NEET ಅರ್ಜಿ ತಿದ್ದುಪಡಿಗೆ ಅವಕಾಶ
Team Udayavani, Jul 30, 2023, 8:23 PM IST
ಬೆಂಗಳೂರು: ನೀಟ್ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನೋಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 31ರ ಬೆಳಗ್ಗೆ 11 ಗಂಟೆಯಿಂದ ಆಗಸ್ಟ್ 1ರ ಮಧ್ಯಾಹ್ನ 11.59ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನೀಟ್ ಅರ್ಜಿಯಲ್ಲಿ ಡಿಕ್ಲರೇಷನ್ ಮಾಡಿರುವ, ಆದರೆ ಇನ್ನೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂದು ಕೆ ಇ ಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.
ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಆ.1ರಂದು ಕನ್ನಡ ಭಾಷೆ ಪರೀಕ್ಷೆ
ಜುಲೈ 26 ಮತ್ತು 28 ರಂದು ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1 ರಂದು ಮಧ್ಯಾಹ್ನ 3 ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ/ ಮಳೆಯ ಕಾರಣದಿಂದ ಗೈರುಹಾಜರಾಗಿದ್ದವರೂ ಸಹ ಆ.1ರಂದು ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬಹುದು ಎಂದು ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈನ್‌ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.