರೇಷನ್ ಮುಗಿಸಿ ಡ್ಯಾನ್ಸ್ ಮಾಡುತ್ತಿದ್ದಾಗ ಕಾಲು ತಾಗಿತೆಂಬ ಸಿಟ್ಟಿನಿಂದ ಮೂವರು ಸೇರಿ ಸ್ನೇಹಿತನ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ನಗರದ ಆರ್ಟಿಒ ವೃತ್ತದ ಬಳಿಯ ಲಾಡ್ಜ್ ನಲ್ಲಿ ನಡೆದಿದೆ.
ಮೂಲತಃ ಗೋಕಾಕ ತಾಲೂಕಿನ ಘಟಪ್ರಭಾದ ವಿನಾಯಕ ಚಂದ್ರಕಾಂತ ರಾಯಬಾಗಕರ(ಕಲಾಲ) (21) ಎಂಬ ಯುವಕನನ್ನು ಕೊಲೆ ಮಾಡಲಾಗಿದೆ.
ಆರ್ಟಿಒ ವೃತ್ತದ ಬಳಿ ಇರುವ ಸಾಯಿ ಲಾಡ್ಜ್ ನಲ್ಲಿ ನಾಲ್ವರು ಕೆಲಸ ಮಾಡುತ್ತಿದ್ದರು. ಶಶಿಧರ ಎಂಬಾತನ ರವಿವಾರ ರಾತ್ರಿ ಜನ್ಮದಿನ ಇತ್ತು. ಪಾರ್ಟಿ ಮಾಡಿ, ಕುಡಿದ ಮತ್ತಿನಲ್ಲಿ ನಾಲ್ವರೂ ಡ್ಯಾನ್ಸ್ ಮಾಡುತ್ತಿದ್ದರು. ಆಗ ವಿನಾಯಕನ ಕಾಲು ಮತ್ತೊಬ್ಬ ಸ್ನೇಹಿತನಿಗೆ ತಾಗಿದೆ. ಆಗ ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ. ಉಡುಪಿಯ ನವೀನ, ಶಿವಾಜಿ ನಗರದ ಅಮೀತ್ ಹಾಗೂ ಶಶಿಧರ ಸೇರಿ ಸುಮಾರು 1.30ರ ಸುಮಾರಿಗೆ ಬಾಟಲಿಯಿಂದ ಹೊಡೆದಿದ್ದಾರೆ. ಶೌಚಾಲಯದಲ್ಲಿಯೇ ವಿನಾಯಕ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ.
ಸೋಮವಾರ ಬೆಳಗ್ಗೆ ಎಂದಿನಂತೆ ಲಾಡ್ಜ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಮಾಲೀಕನ ಮಗ ಬಂದು ವಿನಾಯಕನ ಬಗ್ಗೆ ವಿಚಾರಿಸಿದ್ದಾರೆ. ಆಗ ಅಮಿತ ಹಾಗೂ ನವೀನ ಯಾರಿಗೂ ಗೊತ್ತಿಲ್ಲದಂತೆ ನಾಟಕವಾಡಿದ್ದಾರೆ. ಸಂಶಯ ಬಂದು ಶೌಚಾಲಯ ತೆರೆದು ನೋಡಿದಾಗ ಮೃತಯದೇಹ ಬಿದ್ದಿರುವುದು ಗೊತ್ತಾಗಿದೆ. ಮಾರ್ಕೆಟ್ ಎಸಿಪಿ ಎನ್.ವಿ. ಭರಮಣಿ, ಇನ್ಸಪೆಕ್ಟರ್ ವಿಜಯ ಮುರಗುಂಡಿ ಭೇಟಿ ನೀಡಿ ಅಮಿತ ಹಾಗೂ ನವೀನನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.