ಅಗತ್ಯ ವೈದ್ಯಕೀಯ ನೆರವಿಗೆ ಸಂಸದ ನಳಿನ್ ಮನವಿ
Team Udayavani, Apr 29, 2021, 7:05 AM IST
ಮಂಗಳೂರು: ಕೋರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಆಕ್ಸಿಜನ್ ಘಟಕಗಳ ನಿರ್ಮಾಣ, ಆಕ್ಸಿಜನ್ ಸಿಲಿಂಡರ್ ಸಹಿತ ಮತ್ತಿತರ ಅತ್ಯಗತ್ಯ ವೈದ್ಯಕೀಯ ನೆರವು ನೀಡುವಂತೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಯಲ್ಲಿರುವ ಸರಕಾರಿ ಸ್ವಾಮ್ಯದ ಹಾಗೂ ಖಾಸಗಿ ಕಂಪೆನಿಗಳನ್ನು ಕೋರಿದ್ದಾರೆ.
ಡಿಸಿ ಕಚೇರಿಯಲ್ಲಿ ಬುಧವಾರ ನಡೆದ ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆ ನಿರ್ವಹಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು, ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಅತ್ಯಗತ್ಯವಿರುವ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚು ಕಾಯ್ದಿರಿಸಿಕೊಳ್ಳುವುದರೊಂದಿಗೆ ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಮುಂದಾಗಬೆಕು. ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಬಂದಿರುವವರಿಂದ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಅವರನ್ನು ತಪ್ಪದೇ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಅಗತ್ಯ ಬಿದ್ದರೆ ವಿವಿಗಳ ವಿದ್ಯಾರ್ಥಿ ನಿಲಯಗಳು, ಸರಕಾರಿ ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಎಂಆರ್‌ಪಿಎಲ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ 930 ಎಲ್‌ಪಿಎಂ ಸಾಮರ್ಥ್ಯ ಆಕ್ಸಿಜನ್ ಉತ್ಪಾದನ ಘಟಕ ಸ್ಥಾಪನೆ, ಎಂಸಿಎಫ್ ವತಿಯಿಂದ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆ ಹಾಗೂ ಬಂಟ್ವಾಳ ತಾ. ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನ ಘಟಕ ಸ್ಥಾಪನೆ, ಗೇಲ್ ಇಂಡಿಯಾ ಲಿಮಿಟೆಡ್ ಮತ್ತು ಗೇಲ್ ಗ್ಯಾಸ್ ವತಿಯಿಂದ ಪುತ್ತೂರು ಮತ್ತು ಬೆಳ್ತಂಗಡಿಗಳಲ್ಲಿ ಆಮ್ಲಜನಕ ಉತ್ಪಾದನ ಘಟಕ ಸ್ಥಾಪನೆ, ಕೆಐಒಸಿಲ್ ವತಿಯಿಂದ ಉಪ್ಪಿನಂಗಡಿ ಮತ್ತು ಮೂಡುಬಿದಿರೆಯಲ್ಲಿ ಆಮ್ಲಜನಕ ಉತ್ಪಾದನ ಘಟಕ ಸ್ಥಾಪನೆ, ಇನ್ಫೊಸಿಸ್ ವತಿಯಿಂದ ಉಳ್ಳಾಲದಲ್ಲಿ ವಿದ್ಯುತ್ ಚಿತಾಗಾರ ಸ್ಥಾಪನೆ, ಎಂಎಸ್‌ಇಝಡ್ ವತಿಯಿಂದ ಆ್ಯಂಬುಲೆನ್ಸ್ ನಿರ್ವಹಣೆ, ಎನ್‌ಎಂಪಿಟಿ ವತಿಯಿಂದ 20 ಡ್ನೂರೋ ಸಿಲಿಂಡರ್, ಬಿಎಎಸ್‌ಎಫ್ ವತಿಯಿಂದ 20 ಡ್ನೂರೋ ಸಿಲಿಂಡರ್ ನೆರವನ್ನು ಒದಗಿಸುವಂತೆ ಸಂಸದರು ಸೂಚಿಸಿದರು.
ಇದಕ್ಕೆ ಹಾಜರಿದ್ದ ಎಲ್ಲ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಕೊಂಡು, ಜಿಲ್ಲಾಡಳಿತಕ್ಕೆ ಅಗತ್ಯ ನೆರವಿನ ಹಸ್ತ ಚಾಚುವುದಾಗಿ ತಿಳಿಸಿದರು.
ಶೇ. 50 ಬೆಡ್ ಮೀಸಲು
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50ರಷ್ಟು ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ಮೀಸಲಿಡಲಾಗಿದೆ. ಒಟ್ಟು 4,816 ಬೆಡ್‌ಗಳಿದ್ದು, ಅವುಗಳಲ್ಲಿ 3,979 ಬೆಡ್‌ಗಳು ಇನ್ನು ಖಾಲಿ ಉಳಿದಿವೆ ಎಂದರು.
ಜಿಲ್ಲೆಯ ಜನಪ್ರತಿನಿಧಿಗಳು, ಜಿ.ಪಂ. ಸಿಇಒ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.