NIA: ಪಂಜಾಬ್, ಹರ್ಯಾಣದ 14 ಸ್ಥಳಗಳಲ್ಲಿ ಎನ್‌ಐಎ ಶೋಧ
Team Udayavani, Nov 22, 2023, 10:03 PM IST
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಪಂಜಾಬ್ ಹಾಗೂ ಹರ್ಯಾಣದ 14 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವರ್ಷ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎನ್‌ಐಎ ಶೋಧ ನಡೆಸಿದೆ. ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಹಾನಿಯುಂಟು ಮಾಡುವ ಉದ್ದೇಶದಿಂದ ಮಾ.19 ಮತ್ತು ಜು.12ರಂದು ನಡೆಸಲಾದ ದಾಳಿಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದ್ದು, ಈ ಹಿಂಸಾತ್ಮಕ ಕೃತ್ಯಗಳ ಹಿಂದೆ ದೊಡ್ಡ ಪಿತೂರಿಯೇ ಇರುವ ಶಂಕೆ ಇದೆ.
ಈ ನಿಟ್ಟಿನಲ್ಲಿ ಪಿತೂರಿಯನ್ನು ಬಹಿರಂಗ ಪಡಿಸಲು ಈ ಕಾರ್ಯಾಚರಣೆ ನಡೆಸಿರುವುದಾಗಿ ಎನ್‌ಐಎ ಅಧಿಕಾರಿಗಳು ಹೇಳಿದ್ದಾರೆ. ಕಾರ್ಯಾಚರಣೆ ಭಾಗವಾಗಿ ಪಂಜಾಬ್‌ನ ಮೊಗಾ, ಜಲಂಧರ್, ಲುಧಿಯಾನ, ಗುರುದಾಸಪುರ, ಮೊಹಾಲಿ ಮತ್ತು ಪಟಿಯಾಲ ಜಿಲ್ಲೆಗಳ ಜತೆಗೆ ಹರ್ಯಾಣದ ಕುರುಕ್ಷೇತ್ರ ಮತ್ತು ಯಮುನಾನಗರ ಜಿಲ್ಲೆಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಆರೋಪಿಗಳಿಗೆ ಸಂಬಂಧಿಸಿದ ಮಾಹಿತಿಗಳಿರುವ ಡಿಜಿಟಲ್ ದತ್ತಾಂಶಗಳು ಮತ್ತು ಇನ್ನಿತರ ಹಲವು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.