Udupi ನೇಜಾರು ಕೊಲೆ ಪ್ರಕರಣ : ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Team Udayavani, Dec 6, 2023, 12:30 AM IST
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ಮಂಗಳವಾರ ನ್ಯಾಯಾಧೀಶರ ಎದುರು ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.
ವಿಚಾರಣೆ ಪ್ರಕ್ರಿಯೆ ನಡೆಸಿದ ನ್ಯಾಯಾಧೀಶೆ ಅವರು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರ ವರೆಗೆ ವಿಸ್ತರಿಸಿ ಆದೇಶಿಸಿದರು.
ಅಂದು ಮತ್ತೊಮ್ಮೆ ಆತನನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತದೆ. ಚಾರ್ಜ್ಶೀಟ್ ಸಲ್ಲಿಕೆ ಸಂದರ್ಭ ಆತನನ್ನು ಮುಖತಃ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆಗಳಿವೆ.
ನ.22ರಿಂದ ಡಿ. 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆತನನ್ನು ಹಿರಿಯಡಕದ ಜಿಲ್ಲಾ ಕಾರಾಗೃಹದಲ್ಲಿ ಪ್ರತ್ಯೇಕ ಸೆಲ್ನಲ್ಲಿ ಇರಿಸಲಾಗಿತ್ತು. ಬಳಿಕ ಹೆಚ್ಚಿನ ಭದ್ರತೆ ಒದಗಿಸುವ ದೃಷ್ಟಿಯಿಂದ ನ. 27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.