Home loan: ಗೃಹ ಸಾಲಕ್ಕೆ ಇನ್ನು ಫಿಕ್ಸೆಡ್ ಬಡ್ಡಿ- ಸಾಲಕ್ಕೆ ನಿರಖು ಬಡ್ಡಿದರ ಅವಕಾಶ
ಆರ್‌ಬಿಐ ತ್ತೈಮಾಸಿಕ ವಿತ್ತೀಯ ನೀತಿ ಸಭೆಯಲ್ಲಿ ನಿರ್ಣಯ
Team Udayavani, Aug 11, 2023, 6:35 AM IST
ಮುಂಬಯಿ: ವಾಹನ ಮತ್ತು ಗೃಹ ಸಾಲಗಳಿಗೆ ಕಾಲಾನುಕಾಲಕ್ಕೆ ಬದಲಾಗುವ (ಫ್ಲೋಟಿಂಗ್) ಬಡ್ಡಿ ದರದಿಂದ ನಿರಖು (ಫಿಕ್ಸೆಡ್) ಬಡ್ಡಿದರಕ್ಕೆ ಬದಲಾವಣೆ ಮಾಡಿಕೊಳ್ಳುವ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಬೇಕೆಂಬ ನಿಯಮವನ್ನು ಆರ್‌ಬಿಐ ವಿವಿಧ ಬ್ಯಾಂಕ್‌ಗಳಿಗೆ ವಿಧಿಸಿದೆ. ಈ ನಿಯಮ ಹಾಲಿ ಇರುವ ಮತ್ತು ಹೊಸತಾಗಿ ಪಡೆಯಲಿರುವ ಸಾಲಗಳಿಗೆ ಅನ್ವಯವಾಗಲಿದೆ.
ಮುಂಬಯಿಯಲ್ಲಿ ನಡೆದ ಮೂರು ದಿನಗಳ ದ್ವೆ„ಮಾಸಿಕ ವಿತ್ತೀಯ ನೀತಿ ಪರಿಶೀಲನ ಸಭೆಯ ಮುಕ್ತಾಯದ ಬಳಿಕ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಈ ಮಾಹಿತಿ ನೀಡಿದ್ದಾರೆ. ಇದರ ಜತೆಗೆ ಪ್ರಸಕ್ತ ವಿತ್ತೀಯ ವಿರ್ಷದಲ್ಲಿ 3ನೇ ಬಾರಿಗೆ ರೆಪೋ ದರವನ್ನು ಯಥಾ ಸ್ಥಿತಿಯಲ್ಲಿ ಇರಿಸಲು ಕೂಡ ತೀರ್ಮಾನಿಸಲಾಗಿದೆ.
ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡವರಿಗೆ ದೀರ್ಘಕಾಲದಿಂದ ಫ್ಲೋಟಿಂಗ್ ಬಡ್ಡಿ ದರದ ಸ್ಥಿತಿಗತಿಯ ಬಗ್ಗೆ ಸೂಕ್ತ ಮಾಹಿತಿ ರವಾನೆಯಾಗುತ್ತಿರಲಿಲ್ಲ. ಬ್ಯಾಂಕ್‌ಗಳು ಗ್ರಾಹಕರಿಂದ ಒಪ್ಪಿಗೆ ಪಡೆಯದೆ ಬಡ್ಡಿದರ ವಿಧಿಸುತ್ತಿವೆ ಎಂಬ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಅನುಕೂಲ ಹೇಗೆ?
ಮಾಹಿತಿ ನೀಡದೆ ಇರುವ ಅಂಶ ಪರಿಹರಿಸಲು ಸೂಕ್ತ ಕಾರ್ಯಸೂಚಿ ಹೊಂದಲು ತೀರ್ಮಾನಿಸಲಾಗಿದೆ. ಜತೆಗೆ ಸಾಲ ಪಡೆದುಕೊಂಡವರ ಅನುಕೂಲಕ್ಕಾಗಿ ಫಿಕ್ಸೆಡ್ ಬಡ್ಡಿದರ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ಮತ್ತು ಇಎಂಐ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಫಿಕ್ಸೆಡ್ ಬಡ್ಡಿದರಕ್ಕೆ ಬದಲಾಯಿಸಿಕೊಳ್ಳುವ ಬಗ್ಗೆ, ಶೀಘ್ರ ಸಾಲ ಮುಗಿಸುವ ಬಗ್ಗೆ, ಗ್ರಾಹಕರಿಗೆ ವಿಧಿಸಲಾಗಿರುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ಪಾರದರ್ಶಕ ಮಾಹಿತಿ ನೀಡಬೇಕು ಎಂದು ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.
ಮಿತಿ ಏರಿಕೆ
ಯುಪಿಐ ಲೈಟ್ ಮೂಲಕ ಆಫ್ಲೈನ್ ಆಗಿ ಮಾಡಬಹುದಾದ ಕನಿಷ್ಠ ಪಾವತಿ ಮಿತಿಯನ್ನು 200 ರೂ.ಗಳಿಂದ 500 ರೂ.ಗಳಿಗೆ ಹೆಚ್ಚಿಸಲಾಗಿದೆ. ಗರಿಷ್ಠ ಮಿತಿಯನ್ನು 2 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಇದು ಸಣ್ಣ ಪ್ರಮಾಣದಲ್ಲಿ ಪಾವತಿ ಮಾಡುವವರಿಗೆ ಅನುಕೂಲ ಮಾಡಿಕೊಡಲಿದೆ. ಇದರಿಂದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಉಂಟಾಗುವ ಸಾಧ್ಯತೆಗಳು ಇವೆ. ಹಲವು ಕಾಲದಿಂದ ಕನಿಷ್ಠ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಈಗ ಈಡೇರಿಸಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಇದೇ ವೇಳೆ ದೇಶದ ಆರ್ಥಿಕ ಅಭಿವೃದ್ಧಿಯ ದರವನ್ನು ಪ್ರಸಕ್ತ ವಿತ್ತೀಯ ವರ್ಷಕ್ಕೆ ಸಂಬಂಧಿಸಿ ಶೇ. 6.5 ಎಂದು ಆರ್‌ಬಿಐ ನಿಗದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.