ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ?
Team Udayavani, Jul 18, 2019, 3:10 AM IST
ಬೆಂಗಳೂರು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪಿನ ಬೆನ್ನಲ್ಲೇ ಬಿಜೆಪಿ ನಾಯಕರು ಸಕ್ರಿಯರಾಗಿದ್ದು, ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದರೆ ಸ್ವಲ್ಪವೂ ತಡ ಮಾಡದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ ಸರ್ಕಾರ ರಚನೆಗೆ ಮುಂದಾಗಲು ಬಿಜೆಪಿ ನಿರ್ಧರಿಸಿದೆ.
ಜತೆಗೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರಸ್ತಾವ ಸಲ್ಲಿಸಲು ಬುಧವಾರ ಚರ್ಚಿಸಿದ್ದ ಬಿಜೆಪಿಯು ಅಗತ್ಯಬಿದ್ದರೆ ಗುರುವಾರ ಇಲ್ಲವೇ ಪರಿಸ್ಥಿತಿ ಅವಲೋಕಿಸಿ ಸೂಕ್ತ ಸಂದರ್ಭದಲ್ಲಿ ಸ್ಪೀಕರ್ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸುವ ಆಯ್ಕೆಯನ್ನೂ ಇಟ್ಟುಕೊಂಡಿದೆ. ಆ ಮೂಲಕ ಸರ್ಕಾರ ರಚನೆಯ ಅವಕಾಶ ಯಾವ ರೀತಿಯಿಂದಲೂ ಕೈತಪ್ಪದಂತೆ ಎಚ್ಚರಿಕೆಯಿಂದ ಮುಂದುವರಿಯುವ ಕಾರ್ಯತಂತ್ರವನ್ನು ಕಮಲ ಪಾಳಯ ಹೆಣೆದಿದೆ.
ಕಾಂಗ್ರೆಸ್, ಜೆಡಿಎಸ್‌ನ 12 ಶಾಸಕರು ಜು.6ರಂದು ಏಕಕಾಲಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮೈತ್ರಿ ಸರ್ಕಾರದ ಸಂಖ್ಯಾಬಲ ದಿಢೀರ್ ಇಳಿಕೆಯಾಗಿತ್ತು. ಆದರೆ ಶಾಸಕರ ರಾಜೀನಾಮೆ ಅಂಗೀಕಾರ ಇಲ್ಲವೇ ತಿರಸ್ಕಾರ ಹಾಗೂ ಅನರ್ಹತೆ ಕುರಿತಂತೆ ಸ್ಪೀಕರ್ ವಿಚಾರಣೆ ನಡೆಸಿದ ಬಳಿಕವಷ್ಟೇ ತೀರ್ಮಾನಿಸುವುದಾಗಿ ಪ್ರಕಟಿಸಿದರು.
ಆದರೆ ತ್ವರಿತವಾಗಿ ರಾಜೀನಾಮೆ ಅಂಗೀಕರಿಸುವಂತೆ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಬುಧವಾರ ನೀಡಿರುವ ಮಧ್ಯಂತರ ತೀರ್ಪಿನಿಂದ ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರು ನಿರಾಳರಾದಂತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದ್ದು, ಸರ್ಕಾರ ರಚಿಸಿಯೇ ತೀರುವ ಉತ್ಸಾಹದಲ್ಲಿದ್ದಾರೆ.
ಗುರುವಾರ ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚನೆಗೆ ಸಂಬಂಧಪಟ್ಟಂತೆ ಚರ್ಚೆ ಆರಂಭಿಸಲಿದ್ದಾರೆ. ಅವರ ಮಾತಿನ ಧಾಟಿ, ತೆಗೆದುಕೊಳ್ಳುವ ಸಮಯ ಇತರೆ ಅಂಶಗಳನ್ನು ಆಧರಿಸಿ ಬಿಜೆಪಿಯೂ ಚರ್ಚೆಯಲ್ಲಿ ಯಾವ ರೀತಿಯಲ್ಲಿ ಪಾಲ್ಗೊಳ್ಳಬೇಕೆಂಬ ಬಗ್ಗೆ ನಿರ್ಧರಿಸಲಿದೆ. ಮುಖ್ಯಮಂತ್ರಿಗಳು ಸುದೀರ್ಘವಾಗಿ ಗಂಟೆ ಗಟ್ಟಲೇ ಚರ್ಚೆಗೆ ಮುಂದಾದರೆ ಬಿಜೆಪಿ ವತಿಯಿಂದ ನಾಯಕರು ಚುಟುಕಾಗಿ ಮಾತನಾಡಿ ಚರ್ಚೆ ಮುಗಿಸಲು ಚಿಂತಿಸಿದ್ದಾರೆ.
ಇದೇ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚಿಸಬೇಕಿರುವ ಹಿನ್ನೆಲೆಯಲ್ಲಿ ಬಿಜೆಪಿಯು ತಾಳ್ಮೆಯಿಂದಲೇ ಕಲಾಪದಲ್ಲಿ ಪಾಲ್ಗೊಳ್ಳಲು ಚಿಂತಿಸಿದೆ. ಅತೃಪ್ತ ಶಾಸಕರು ಈವರೆಗೆ ತೋರಿದ ಧೋರಣೆಯನ್ನು ಇನ್ನು ಮುಂದೆ ಕೂಡ ಮುಂದುವರಿಸಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಕಲಾಪದಿಂದ ದೂರ ಉಳಿದರೆ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವುದು ಅಸಾಧ್ಯವಾಗಲಿದೆ.
