ಕ್ಷುಲ್ಲಕ ಕಾರಣಕ್ಕೆ ತಂದೆ ಮಗನ ಕೊಲೆ : ಪೊಲೀಸರಿಂದ ಮೂವರು ಆರೋಪಿಗಳ ಸೆರೆ
Team Udayavani, Jan 9, 2021, 12:24 PM IST
ಮೈಸೂರು: ಮನೆ ಮುಂದೆ ಓಡಾಡುವಾಗ ವಿನಾಕಾರಣ ತೊಂದರೆ ಕೊಡುತ್ತಿದ್ದರೆಂದು ಅಪ್ಪ ಮತ್ತು ಮಗನನ್ನು ಕೊಲೆ
ಮಾಡಿದ್ದ ಮೂವರು ಆರೋಪಿಗಳನ್ನು ಮೈಸೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ತಾಲೂಕು ಮಂಡಕಳ್ಳಿ ನಿವಾಸಿ ಲೇ. ಹೆಬ್ಟಾಳೇಗೌಡ ಎಂಬವರ ಪುತ್ರ ಮರಿಕೋಟೆಗೌಡ (48) ಮತ್ತು ಅವರ
ಪುತ್ರ ಸತೀಶ್‌ಕುಮಾರ್ (25) ಕೊಲೆಯಾದವರು. ಈ ಇಬ್ಬರ ಹತ್ಯೆ ಸಂಬಂಧ ಅದೇ ಗ್ರಾಮದ ನಿವಾಸಿಗಳಾದ ಮಂಜುನಾಥ್
(22), ಮಹದೇವಸ್ವಾಮಿ (22) ಮತ್ತು ಸತೀಶ್ (22) ಎಂಬುವವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸಲಿ : ಒಕ್ಕೂಟದ ಅಧ್ಯಕ್ಷ ಎಚ್.ಟಿ.ಮೋಹನ್ ಆತಂಕ
ಸತೀಶ್‌ಕುಮಾರ್ ಡಿ.26ರ ರಾತ್ರಿ ತನ್ನ ಸ್ನೇಹಿತನಿಗೆ ಪ್ಯಾನ್ ಕಾರ್ಡ್ ಕೊಟ್ಟು ಬರಲು ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದನು.
ಈತನನ್ನು ಹಿಂಬಾಲಿಸಿಕೊಂಡು ಹೋದ ಆರೋಪಿಗಳು, ಬಂಡಿ ಪಾಳ್ಯ ಎಪಿಎಂಸಿ ಮುಂಭಾಗದ ಪೊದೆ ಬಳಿ ಮೂತ್ರ ವಿಸರ್ಜನೆ
ಮಾಡಲು ನಿಂತಿದ್ದ ಸತೀಶ್‌ಕುಮಾರ್ ಮೇಲೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ, ಪೊದೆಯೊಳಗೆ ಬಿಸಾಡಿದ್ದರು. ಈ
ಸಂಬಂಧ ಮರಿಕೋಟೆಗೌಡ ತಮ್ಮ ಪುತ್ರ ಸತೀಶ್‌ಕುಮಾರ್ ಕಾಣೆಯಾಗಿರುವುದಾಗಿ ಮೈಸೂರು ದಕ್ಷಿಣ ಪೊಲೀಸ್
ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಾಗೆಯೇ, ಮರಿಕೋಟೆಗೌಡ ಮೈಸೂರಿನ ಮಹದೇವಪುರದಿಂದ ಮಂಡಕಳ್ಳಿಗೆ ಹೋಗುವ ಮಾರ್ಗ ಮಧ್ಯೆಯ ಕಾಲುವೆ
ಬಳಿ ಜ.2ರಂದ ಬೆಳಗ್ಗೆ ಅಡ್ಡಗಟ್ಟಿರುವ ಆರೋಪಿಗಳು ದೊಣ್ಣೆಯಿಂದ ತೀವ್ರ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಸಂಬಂಧ ಮೈಸೂರು ದಕ್ಷಿಣ ಠಾಣೆಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು, ಶುಕ್ರವಾರ
ಬೆಳಗ್ಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮರಿಕೋಟೆಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದಾಗ ಆರೋಪಿಗಳು ಮರಿಕೋಟೆಗೌಡ, ಪುತ್ರ ಸತೀಶ್‌ಕುಮಾರ್‌ನನ್ನು ಸಹ ಕೊಲೆ ಮಾಡಿದ್ದ ವಿಚಾರವನ್ನು ಬಾಯಿಬಿಟ್ಟಿದ್ದಾರೆ.
ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬಂಡಿಪಾಳ್ಯ ಎಪಿ ಎಂಸಿ ಮುಂಭಾಗದಲ್ಲಿ ಪೊದೆಯಲ್ಲಿದ್ದ ಸತೀಶ್‌ಕುಮಾರ್ ಮೃತ
ದೇಹವನ್ನು ಪೊಲೀಸರು ಶವಾಗಾರಕ್ಕೆ ಸಾಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.