ನವರಾತ್ರಿ: ಇಂದಿನ ಆರಾಧನೆ- ಸಕಲ ಸಿದ್ಧಿಗಳನ್ನು ಕರುಣಿಸುವ ದೇವಿ “ಕಾಲರಾತ್ರಿ”


Team Udayavani, Oct 21, 2023, 12:47 AM IST

kalarathri

ನವದುರ್ಗೆಯ ಏಳನೆಯ ಸ್ವರೂಪವೇ ಕಾಲರಾತ್ರಿ. ಸಪ್ತಮಿಯಂದು ಈ ದೇವಿಯ ರೂಪವನ್ನು ಆರಾಧಿಸುತ್ತಾರೆ.

ಏಕವೇಣೀ ಜಪಾಕರ್ಣಾಪೂರಾ ನಗ್ನಾ ಖರಸ್ಥಿತಾ
ಲಂಬೋಷ್ಟೀ ಕರ್ಣಿಕಾಕರ್ಣೇ ತೈಲಾಭ್ಯಕ್ತಶರೀರಿಣೀ |
ವಾಮಪಾದೋಲ್ಲಸಲ್ಲೋಹಲತಾ ಕಂಟಕಭೂಷಣಾ
ವರ್ಧನಮೂರ್ಧಧ್ವಜಾ ಕೃಷ್ಣಾ ಕಾಲರಾತ್ರಿರ್ಭಯಂಕರೀ||

“ಈ ದೇವಿಯ ಶರೀರವು ದಟ್ಟವಾದ ಕಪ್ಪು ಬಣ್ಣದಿಂದ ಕೂಡಿರುವುದು. ಆಕೆಯ ತಲೆಕೂದಲು ಹರಡಿಕೊಂಡಿದೆ. ಕತ್ತಿನಲ್ಲಿ ಮಿಂಚಿನಂತೆ ಹೊಳೆಯುವ ಮಾಲೆಯಿದೆ. ಮೂರು ಕಣ್ಣುಗಳನ್ನು ಹೊಂದಿರುವ ಈ ದೇವಿಯ ಉಚ್ಛ್ರಾಸ ನಿಃಶ್ವಾಸದಿಂದ ಅಗ್ನಿಯ ಭಯಂಕರ ಜ್ವಾಲೆಗಳು ಹೊರಸೂಸುತ್ತಿವೆ. ಈಕೆಯ ವಾಹನ ಕತ್ತೆ. ನಾಲ್ಕು ಭುಜಗಳಿರುವ ದೇವಿಯು ಮೇಲಕ್ಕೆ ಎತ್ತಿರುವ ಬಲಗೈಯಿಂದ ಅಭಯಮುದ್ರೆಯನ್ನು ತೋರುತ್ತಿದ್ದಾಳೆ. ಮೇಲಕ್ಕೆ ಎತ್ತಿರುವ ಎಡಗೈಯಲ್ಲಿ ಕಬ್ಬಿಣದ ಮುಳ್ಳು ಹಾಗೂ ಕೆಳ ಎಡಗೈಯಲ್ಲಿ ಖಡ್ಗವನ್ನು ಹಿಡಿದಿದ್ದಾಳೆ. ಕೆಳಗಿನ ಬಲಗೈಯಲ್ಲಿ ವರಮುದ್ರೆಯ ಮೂಲಕ ಭಕ್ತರಿಗೆ ಆಶೀರ್ವದಿಸುತ್ತಿದ್ದಾಳೆ.”

ಕಾಲರಾತ್ರಿಯ ಸ್ವರೂಪದ ಕುರಿತು ತಿಳಿದಾಗ ಅವಳ ಉಗ್ರರೂಪವನ್ನು ಕಂಡು ನಮಗೆ ಭಯವಾಗಬಹುದು, ವಿಚಿತ್ರವೆನಿಸಬಹುದು. ಆದರೆ ಇವಳು ಶುಭಫ‌ಲವನ್ನು ನೀಡುವವಳಾದ್ದರಿಂದ “ಶುಭಂಕರೀ’ ಎಂದೂ ಕರೆಯುತ್ತಾರೆ. ಭಕ್ತರಿಗೆ, ಸಜ್ಜನರಿಗೆ ಸದಾ ಒಳ್ಳೆಯದನ್ನು ಮಾಡುತ್ತಾ, ದುಷ್ಟ ಜನರನ್ನು ಈ ದೇವಿ ಶಿಕ್ಷಿಸುತ್ತಾಳೆ. ದೇವಿ ಕಾಲರಾತ್ರಿಯನ್ನು ಆರಾಧಿಸಿದರೆ, ಅಗ್ನಿಭಯ, ಶತ್ರುಭಯ, ಜಲಭಯ, ಗ್ರಹಗಳ ಬಾಧೆಗಳಿಂದ ಮುಕ್ತರಾಗುತ್ತಾರೆ.

ಸಪ್ತಮೀ ತಿಥಿಯ ರಾತ್ರಿಯನ್ನು ಕಾಳರಾತ್ರೀ ಎಂದೂ ಕರೆಯುತ್ತಾರೆ. ಮೈಸೂರಿನ ಅರಮನೆಯಲ್ಲಿ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಂದು ರಾತ್ರಿ ವಿಶೇಷವಾಗಿ ದೇವಿಯನ್ನು ಪೂಜಿಸುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬರುತ್ತಿದೆ.

ಸಪ್ತಮೀ ತಿಥಿಯಂದು ನವರಾತ್ರಿಯ ಏಳನೇ ದಿವಸದಿಂದ ಈ ದೇವಿಯನ್ನು ಆರಾಧಿಸಲಾಗುತ್ತದೆ. ಅಂದು ಸಾಧಕನ ಮನಸ್ಸು ಸಹಸ್ರಾರ ಚಕ್ರದಲ್ಲಿ ಪ್ರತಿಷ್ಠಿತಗೊಳ್ಳುತ್ತದೆ. ಬ್ರಹ್ಮಾಂಡದ ಸಕಲ ಸಿದ್ಧಿಗಳೂ ಅವನಿಗೆ ದೊರೆಯುತ್ತವೆ. ಸಾಧಕನ ಮನಸ್ಸು ಮಾತೆಯ ಸ್ವರೂಪದಲ್ಲಿ ಸ್ಥಿರವಾಗುತ್ತದೆ.

~ ಸ್ವಾಮಿ ಶಾಂತಿವ್ರತಾನಂದಜೀ, ಅಧ್ಯಕ್ಷರು, ರಾಮಕೃಷ್ಣ ವೇದಾಂತ ಕೇಂದ್ರ, ಐರ್ಲೆಂಡ್‌

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.