ಕ್ವಾರಂಟೈನ್‌ನಿಂದ 21 ಮಂದಿ ಸೋಂಕಿತರು ಪರಾರಿ
Team Udayavani, Jun 28, 2020, 1:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ
ಕಾಠ್ಮಂಡು: ನೇಪಾಲದಲ್ಲಿ ಕೋವಿಡ್ ಪ್ರಕರಣಗಳು ನಿರಂತರ ಏರಿಕೆ ಕಾಣುತ್ತಿದ್ದು, ಶನಿವಾರ 434 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಕೋವಿಡ್ ಸೋಂಕು ಪೀಡಿತರಾಗಿದ್ದ 21 ಮಂದಿ ಇಲ್ಲಿನ ಕರ್ನಾಲಿ ಪ್ರಾಂತ್ಯದ ಕ್ವಾರಂಟೈನ್ ಕೇಂದ್ರದಿಂದ ಓಡಿಹೋಗಿದ್ದು ಆಡಳಿತಕ್ಕೆ ಭಾರೀ ತಲೆನೋವು ತಂದಿದೆ.
ಕ್ವಾರಂಟೈನ್‌ನಿಂದ ತಪ್ಪಿಸಿಕೊಂಡವರು ಕೇಂದ್ರದಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವ ಬಗ್ಗೆ ದೂರಿದ್ದರು. ತಪ್ಪಿಸಿಕೊಂಡವರನ್ನು ಬಳಿಕ ಪೋಲೀಸರು ಪತ್ತೆ ಮಾಡಿದ್ದಾರೆ.
ಶನಿವಾರ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಮೃತರಾದವರ ಸಂಖ್ಯೆ 27ಕ್ಕೇರಿದೆ. ಇನ್ನು ಶನಿವಾರ ಬೆಳಗಿನ ವರೆಗೆ 48 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2698 ಮಂದಿ ಗುಣಮುಖರಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 11755 ಆಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.