ಹೊಸಬರ ಡಿಂಡಿಮ ತಯಾರಿ
Team Udayavani, Jun 19, 2020, 6:45 AM IST
ನವಿಲುಗರಿ ಸಿನಿಮಾಸ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ. ಲಕ್ಷ್ಮೀ ಬಾರಮ್ಮಾ ಖ್ಯಾತಿಯ ಚಂದು ಗೌಡ ಅವರು ಬಿಡುಗಡೆ ಮಾಡಿದರು. ಈ ಹಿಂದೆ ಅಭಯ ಹಸ್ತ ಎಂಬ ವಿಭಿನ್ನ ಸಿನಿಮಾವನ್ನು ಡೈರೆಕ್ಟ್ ಮಾಡುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಯುವ ನಿರ್ದೇಶಕ ನವಿಲುಗರಿ ನವೀನ್ ಪಿ ಬಿ ರವರು ಈಗ ಹೊಸ ಕಥೆಯೊಂದಿಗೆ ಹಳೆಯ ಹೆಸರಾಂತ ಕನ್ನಡ ಶೀರ್ಷಿಕೆಯನ್ನು ಇಟ್ಟುಕೊಂಡು ಕನ್ನಡ ಭಾಷೆಯ ಉಳಿವಿನ ಬಗ್ಗೆ ಸಿನಿಮಾ ನಿರ್ದೇಶನ ಮಾಡಲು ಹೊರಟಿದ್ದಾರೆ.
ಅವರ ಹೊಸ ಚಿತ್ರ “ಬಾರಿಸು ಕನ್ನಡ ಡಿಂಡಿಮವ’ ಸಿನಿಮಾದಲ್ಲಿ ಬಹುಪಾಲು ಮಕ್ಕಳನ್ನೇ ನಟನೆ ಮಾಡಿಸುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಿನಿಮಾದಲ್ಲಿ 4 ಹಾಡುಗಳಿದ್ದು ಸಂಗೀತ ಸಂಯೋಜನೆಯನ್ನು ಹೊಸ ಪ್ರತಿಭೆ ಮನುರಾಜ್ ರವರು ನಿಭಾಯಿಸುತ್ತಿದ್ದಾರೆ, ಸಾಹಿತ್ಯವನ್ನು ನವಿಲುಗರಿ ನವೀನ್ ಪಿ ಬಿ,ರಾಜೇಶ್ವರಿ ಸುಂದರ ಮೂರ್ತಿ ಹಾಗೂ ಡಾ. ಕಾಸರಗೋಡು ಅಶೋಕ್ ಕುಮಾರ್ ರವರು ಬರೆದಿದ್ದಾರೆ ಈ ಸಿನಿಮಾಕ್ಕೆ ಅಶ್ವಿಕ ರವರು ಬಂಡವಾಳ ಹೂಡಿಕೆ ಮಾಡುತ್ತಿದ್ದು ಪ್ರೊ. ಡಾ. ದೊಡ್ಡರಂಗೇಗೌಡರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ.
ಈ ಸಿನಿಮಾ ಬಹುತೇಕ ಚಿತ್ರೀಕರಣವನ್ನು ಮೈಸೂರು ಹಾಗೂ ಪಾಂಡವಪುರದ ಭಾಗಗಳಲ್ಲಿ ಚಿತ್ರೀಕರಣ ಮಾಡಲು ಚಿತ್ರ ತಂಡವು ನಿರ್ಧಾರ ಮಾಡಲಾಗಿದೆ. ಈ ಸಿನಿಮಾದ ಕ್ಯಾಮೆರಾ ಹಾಗೂ ಸಂಕಲನ ನಿರ್ದೇಶನದ ಜವಾಬ್ದಾರಿಯನ್ನು ಸ್ವತಃ ನವಿಲುಗರಿ ನವೀನ್ ಪಿ ಬಿ ರವರು ಮಾಡುತ್ತಿದ್ದಾರೆ. ಎಲ್ಲಾ ಅಂದು ಕೊಂಡ ಹಾಗೇ ಆದರೆ ಚಿತ್ರ ತಂಡವು ಆಗಸ್ಟ್ ತಿಂಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮುಹೂರ್ತ ಮಾಡಿ ಚಿತ್ರೀಕರಣಕ್ಕೆ ಹೊರಡಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.