Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ, ದೇವರ ದರ್ಶನ ವೇಳೆ ಮೊಬೈಲ್ ನಿಷೇಧ: ಮುಖ್ಯಮಂತ್ರಿ
Team Udayavani, Sep 3, 2024, 5:23 PM IST
ಮೈಸೂರು: ನಾಡ ದೇವತೆ ಚಾಮುಂಡೇಶ್ವರಿ (Chamundeshwari) ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸಬೇಕು, ಇದರಲ್ಲಿ ಲೋಪ ಉಂಟಾದರೆ ಸಂಬಂಧಪಟ್ಟವರ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸುವ ಜೊತೆಗೆ ಚಾಮುಂಡೇಶ್ವರಿ ದರ್ಶನ ವೇಳೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಬಳಿಕ ಮಂಗಳವಾರ (ಸೆ.3) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆ ಕಾಪಾಡುವ ಜೊತೆಗೆ ಉನ್ನತೀಕರಿಸಬೇಕಿದೆ. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡುವ ಜೊತೆಗೆ ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದರು.
ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ
ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಮಾಡಿದ್ದೇವೆ. ಹಾಗಿಯೇ ಭಕ್ತಾದಿಗಳಿಗೆ ಸೌಲಭ್ಯ ಒದಗಿಸಲು ಪ್ರಾಧಿಕಾರ ರಚನೆ ಮಾಡಲಾಗಿದ್ದು, ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯುತ್ತ, ಕಾಲ ಕಾಲಕ್ಕೆ ಸಭೆಗಳು ನಡೆಸಿ ಸುತ್ತಲಿನ ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಶ್ರಮ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ಭಕ್ತರ ಸಂಖ್ಯೆ ಹೆಚ್ಚಳದಿಂದ ವಾಹನಗಳ ಸಂಖ್ಯೆಯೂ ಹೆಚ್ಚಾಗಿದ್ದು, ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.ಅಪರಾಧ ತಡೆಗಟ್ಟಲು ಟಾಸ್ಕ್ಫೋರ್ಸ್ ರಚನೆ ಮಾಡುತ್ತೇವೆ. ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉತ್ಕೃಷ್ಟ ದರ್ಜೆಯ ಸವಲತ್ತು, ಸೌಲಭ್ಯಗಳ ಒದಗಿಸುವುದು ನಮ್ಮ ಗುರಿಯಾಗಿರಲಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಕಿ ಯೋಜನೆಗಳ ಪೂರ್ಣಗೊಳಿಸಿ
ಹಿಂದಿನ ಸಮಿತಿ ಕ್ಷೇತ್ರ ಅಭಿವೃದ್ಧಿ ಹಾಗೂ ಭಕ್ತರಿಗೆ ಮೂಲಸೌಕರ್ಯ ಒದಗಿಸುವ ಕೆಲಸ ಮಾಡುತ್ತಿತ್ತು. ಮಹದೇಶ್ವರ ಬೆಟ್ಟದ ರೀತಿ ಚಾಮುಂಡೇಶ್ವರಿ ಕ್ಷೇತ್ರಕ್ಕೂ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಹಾಗೂ ಕ್ಷೇತ್ರಕ್ಕೆ ಸೇರಿದ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರದ ಉದ್ದೇಶವಾಗಿದೆ. ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸುವುದು ಉದ್ದೇಶ. ಈ ಹಿಂದೆ ಬಸ್ ನಿಲ್ದಾಣ , ಪಾರ್ಕಿಂಗ್ ಹಾಗೂ ಸ್ಟಾಲ್‌ಗಳ ನಿರ್ಮಾಣ ಮಾಡಲಾಗಿತ್ತು. ಬಾಕಿಯಿರುವ ಯೋಜನೆಗಳು ಪೂರ್ಣಗೊಳಿಸಲು ಸೂಚನೆ ನೀಡಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ನಾಡಿನ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದೆ.
– ಮುಖ್ಯಮಂತ್ರಿ @siddaramaiah #ಚಾಮುಂಡಿಬೆಟ್ಟ #ಚಾಮುಂಡೇಶ್ವರಿದೇವಿ pic.twitter.com/bf2bR476Ya— CM of Karnataka (@CMofKarnataka) September 3, 2024
ಪ್ರಾಧಿಕಾರದಲ್ಲಿ ಹಣಕ್ಕೆ ಕೊರತೆ ಇಲ್ಲ
ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣ ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ದಾಸೋಹ ಭವನ ಅಭಿವೃದ್ಧಿಗೆ ಶೀಘ್ರದಲ್ಲೇ ಕ್ರಮ ವಹಿಸಿ, ದಾಸೋಹ ಭವನದಲ್ಲಿ ಊಟದ ವ್ಯವಸ್ಥೆ ಸುಧಾರಣೆ ತಂದು ರುಚಿಕರ ಊಟ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರಾಧಿಕಾರದಲ್ಲಿ ದುಡ್ಡಿಗೆ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು. ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರಿಯುವ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಚಾಮುಂಡೇಶ್ವರಿ ದೇವರ ದರ್ಶನ:
ಪ್ರಾಧಿಕಾರದ ಸಭೆಗೂ ಮೊದಲು ಸಿಎಂ ಸಿದ್ದರಾಮಯ್ಯ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.