Hunsur: ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹ

ರೈತರ ಬೇಡಿಕೆ ಒಪ್ಪದಿದ್ದಲ್ಲಿ ಹೋರಾಟ ಅನಿವಾರ್ಯ: ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

Team Udayavani, Jun 19, 2023, 9:02 AM IST

2-hunsur

ಹುಣಸೂರು: ರಾಷ್ಟ್ರೀಯ ಹೆದ್ದಾರಿ-275ಕ್ಕೆ ಭೂ ಸ್ವಾಧೀನಪಡಿಸಿಕೊಳ್ಳುವ ಮೊದಲು ಸೂಕ್ತ ಬೆಲೆ ನಿಗದಿ ಮಾಡುವವರೆಗೂ ರಸ್ತೆ ಮಾಡಲು ಬಿಡುವುದಿಲ್ಲ, ಮತ್ತು  ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲು ಹಾಗೂ ಅನಿವಾರ್ಯವಾದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

ತಾಲೂಕಿನ ತೆಂಕಲಕೊಪ್ಪಲಿನ ಸಮುದಾಯ ಭವನದಲ್ಲಿ ಜೂ.18ರ ಭಾನುವಾರ ರೈತ ಸಂಘದ ರಾಜ್ಯದ್ಯಕ್ಷ ಬಡಕಲಪುರ ನಾಗೇಂದ್ರರ ಅಧ್ಯಕ್ಷತೆಯಲ್ಲಿ ಕೃಷಿಕರ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಹೊಸದಾಗಿ ನಿರ್ಮಿಸಲುದ್ದೇಶಿಸಿರುವ ಶ್ರೀರಂಗಪಟ್ಟಣ-ಕುಶಾಲನಗರ ರಾಷ್ಟ್ರೀಯ 275 ರ ರಸ್ತೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರ ಪರವಾಗಿ ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಅವಿನಾಶ್ ಮತ್ತಿತರರು ಮಾತನಾಡಿ ಮೈಸೂರು ತಾಲೂಕಿನ ರೈತರ ಜಮೀನಿಗೆ 1.20 ಕೋಟಿ ನಿಗದಿಗೊಳಿಸಿದ್ದಾರೆ.

ಹುಣಸೂರು ತಾಲೂಕಿನ ತೆಂಕಲಕೊಪ್ಪಲು, ರಾಮೇನಹಳ್ಳಿ ಭಾಗದ ರೈತರಿಗೆ 9-12 ಲಕ್ಷ ನಿಗದಿಗೊಳಿಸಿದ್ದರೆ, ಕಿರಿಜಾಜಿಯಲ್ಲಿ 40 ಲಕ್ಷ ನಿಗದಿಪಡಿಸಿದ್ದಾರೆ. ಇದು ರೈತರಿಗೆ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಅನ್ಯಾಯ. ಸರಕಾರ, ಪ್ರಾಧಿಕಾರ ಕೃಷಿಕರ ಭೂಮಿಯ ಮಾರುಕಟ್ಟೆ ದರ ನಿಗದಿಪಡಿಸಬೇಕು. ವಶಪಡಿಸಿಕೊಳ್ಳುವ ಎಲ್ಲ ಭೂ ಒಡೆಯರಿಗೂ ಎಕರೆಗೆ ಕನಿಷ್ಟ ಒಂದು ಕೋಟಿ ರೂ. ನಿಗದಿಪಡಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯವಾದೀತೆಂದರು.

ಕೃಷಿಕರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ರಾಜ್ಯಾಧ್ಯಕ್ಷ ಬಡಗಲ ಪುರನಾಗೇಂದ್ರರವರು ರೈತರ ಹೋರಾಟಕ್ಕೆ ಸಂಘ ಬೆನ್ನೆಲುಬಾಗಿ ನಿಲ್ಲಲಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಯವರನ್ನು ಸಂಘವು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಅಲ್ಲದೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರನ್ನು ಜಲದರ್ಶಿನಿಯಲ್ಲಿ ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗಿದೆ. ರೈತ ಮುಖಂಡರ ಸಭೆ ನಡೆಸಿ ಕ್ರಮವಹಿಸಲಾಗುವುದೆಂದು ಭರವಸೆ ನೀಡಿದ್ದಾರೆಂದು ಮಾಹಿತಿ ನೀಡಿದರು.

ಜಿಲ್ಲಾಧ್ಯಕ್ಷ ಹೊಸೂರುಕುಮಾರ್ ಮಾತನಾಡಿ, ಒಂದು ಬಾರಿ ರೈತರು ಭೂಮಿ ಕಳೆದುಕೊಂಡಲ್ಲಿ ಮತ್ತೆ ಸಂಪಾದನೆ ಕಷ್ಟಸಾಧ್ಯವಾಗಿದ್ದು, ಭೂಮಿಗೆ ಏಕರೂಪ ದರ ನಿಗದಿಪಡಿಸಬೇಕು. ಇಲ್ಲವೇ ಯಾವುದೇ ಕಾರಣಕ್ಕೂ ಜಿಲ್ಲೆಯ ರೈತರು ಹೆದ್ದಾರಿ ನಿರ್ಮಾಣಕ್ಕೆ ಜಿಲ್ಲೆಯ ಸಹಕಾರ ನೀಡುವುದಿಲ್ಲ, ಈಗಾಗಲೇ ಹೆದ್ದಾರಿ ಭೂಮಿ ವಶಪಡಿಸಿಕೊಳ್ಳುವುದರ ವಿರುದ್ದ ಯಾವುದೇ ಹೋರಾಟ, ನ್ಯಾಯಾಲಯ ಮೆಟ್ಟಿಲೇರಲೂ ಸಹ ಸಂಘ ತೀರ್ಮಾನಿಸಿದೆ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ತಾಲೂಕು ಅಧ್ಯಕ್ಷ ಬೆಂಕಿಪುರಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಾಮೇಗೌಡ, ಬೆಟ್ಟದೂರು ಮಂಜು, ನಾಗಣ್ಣ, ವೆಂಕಟೇಶ್, ವಿಷಕಂಠಪ್ಪ, ಗುಂಜೇಗೌಡ ಸೇರಿದಂತೆ 200 ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.