ಕಲ್ಲಿದ್ದಲು ಕೊರತೆಯಿಂದ ವಿದ್ಯುತ್‌ ಸ್ಥಗಿತವಿಲ್ಲ: ಸಚಿವ ಸುನಿಲ್‌

Team Udayavani, May 3, 2022, 7:40 AM IST

ಕಲ್ಲಿದ್ದಲು ಕೊರತೆಯಿಂದ ವಿದ್ಯುತ್‌ ಸ್ಥಗಿತವಿಲ್ಲ: ಸಚಿವ ಸುನಿಲ್‌

ಉಡುಪಿ: ಕಲ್ಲಿದ್ದಲು ಕೊರತೆಯಾಗದಂತೆ ಎಲ್ಲ ರೀತಿಯ ಎಚ್ಚರ ವಹಿಸಿದ್ದೇವೆ. ಕೇಂದ್ರ ಸರಕಾರ ದಿಂದ ಬರುತ್ತಿರುವ ಕಲ್ಲಿದ್ದಲ್ಲಿನಲ್ಲಿ ವಿದ್ಯುತ್‌ ಉತ್ಪಾದನೆಯ ನಿರ್ವಹಣೆ ಮಾಡಲಾಗುತ್ತಿದೆ. ಎಲ್ಲಿಯೂ ಉತ್ಪಾದನೆ ಸ್ಥಗಿತವಾಗಿಲ್ಲ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಸೋಮವಾರ ಇಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಎಪ್ರಿಲ್‌ನಲ್ಲಿ ಮಳೆಯೂ ಬಂದಿರು ವುದರಿಂದ ವಿದ್ಯುತ್‌ ಉತ್ಪಾದನೆಗೆ ಯಾವುದೇ ಸಮಸ್ಯೆಯಾಗಿಲ್ಲ. ಮೇ 30ರ ವರೆಗೆ ವಿದ್ಯುತ್‌ ಉತ್ಪಾದನೆ ಸಂಬಂಧಿಸಿ ಎದುರಾಗಬಹು ದಾದ ಸವಾಲುಗಳ ಕುರಿತು ಸಿಎಂ ಮಾರ್ಗದರ್ಶನದಲ್ಲಿ 2 ದಿನಕ್ಕೊಮ್ಮೆ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಮೇ 5-15: ಟಿಸಿ ನಿರ್ವಹಣೆ
ರಾಜ್ಯದಲ್ಲಿ ಎಲ್ಲ ಟ್ರಾನ್ಸ್‌ ಫಾರ್ಮರ್‌(ಟಿಸಿ)ಗಳನ್ನು ವ್ಯವಸ್ಥಿತ ವಾಗಿಸುವ ನೆಲೆಯಲ್ಲಿ ನಿರ್ವಹಣೆ ಅಭಿಯಾನವನ್ನು ಮೇ 5ರಿಂದ 15ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳ ಲಾಗಿದೆ. ಈ ಬಗ್ಗೆ ಎಲ್ಲ ಎಸ್ಕಾಂ ಮತ್ತು ನಿಗಮಗಳಿಗೆ ಸೂಚನೆ ನೀಡಲಾಗಿದೆ. ತಾಂತ್ರಿಕ ದೋಷಗಳಿಂದ ಕೆಲವು ಕಡೆ ಟಿಸಿ ಸ್ಫೋಟಗೊಂಡು ಪ್ರಾಣಹಾನಿ ಸಂಭವಿಸಿತ್ತು. ಮಳೆಗಾಲವೂ ಆರಂಭ ವಾಗುವುದರಿಂದ ಎಚ್ಚರ ವಹಿಸಬೇಕಿದೆ ಎಂದರು.

