Politics: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಸಿಎಂ ಹುದ್ದೆಗೆ ಹೊಸಮುಖಗಳು?
ಪ್ರಧಾನಿ ನೇತೃತ್ವದ ಸಭೆಯಲ್ಲಿ ಇಂದು ನಿರ್ಧಾರ ಸಾಧ್ಯತೆ
Team Udayavani, Dec 7, 2023, 12:52 AM IST
ಹೊಸದಿಲ್ಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢಗಳ ಸಿಎಂ ಆಯ್ಕೆ ಗುರುವಾರ ಅಂತಿಮಗೊಳ್ಳುವ ಸಾಧ್ಯತೆ ಇದೆ. ಮೂರು ರಾಜ್ಯಗಳಲ್ಲೂ ಹೊಸಬರನ್ನೇ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.
ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಗುರು ವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅದರಲ್ಲಿ ಸಿಎಂ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗುವ ಸಾಧ್ಯತೆಯಿದೆ. ಮುಂದಿನ ಎಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ನಾಯಕರ ಆಯ್ಕೆ ನಿಟ್ಟಿನಲ್ಲಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ ನಾಲ್ಕೂವರೆ ಗಂಟೆಗಳಿಗೂ ಅಧಿಕ ಹೊತ್ತು ಸಭೆ ನಡೆಸಲಾಗಿದೆ. ಮೂರು ರಾಜ್ಯಗಳ ಚುನಾವಣ ಉಸ್ತುವಾರಿಗಳು, ಪ್ರಮುಖರಾದ ಅಮಿತ್ ಶಾ, ಜೆ.ಪಿ. ನಡ್ಡಾ ಭಾಗವಹಿಸಿದ್ದರು. ಸಂಸತ್ ಕಲಾಪದ ಬಳಿಕವೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮೂರು ರಾಜ್ಯಗಳ ಚುನಾವಣ ಉಸ್ತುವಾರಿಗಳ ಉಪಸ್ಥಿತಿಯಲ್ಲಿ ಮತ್ತೂಂದು ಸಭೆ ನಡೆಯಿತು.
ಪ್ರಮುಖ ಹೆಸರುಗಳಿವು
ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಲೋಕಸಭೆ ಚುನಾವಣೆ ಮುಕ್ತಾಯದವರೆಗೆ ಮುಂದುವರಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ. ಅವರಲ್ಲದೆ ಬಿಜೆಪಿಯ ಕೈಲಾಶ್ ವಿಜಯವರ್ಗೀಯ, ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಎಂ ಹುದ್ದೆಯ ಮೇಲೆ ಕಣ್ಣಿರಿಸಿದ್ದಾರೆ. ರಾಜಸ್ಥಾನದಲ್ಲಿ ಮಾಜಿ ಸಿಎಂ ವಸುಂಧರಾ ರಾಜೇ, ನೂತನ ಶಾಸಕರಾದ ದಿಯಾ ಕುಮಾರಿ, ಬಾಬಾ ಬಾಲಕನಾಥ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಅರ್ಜುನ್ ರಾಮ್ ಮೇಘಾÌಲ್ ಅವರ ಹೆಸರುಗಳೂ ಸಿಎಂ ಹುದ್ದೆಗೆ ಕೇಳಿ ಬರುತ್ತಿವೆ. ಛತ್ತೀಸ್‌ಗಢದಲ್ಲಿ ಮಾಜಿ ಸಿಎಂ ಡಾ| ರಮಣ್ ಸಿಂಗ್ ಜತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೋ, ನಿವೃತ್ತ ಐಎಎಸ್ ಅಧಿಕಾರಿ ಒ.ಪಿ.ಚೌಧರಿ, ನಿಕಟಪೂರ್ವ ವಿಧಾನಸಭೆಯ ವಿಪಕ್ಷ ನಾಯಕ ಧರಮ್‌ಲಾಲ್ ಕೌಶಿಕ್‌ರ ಹೆಸರುಗಳು ಚಾಲ್ತಿಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.