ನ್ಯೂಯಾರ್ಕ್: ವಾರಾಂತ್ಯದ ಮೋಜಿಗೆ ಬ್ರೇಕ್
Team Udayavani, May 3, 2020, 4:30 PM IST
ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್: ಅಮೆರಿಕದ ವಿವಿಧ ರಾಜ್ಯಗಳಲ್ಲಿ ಕೋವಿಡ್ 19 ಅಬ್ಬರ ಜೋರಾಗಿದೆ. ಈ ನಡುವೆಯೂ ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾ ದಲ್ಲಿ ಕಳೆದ ವಾರಾಂತ್ಯದಲ್ಲಿ ಜನರು ಕಡಲ ತೀರಕ್ಕೆ ತೆರಳಿ ಮೋಜು-ಮಸ್ತಿಯಲ್ಲಿ ತೊಡಗಿದ್ದರು. ಆದರೆ ಈ ವಾರಾಂತ್ಯದಲ್ಲಿ ಅದು ಮರುಕಳಿಸದಂತೆ ಎಚ್ಚರ ವಹಿಸಲು ನ್ಯೂಯಾರ್ಕ್ ಪೊಲೀಸರು ನಿರ್ಧರಿಸಿದ್ದಾರೆ. ಈಗಾಗಲೇ ನಗರದ ಕಡಲತೀರ ಪ್ರದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿದ್ದು, ನಿಯಮ ಉಲ್ಲಂಘಕರ ವಿರುದ್ಧ ದಂದ ವಿಧಿಸುವುದಲ್ಲದೇ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಲಾಗಿದೆ.
ಕೋವಿಡ್-19 ಪೀಡಿತ ನಗರಗಳ ಪೈಕಿ ನ್ಯೂಯಾರ್ಕ್ ಅಗ್ರಸ್ಥಾನದಲ್ಲಿದೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರಗಡಿ ದಾಟುತ್ತಿದ್ದು, ಸಾವಿನ ಪ್ರಮಾಣವೂ ಏರುತ್ತಿದೆ. ಆದರೆ ಪರಿಸ್ಥಿತಿಯ ತೀವ್ರತೆಯನ್ನು ಅರ್ಥ ಮಾಡಿಕೊಳ್ಳದ ಜನರು ಸರಕಾರದ ಆದೇಶವನ್ನು ಧಿಕ್ಕರಿಸಿ, ಸಾಮಾಜಿಕ ಅಂತರ ಸೇರಿದಂತೆ ಇತರೆ ಯಾವುದೇ ಸುರಕ್ಷಾ ಕ್ರಮಗಳನ್ನು ಪಾಲಿಸುತ್ತಿಲ್ಲ. ಜತೆಗೆ ಕಡಲತೀರ ಪ್ರದೇಶದಲ್ಲಿ ವಿಹರಿಸತೊಡಗಿದ್ದರು. ಈ ವಾರಾಂತ್ಯದಲ್ಲೂ ನಗರದ ತಾಪಮಾನ ಏರುವ ನಿರೀಕ್ಷೆಯಿದ್ದು, ಮತ್ತೆ ಜನರು ಕಡಲತೀರಗಳತ್ತ ಧಾವಿಸಬಹುದೆಂದು ಅಂದಾಜಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಆರೆಂಜ್ ಕೌಂಟಿಯ ನ್ಯೂಪೋರ್ಟ್ ಲಾಸ್ ಏಂಜಲೀಸ್ ಮತ್ತಿತರ ಕಡಲತೀರ ಪ್ರದೇಶಗÙಲ್ಲೂ ಕಣ್ಗಾವಲು ವ್ಯವಸ್ಥೆ ಮಾಡಿದೆ. ಜತೆಗೆ ನ್ಯೂಯಾರ್ಕ್ ನಗರಾದ್ಯಂತ ಹೆಚ್ಚುವರಿಯಾಗಿ 1,000 ಪೊಲೀಸರನ್ನು ನಿಯೋಜಿಸಲಾಗಿದೆ. ಕಡಲತೀರವಲ್ಲದೇ ಉದ್ಯಾನವನಗಳು ಸೇರಿದಂತೆ ಇತರೆ ಸಾರ್ವಜನಿಕ ಪ್ರದೇಶಗಳಲ್ಲೂ ಜನರು ಸೇರದಂತೆ ತಡೆಯುವುದು ಸರಕಾರದ ಉದ್ದೇಶವಾಗಿದೆ. ಬದಲಾಗುತ್ತಿರುವ ಹವಾಮಾನವೂ ಕಡಲತೀರದ ನಗರಗಳಿಗೆ ಹೊಸ ಸವಾಲಾಗಿ ಪರಿಣಮಿಸಿದೆ.
ಈಗಾಗಲೇ ನ್ಯೂಯಾರ್ಕ್ ರಾಜ್ಯದಲ್ಲಿ ಸಾಕಷ್ಟು ನಷ್ಟ ಉಂಟಾಗಿದ್ದು, ಮೂರುಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳಿವೆ. ಈ ಪೈಕಿ 24 ಸಾವಿರಕ್ಕೂ ಹೆಚ್ಚು ಮಂದಿ ಮೃತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.