ISRO ಮೋದಿ ರೋಡ್ ಶೋ ಇಲ್ಲ, ಬಿಜೆಪಿ ಧ್ವಜ ಪ್ರದರ್ಶನವೂ ಇಲ್ಲ
Team Udayavani, Aug 25, 2023, 11:20 PM IST
ಬೆಂಗಳೂರು: ಚಂದ್ರಯಾನದ ಯಶಸ್ಸಿಗೆ ಕಾರಣರಾದ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಂದರ್ಭದಲ್ಲಿ ನಡೆಸಲು ಉದ್ದೇಶಿಸಿದ್ದ ರೋಡ್ ಶೋಗೆ ಪ್ರಧಾನಿ ಕಾರ್ಯಾಲಯ ತಡೆ ನೀಡಿದ್ದು, ಈ ಕಾರ್ಯಕ್ರಮವನ್ನು ಪಕ್ಷದ ಬದಲು ದೇಶದ ಕಾರ್ಯಕ್ರಮ ಎಂದು ಬಿಂಬಿಸುವಂತೆ ಸೂಚನೆ ನೀಡಿದೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ 5.55ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಇಸ್ರೋ ಕೇಂದ್ರಕ್ಕೆ ತೆರಳುವ ಸಂದರ್ಭದಲ್ಲಿ ಎರಡು ಕಡೆ ರೋಡ್ ಶೋ ನಡೆಸಲು ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು. ಆದರೆ ಈ ಕಾರ್ಯಕ್ಕೆ ಪ್ರಧಾನಿ ಕಾರ್ಯಾಲಯ ಒಪ್ಪಿಗೆ ನೀಡಿಲ್ಲ. ಜತೆಗೆ ಈ ಸಂದರ್ಭದಲ್ಲಿ ಬಿಜೆಪಿ ಧ್ವಜದ ಬದಲು ರಾಷ್ಟ್ರ ಧ್ವಜವನ್ನು ಮಾತ್ರ ಬಳಸಬೇಕೆಂದು ಸೂಚನೆ ನೀಡಲಾಗಿದೆ. ಈ ಮೂಲಕ ಇಸ್ರೋ ಜನನಕ್ಕೆ ಜವಾಹರ್ ಲಾಲ್ ನೆಹರೂ ಕಾರಣ ಎಂದು ಕಾಂಗ್ರೆಸ್ ನೀಡಿದ್ದ ಜಾಹೀರಾತಿಗೆ ಪರೋಕ್ಷ ಟಾಂಗ್ ನೀಡುವುದಕ್ಕೆ ಬಿಜೆಪಿ ಮುಂದಾಗಿದೆ.
ಇದರ ಜತೆಗೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ ಎಂದು ಬಿಜೆಪಿ ನಾಯಕರು ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.