Udupi: ನೇಜಾರು ಕೊಲೆ ಪ್ರಕರಣ- ಜಾಮೀನು ಅರ್ಜಿ ಸಲ್ಲಿಕೆ
Team Udayavani, Dec 15, 2023, 10:24 PM IST
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಡಿ. 14ರಂದು ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಪರಪ್ಪನ ಆಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗಲೆ ಪರ ಕೆ.ಎಸ್.ಎನ್. ಾಜೇಶ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ದಿನೇಶ್ ಹೆಗ್ಡೆ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದಾರೆ. ಅದರಂತೆ ಡಿ. 0ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ.
ನ. 12ರಂದು ನೇಜಾರು ತೃಪ್ತಿ ಲೇಔಟ್ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಪೊಲೀಸರು ನ. 14ರಂದು ಬಂಧಿಸಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಡಿ. 18ರ ವರೆಗೆ ವಿಸ್ತರಿಸಲಾಗಿದೆ. ಈತನಿಗೆ ನ್ಯಾಯಾಲಯ ಸರಕಾರಿ ವಕೀಲ ರಾಜು ಪೂಜಾರಿ ಅವರನ್ನು ನೇಮಕ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.