ರಾ.ಹೆ. 169ಎ ಹೆಬ್ರಿ-ಪರ್ಕಳ, ಕರಾವಳಿ-ಮಲ್ಪೆ ಅಗಲೀಕರಣಕ್ಕೆ ಕೇಂದ್ರ ಸರಕಾರ ಹಸಿರು ನಿಶಾನೆ
Team Udayavani, Jun 1, 2021, 6:42 PM IST
ಉಡುಪಿ: ಹೆಬ್ರಿಯಿಂದ ಪರ್ಕಳವರೆಗೆ ಮತ್ತು ಕರಾವಳಿ ಜಂಕ್ಷನ್ ನಿಂದ ಮಲ್ಪೆಯವರೆಗಿನ ರಾ.ಹೆ. 169ಎ ರಸ್ತೆಯ ಅಗಲೀಕರಣಕ್ಕೆ ಕೇಂದ್ರ ಸರಕಾರ ಹಸಿರು ನಿಶಾನೆ ನೀಡಿದೆ.
29 ಕಿಲೋಮೀಟರ್ ಉದ್ದದ ದ್ವಿಪಥ/ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ 350 ಕೋ.ರೂ.(ಭೂಸ್ವಾಧೀನ ಸಹಿತ) ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ರಾಷ್ಟ್ರೀಯ ಹೆದ್ದಾರಿ 169ಎ ಹೆಬ್ರಿ ಸೀತಾನದಿ ಬಳಿಯಲ್ಲಿ ರಿಟೈನಿಂಗ್‌ವಾಲ್ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ಶೃಂಗೇರಿ ಸಮೀಪದ ನೆಮ್ಮಾರು ಬಳಿ ರಸ್ತೆ ಎತ್ತರಿಸುವುದು, ರಿಟೈನಿಂಗ್ ವಾಲ್ ನಿರ್ಮಾಣ ಕಾಮ ಗಾರಿಗೆ ಅಂದಾಜು ಮೊತ್ತ 19 ಕೋ.ರೂ.ವನ್ನು ಬಿಡುಗಡೆ ಮಾಡಿದೆ.
ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ
ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಅ ಹೆದ್ದಾರಿಯ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಈ ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲು ಒಟ್ಟು ರೂ. 350.00 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಲಾಗಿದೆ
ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಅ ಹೆದ್ದಾರಿಯ ಮಲ್ಪೆಯಿಂದ ಹೆಬ್ರಿವರೆಗೆ ಸಮಗ್ರ ಅಭಿವೃದ್ಧಿಯ ಯೋಜನಾ ವರದಿ ಸಿದ್ಧಪಡಿಸಿ ಅನುಮೋದನೆಗಾಗಿ ದಿನಾಂಕ 23-03-2021ರಂದು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವರಾದ ಶ್ರೀಯುತ ನಿತಿನ್ ಗಡ್ಕರಿ ಯವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಉಡುಪಿ ಜಿಲ್ಲೆಯ ಬಹು ಬೇಡಿಕೆಯಾಗಿರುವ ಈ ಪ್ರಮುಖ ಹೆದ್ದಾರಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುತುವರ್ಜಿವಹಿಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿಸಿ ಹೆದ್ದಾರಿ ಅಭಿವೃದ್ಧಿಯ ಪ್ರಾಮುಖ್ಯತೆಯ ವಸ್ತುಸ್ಥಿತಿಗಳನ್ನು ಮನವರಿಕೆ ಮಾಡಿ ನಂತರ ಯೋಜನೆಗೆ ಅನುಮೋದನೆ ದೊರಕುವವರೆಗೆ ನಿರಂತರವಾಗಿ ಪ್ರಯತ್ನಿಸಿ ಶ್ರಮವಹಿಸಿದ ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀಯುತ ನಿತಿನ್ ಗಡ್ಕರಿ ಅವರಿಗೆ ಶಾಸಕ ರಘುಪತಿ ಭಟ್ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.