ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್
Team Udayavani, Feb 1, 2023, 3:25 PM IST
ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೂಲಸೌಕರ್ಯ ಕ್ಷೇತ್ರದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಕೋವಿಡ್ ನಂತರವೂ ಭಾರತ ತನ್ನ ಆರ್ಥಿಕತೆಯ ವೇಗದಿಂದಾಗಿ ಜಗತ್ತಿನ ಗಮನ ಸೆಳೆದಿದೆ. ರೈಲ್ವೆ ಇಲಾಖೆಯಲ್ಲಿ ಹೆಚ್ಚಿನ ಹಣ ಹೂಡಿಕೆ, ಯುವ ಉದ್ಯಮಿಗಳು, ಕೃಷಿ ಸ್ಟಾರ್ಟಪ್‍ಗಳಿಗೆ ಉತ್ತೇಜನ, ಪ್ರವಾಸೋದ್ಯಮಕ್ಕೆ ಒತ್ತು ಕೊಟ್ಟಿದ್ದು, ಒಂದು ಜಿಲ್ಲೆ- ಒಂದು ಉತ್ಪನ್ನಕ್ಕೆ ಪ್ರೋತ್ಸಾಹ ಕೊಟ್ಟ ಆಯವ್ಯಯ ಪತ್ರ ಇದಾಗಿದೆ ಎಂದು ತಿಳಿಸಿದ್ದಾರೆ.
ಮಧ್ಯಮ ವರ್ಗದವರಿಗೆ ನೀಡಿರುವ ತೆರಿಗೆ ವಿನಾಯಿತಿ ಬಗ್ಗೆ ಅವರು ಸಂತಸ ಸೂಚಿಸಿದ್ದಾರೆ. ದೇಶವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾಲಘಟ್ಟದಲ್ಲಿದೆ. ದೇಶವನ್ನು ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದತ್ತ ಸದೃಢವಾಗಿ ಒಯ್ಯುವ ನಿಟ್ಟಿನಲ್ಲಿ ಇದೊಂದು ನೀಲನಕ್ಷೆಯಂತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.