ತಕ್ಷಣವೇ ಪ್ರಮಾಣ ವಚನ ಸ್ವೀಕಾರ: ಬಹುಮತ ಸಾಬೀತುಪಡಿಸಲಾಗದೆ ಮೈತ್ರಿ ಸರ್ಕಾರ ಪತನವಾದರೆ ಸ್ವಲ್ಪವೂ ತಡ ಮಾಡದೆ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರುವುದು, ಅವಕಾಶ ನೀಡಿದರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಕಾಲಮಿತಿಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ಕೋರುವ ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆಯಾಗಿದೆ.
ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಸ್ಪೀಕರ್ ಕೂಡ ಆ ಸ್ಥಾನದಲ್ಲಿ ಮುಂದುವರಿಯುವುದು ಸೂಕ್ತವಲ್ಲ ಎಂಬುದು ಬಿಜೆಪಿ ವಾದ. ಹಾಗಾಗಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡುತ್ತಿದ್ದಂತೆ ಸ್ಪೀಕರ್ ಕೂಡ ರಾಜೀನಾಮೆ ನೀಡಬೇಕೆಂಬ ನಿರೀಕ್ಷೆಯಲ್ಲಿದೆ. ಬುಧವಾರವೇ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪಕ್ಕೆ ಬಿಜೆಪಿ ಚಿಂತಿಸಿದರೂ ಆ ನಿಟ್ಟಿನಲ್ಲಿ ಮುಂದುವರಿದಿಲ್ಲ
ಗುರುವಾರ ಇಲ್ಲವೇ ಮುಂದಿನ ದಿನಗಳಲ್ಲಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಬಳಿಕ ಹಂಗಾಮಿ ಸ್ಪೀಕರ್ ಆಯ್ಕೆ ನಂತರವಷ್ಟೇ ಮುಂದಿನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಬಿಜೆಪಿಯ ಸದ್ಯದ ಕಾರ್ಯತಂತ್ರ. ಹಂಗಾಮಿ ಸ್ಪೀಕರ್ ನೇಮಕಗೊಂಡರೆ ಮುಂದಿನ ಪ್ರಕ್ರಿಯೆಗಳನ್ನು ಅವರು ಕೈಗೊಳ್ಳಲಿದ್ದು, ಸಹಜವಾಗಿಯೇ ಅದು ಬಿಜೆಪಿಗೆ ಪೂರಕವಾಗಿಯೂ ನಡೆದುಕೊಂಡರೆ ಅಚ್ಚರಿ ಇಲ್ಲ!
ಅತೃಪ್ತರ ಪರಿಸ್ಥಿತಿ ಆಧರಿಸಿ ಮುಂದಿನ ಕ್ರಮ: ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು, ಅದನ್ನು ಸ್ಪೀಕರ್ ಅಂಗೀಕರಿಸುವ, ತಿರಸ್ಕರಿಸುವ ಇಲ್ಲವೇ ಅನರ್ಹತೆಗೊಳಿಸುವಂತೆ ಕೈಗೊಳ್ಳುವ ನಿರ್ಧಾರ ಆಧರಿಸಿ ಮುಂದಿನ ಹೆಜ್ಜೆ ಇಡಲು ಬಿಜೆಪಿ ತೀರ್ಮಾನಿಸಿದೆ. ರಾಜೀನಾಮೆ ಅಂಗೀಕಾರವಾದರೆ ಯಾವುದೇ ಸಮಸ್ಯೆ ಇಲ್ಲದೇ ಅತೃಪ್ತರ ನಿರೀಕ್ಷೆಗಳಿಗೆ ಬಿಜೆಪಿ ಮುಕ್ತವಾಗಿ ಸ್ಪಂದಿಸಬಹುದು. ಒಂದೊಮ್ಮೆ ರಾಜೀನಾಮೆ ತಿರಸ್ಕಾರವಾದರೆ ಇಲ್ಲವೇ ಅನರ್ಹಗೊಂಡರೆ ಆಗ ಯಾವ ರೀತಿಯಲ್ಲಿ ಸ್ಪಂದಿಸಿ ಮುಂದುವರಿಯ ಬೇಕು ಎಂಬ ಬಗ್ಗೆ ಹಿರಿಯ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಸುಪ್ರೀಂಕೋರ್ಟ್ ಬುಧವಾರ ನೀಡಿರುವ ಮಧ್ಯಂತರ ತೀರ್ಪಿನ ಪ್ರಕಾರ ಅತೃಪ್ತ ಶಾಸಕರಿಗೆ “ವಿಪ್’ ಅನ್ವಯವಾಗುವುದಿಲ್ಲ. ಹಾಗಾಗಿ ಮೈತ್ರಿ ಸರ್ಕಾರ ಏನೇ ಕಸರತ್ತು ನಡೆಸಿದರೂ ಬಹುಮತ ಸಾಬೀತುಪಡಿಸುವುದು ಕಷ್ಟ. ಈ ನಡುವೆ ಅಗತ್ಯಬಿದ್ದರೆ ಸ್ಪೀಕರ್ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರಯತ್ನ ನಡೆಸುವ ಅವಕಾಶವಿದ್ದು, ಹಂಗಾಮಿ ಸ್ಪೀಕರ್ ನೇಮಕಕ್ಕೆ ಒತ್ತಾಯಿಸಲಾಗುವುದು.
-ಡಾ.ವಾಮನ್ ಆಚಾರ್ಯ, ರಾಜ್ಯ ಬಿಜೆಪಿ ವಕ್ತಾರ
* ಎಂ. ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.