ನೂತನ ಮೇಯರ್ ಎರಡು ದಿನಗಳೊಳಗೆ ಅಂತಿಮ
Team Udayavani, Feb 26, 2021, 5:50 AM IST
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಯ ಮೇಯರ್-ಉಪಮೇಯರ್ ಅಭ್ಯರ್ಥಿ ಹೆಸರು ಎರಡು ದಿನಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸಹಿತ ಮಂಗಳೂರು ದಕ್ಷಿಣ ಮತ್ತು ಉತ್ತರ ಶಾಸಕರ ಸಮಕ್ಷಮದಲ್ಲಿ ಶನಿವಾರ ಮಹತ್ವದ ಸಭೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿ ಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.
ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಅವರ ಅಧಿಕಾರಾವಧಿ ಫೆಬ್ರವರಿ 28ರಂದು ಕೊನೆಗೊಳ್ಳಲಿದ್ದು, ನೂತನ ಮೇಯರ್, ಉಪಮೇಯರ್ ಆಯ್ಕೆಗೆ ಮಾ. 2ರಂದು ಚುನಾವಣೆ ನಡೆಯಲಿದೆ. ಪಾಲಿಕೆಯಲ್ಲಿ 33ನೇ ಅವಧಿಯ ಮೇಯರ್/ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು, ಮೇಯರ್ ಸಾಮಾನ್ಯ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಈ ಬಾರಿಯ ಮೇಯರ್ ಸ್ಥಾನ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಪಾಲಾಗುವ ಸಾಧ್ಯತೆ ಇದ್ದು, ಪಾಲಿಕೆಯ ಹಿರಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಆದರೆ,ಪಕ್ಷದ ತೀರ್ಮಾನ ಏನೆಂಬುದು ಕೆಲ ದಿನಗಳಲ್ಲಿಯೇ ಹೊರಬೀಳಲಿದೆ.
ಫೆ.28ಕ್ಕೆ ಮೇಯರ್, ಉಪಮೇಯರ್ ಅವಧಿ ಮುಕ್ತಾಯ
ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಅವರ ಅಧಿಕಾರಾವಧಿ ಫೆ. 28ಕ್ಕೆ ಪೂರ್ಣಗೊಳ್ಳಲಿದೆ. ಆದರೆ, ಮಾರ್ಚ್ 2ರಂದು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಮಾರ್ಚ್ 2ರ ವರೆಗೆ ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಮತ್ತು ಉಪಮೇಯರ್ ವೇದಾವತಿ ಅವರ ಅಧಿಕಾರಾವಧಿ ವಿಸ್ತರಣೆ ಗೊಳ್ಳಲಿದೆ ಎಂದು ಪಾಲಿಕೆ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ವಾರಾಂತ್ಯದೊಳಗೆ ಸಭೆ
ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಅಭ್ಯರ್ಥಿ ಯಾರೆಂದು ಇನ್ನೂ ಅಂತಿಮಗೊಂಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಈ ವಾರಾಂತ್ಯದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಯ ಹೆಸರು ಅಂತಿಮಗೊಳಿಸುತ್ತೇವೆ. ಮಾ. 2ರಂದು ಮೇಯರ್, ಉಪಮೇಯರ್ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಪಕ್ಷದ ತೀರ್ಮಾನವೇ ಅಂತಿಮವಾಗಿರುತ್ತದೆ.
-ಡಿ. ವೇದವ್ಯಾಸ ಕಾಮತ್, ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.