ನರೇಗಾ ಯೋಜನೆಗೆ ಜಿಲ್ಲೆಯಲ್ಲಿ 180 ಕೋಟಿ ರೂ. ಖರ್ಚು: ಕಾಂತರಾಜು

Team Udayavani, Feb 2, 2022, 8:20 PM IST

ನರೇಗಾ ಯೋಜನೆಗೆ ಜಿಲ್ಲೆಯಲ್ಲಿ 180 ಕೋಟಿ ರೂ. ಖರ್ಚು: ಕಾಂತರಾಜು

ಆಲೂರು : ನರೇಗಾ ಯೋಜನೆಗಾಗಿ ಜಿಲ್ಲೆಯಲ್ಲಿ 180 ಕೋಟಿ ರೂ. ಗಳನ್ನು ವಿವಿಧ ಇಲಾಖೆಗಳ ಮೂಲಕ ಖರ್ಚು ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಂತರಾಜು ತಿಳಿಸಿದರು.

ಮಡಬಲು ಗ್ರಾಮ ಪಂಚಾಯಿತಿ ಮಡಬಲು ಗ್ರಾಮದಲ್ಲಿ ನರೇಗಾ ಯೋಜನ್ ದಿವಸ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು, ಇಂದು ಇಡಿ ದೇಶದಲ್ಲಿ ನರೇಗಾ ಯೋಜನ್ ದಿವಸವನ್ನು ಆಚರಿಸಲಾಗುತ್ತಿದೆ. ಕೃಷಿ, ತೋಟಗಾರಿಕೆ, ಸೆಸ್ಕ್, ಶಿಕ್ಷಣ, ಆರೋಗ್ಯ,ಪಶು ಇಲಾಖೆ, ಎಂಜಿನಿಯರಿಂಗ್ ಸೇರಿದಂತೆ ಬಹುತೇಕ ಎಲ್ಲ ಇಲಾಖೆಗಳಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲ ಇಲಾಖೆ ಆಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಒಂದು ದಿನದ ಮಟ್ಟಿಗೆ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯೋನ್ಮುಖರಾಗಿ, ಕಲ್ಯಾಣಿಗಳನ್ನು ಶುಚಿಗೊಳಿಸುವುದು, ಶಾಲೆ, ಅಂಗನವಾಡಿ, ದೇವಸ್ಥಾನಗಳು, ಸಮುದಾಯಭವನಗಳ ಅಂಗಳ ಶುಚಿಗೊಳಿಸುವುದು ಸೇರಿದಂತೆ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯೋನ್ಮುಖರಾಗಿದ್ದಾರೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಮೂಲಕ 180 ಕೋಟಿ ರೂ. ಗಳನ್ನು ಖರ್ಚು ಮಾಡಲಾಗಿದೆ. 52 ಲಕ್ಷ ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಇದು ಮುಂದುವರಿದ ಕಾರ್ಯಕ್ರಮವಾಗಿರುವುದರಿಂದ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ನರೇಗಾ ಯೋಜನೆ ಕುರಿತು ಜಾಥಾ ಏರ್ಪಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಇದೆ ಸಂದರ್ಭದಲ್ಲಿ ಆರೋಗ್ಯ ಶಿಭಿರ, ರಕ್ತದಾನ ಶಿಭಿರ ಮತ್ತು ಪ್ರತಿ ಇಲಾಖೆಗಳು ತಮ್ಮ ಇಲಾಖೆಗಳಿಂದ ದೊರಕುವ ಸೌಲಭ್ಯಗಳ ಕುರಿತು ಪ್ರದರ್ಶನ ಮಾಡಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಕಾರ್ಯದರ್ಶಿ(ಆಡಳಿತ) ಚಂದ್ರಶೇಖರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಪುನೀತ್, ಮುಖ್ಯ ಯೋಜನಾಧಿಕಾರಿ ನಾಗರಾಜ್, ಯೋಜನ ನಿರ್ದೇಶಕ ವಿಠಲ್ ಕಾವ್ಳೆ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ, ಸಿಡಿಪಿಒ ಎ. ಟಿ. ಮಲ್ಲೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶೋಭಾ, ಮಡಬಲು ಗ್ರಾಮ ಪಂಚಾಯಿತಿ ಪಿಡಿಒ ಮಹಮ್ಮದ್ ಇತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಲೂರು ತಾಲ್ಲೂಕು ನೂತನ ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.