ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರಿಗೆ ಯಾವುದೇ ಧಕ್ಕೆ ಇಲ್ಲ
Team Udayavani, Dec 15, 2019, 3:06 AM IST
ರಾಯಚೂರು: ಸಂಸತ್‌ನಲ್ಲಿ ಧಾರವಾಡ ಪೇಡೆ ಹಂಚಿದ್ದು ಬೇರೆ ಉದ್ದೇಶಕ್ಕೆ. ಆದರೆ, ಅದು ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಎಂದು ತಿಳಿದು ಕೊಂಡಲ್ಲಿ ನಮ್ಮದೇನೂ ಅಭ್ಯಂತರವಿಲ್ಲ. ಆದರೆ, ಈ ಮಸೂದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರಿಗೆ ಏನು ತೊಂದರೆ ಆಗಲಿದೆ ಎಂಬುದನ್ನು ಯಾರೂ ಸ್ಪಷ್ಟವಾಗಿ ಹೇಳುತ್ತಿಲ್ಲ. ಅದರ ಬದಲಿಗೆ ತಪ್ಪು ಸಂದೇಶ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅನೇಕ ವರ್ಷಗಳ ಹಿಂದೆ ಇಲ್ಲಿಗೆ ಬಂದು ಶರಣಾದವರು ಅರ್ಜಿ ಸಲ್ಲಿಸಿದಲ್ಲಿ ಪೌರತ್ವ ನೀಡುವುದಷ್ಟೇ ಇದರ ಉದ್ದೇಶ. ದೇಶದಲ್ಲಿ 550 ಮುಸ್ಲಿ ಮರು ಕೂಡ ಅರ್ಜಿ ಸಲ್ಲಿಸಿದ್ದು, ಅವರಿಗೂ ಪೌರತ್ವ ನೀಡಲಾಗಿದೆ ಎಂದರು.
ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಲ ರಾಜ ಕೀಯ ಪಕ್ಷಗಳು ಇಂಥ ಅಪಪ್ರಚಾರ ಮಾಡುತ್ತಿವೆ. ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕರು, ಕೇರಳದಲ್ಲಿ ಎಡಪಕ್ಷಗಳ ಮುಖಂ ಡರು ಇಂಥ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಬೂಟಾಟಿಕೆ ರಾಜಕಾರಣಿಗಳನ್ನು ನಂಬಬಾರದು. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ. ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಯಾರೂ ಕೂಡ ಆತಂಕದಿಂದ ಬಾಳುವ ಅಗತ್ಯವಿಲ್ಲ ಎಂದರು.
ರಾಹುಲ್ ಗಾಂಧಿ ಒಬ್ಬ ಪಾರ್ಟ್ ಟೈಂ ರಾಜಕಾರಣಿ. ಮೇಕ್ ಇನ್ ಇಂಡಿಯಾಕ್ಕೂ ರೇಪ್ ಇನ್ ಇಂಡಿಯಾಕ್ಕೂ ಹೋಲಿಕೆ ಮಾಡುವ ಅವರ ಬುದ್ಧಿಮಟ್ಟಕ್ಕೆ ನಾನು ಸಿಂಪತಿ ವ್ಯಕ್ತಪಡಿಸುತ್ತೇನೆ. ಕನಿಷ್ಠ ಬುದ್ಧಿಯೂ ಇಲ್ಲದ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು ಎನ್ನುವುದೇ ದುರಂತ. ಬಹುಶಃ ಅವರು ಇತ್ತೀಚೆಗೆ ವಿದೇಶಗಳಿಗೆ ಹೆಚ್ಚು ಓಡಾಡಿ ಬುದ್ಧಿ ಭ್ರಮಣೆಯಾಗಿದೆ. ಅವರು ಯಾರೋ ಬರೆದುಕೊಟ್ಟಿದ್ದನ್ನು ಓದುವ ರಾಜಕಾರಣಿ.
-ಪ್ರಹ್ಲಾದ ಜೋಶಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.