ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಪರಮೇಶ್ವರ್
Team Udayavani, Jun 28, 2019, 5:33 AM IST
ಬೆಂಗಳೂರು: ‘ರಾಜ್ಯದಲ್ಲಿ ಆಪರೇಷನ್‌ಗಳು ನಡೆಯುತ್ತಲೇ ಇರುತ್ತವೆ. ಆದರೆ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಕೆಲವರು ವೈಯಕ್ತಿಕ ಹೇಳಿಕೆ ನೀಡುತ್ತಿದ್ದಾರೆ. ಅದು ಸರ್ಕಾರ ಮತ್ತು ಪಕ್ಷದ ಮಾತಲ್ಲ. ನಾವು ಜನರಿಗೆ ಕೊಟ್ಟ ಭರವಸೆ ಮೇಲೆ ಸರ್ಕಾರ ನಡೆಸುತ್ತಿದ್ದೇವೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದಲೇ ಸೋಲಾಯಿತು ಎಂದು ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅವರ ಅಭಿಪ್ರಾಯಗಳನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಮನಕ್ಕೆ ತರುತ್ತಾರೆ ಎಂದರು.
ಪಕ್ಷದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಪಾರದರ್ಶಕವಾಗಿ ಮಾಡಲು ತೀರ್ಮಾನಿಸಲಾಗಿದೆ. ಈ ಆಯ್ಕೆಯ ಮೇಲೆ ಹೈ ಕಮಾಂಡ್ ಹದ್ದಿನ ಕಣ್ಣಿಡಲಿದೆ. ಕನಿಷ್ಠ 10 ವರ್ಷ ಪಕ್ಷ ಸಂಘಟಿಸಿದವರಿಗೆ ಅವಕಾಶ ಕಲ್ಪಿಸಲಾಗುವುದು. ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಲಾಬಿಗೆ ಅವಕಾಶವಿಲ್ಲ. ಎಐಸಿಸಿ ಕಾರ್ಯ ದರ್ಶಿಗಳು ಆಯ್ಕೆ ಮಾಡಲಿದ್ದಾರೆ. ನಾಲ್ಕು ಕಂದಾಯ ವಿಭಾಗಗಳಿಂದ ಪ್ರತ್ಯೇಕ ಆಯ್ಕೆ ಮಾಡಲಾಗುತ್ತದೆ. ಪದಾಧಿಕಾರಿಗಳ ಸಂಖ್ಯೆಯನ್ನು ನೂರಕ್ಕೆ ಇಳಿಸಲು ತೀರ್ಮಾನಿಸಲಾಗಿದ್ದು, 50 ವರ್ಷ ಮೀರದವರಿಗೆ ಆದ್ಯತೆ ನೀಡಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Suri Loves Sandhya: ಟೀಸರ್‌ನಲ್ಲಿ ಸೂರಿ ಲವ್ ಸ್ಟೋರಿ
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.