ಮಧ್ವಾಚಾರ್ಯರ
ಜಯಂತಿ: ಸಿಎಂ ಜತೆ ಚರ್ಚೆ
ಎಲ್ಲ ಮಹನೀಯರ ಜಯಂತಿ ಗಳು ಬೆಂಗಳೂರು ಕೇಂದ್ರಿಕೃತ ವಾಗಿರಬಾರದು ಎಂಬ ನೆಲೆಯಲ್ಲಿ ಜಿಲ್ಲಾ ಕೇಂದ್ರಿತವಾಗಿ ರಾಜ್ಯಮಟ್ಟದ ಜಯಂತಿ ಆಚರಣೆಗೆ ಯೋಜನೆ ರೂಪಿಸಲಾಗಿದೆ. ಮಧ್ವಾಚಾರ್ಯರ ಜಯಂತಿ ಆಚರಿಸುವ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಗಾಳಿಯಲ್ಲಿ ಗುಂಡು
ಹಾರಿಸುವ ಪ್ರಿಯಾಂಕ್‌
ಪಿಎಸ್‌ಐ ಪ್ರಶ್ನೆಪತ್ರಿಕೆ ಅಕ್ರಮಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಿಯಾಂಕ್‌ ಖರ್ಗೆ ಅವರು ಗಾಳಿಯಲ್ಲಿ ಗುಂಡು ಹಾರಿಸುವುದು ಮಾತ್ರ. ಅವರಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟತೆ ಇಲ್ಲ. ಸಿಐಡಿ ನೋಟಿಸ್‌ಗೆ ಉತ್ತರ ಕೊಡದೆ ಪಲಾಯನವಾದ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇನ್ನೂ 20 ಕ್ಷೇತ್ರಗಳಲ್ಲಿ ಚುನಾವಣೆಗೆ ನಿಲ್ಲಲು ಜನರು ಬೇಡಿಕೆ ಇಡುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದರಲ್ಲಿ ಅತ್ಯಂತ ಕಷ್ಟದಲ್ಲಿ ಗೆದ್ದಿದ್ದಾರೆ ಎಂದರು.

ಬಿಜೆಪಿ ಸಂಘಟನೆಯಲ್ಲಿ ಹೊಸ ತನ ನಿರಂತರ ಪ್ರಕ್ರಿಯೆಯಾಗಿದೆ. ಪ್ರತಿ ಕಾರ್ಯಕರ್ತನೂ ಸಮಾಜಕ್ಕೆ ಪೂರಕವಾಗುವಂತ ಆಲೋಚನೆ ಯೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.

ಕನ್ನಡಕ್ಕೆ ಧಕ್ಕೆಯಾದರೆ ಸಹಿಸೆವು
ಬೆಳಗಾವಿಯಲ್ಲಿ ಎಂಇಎಸ್‌ ಕನ್ನಡ ವಿರೋಧಿ ಚಟುವಟಿಕೆ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾಡಳಿತ, ಗೃಹ ಇಲಾಖೆ ಕಠಿನ ಕ್ರಮ ತೆಗೆದುಕೊಳ್ಳಲಿದೆ. ಹಿಂದಿ ಭಾಷೆ ಹೇರಿಕೆ ಎಂಬುದಿಲ್ಲ, ಹಿಂದಿ ಅನ್ಯ ರಾಜ್ಯದವರೊಂದಿಗೆ ವ್ಯವಹರಿಸಲು ಸಂಪರ್ಕ ಭಾಷೆಯಾಗಿ ಬಳಸುವ ಬಗ್ಗೆ ಕೇಂದ್ರ ಸರಕಾರ ಹೇಳಿದೆ. ಕರ್ನಾಟಕದಲ್ಲಿ ಕನ್ನಡವೇ ಪ್ರಧಾನ, ಕನ್ನಡಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ ಎಂದು ಸಚಿವ ಸುನಿಲ್‌ ಹೇಳಿದರು.

ಮಸೀದಿ ಆಜಾನ್‌ಗೆ ಸಂಬಂಧಿಸಿ ಕೋರ್ಟ್‌ ನೀಡಿರುವ ತೀರ್ಪಿಗೆ ಸರಕಾರ ಬದ್ಧವಾಗಿದೆ. ಆಜಾನ್‌ ಮೊಳಗುವ ಮಸೀದಿ ಎದುರು ಭಜನೆ ನಡೆಸುವ ಹಿಂದೂಪರ ಸಂಘಟನೆಗಳ ನಿಲುವಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಟಾಪ್ ನ್ಯೂಸ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.