OPS ಮರುಜಾರಿ ಬೇಡ- ರಾಜ್ಯಗಳಿಗೆ ಆರ್‌ಬಿಐ ಸೂಚನೆ
Team Udayavani, Dec 12, 2023, 8:39 PM IST
ನವದೆಹಲಿ: ಹಳೆಯ ಪಿಂಚಣಿ ವ್ಯವಸ್ಥೆ(ಒಪಿಎಸ್) ಮರುಜಾರಿ ನಿರ್ಧಾರ ಕೈಗೊಳ್ಳುವುದರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಎಚ್ಚರಿಕೆ ಸಂದೇಶ ರವಾನಿಸಿದೆ.
ಇಂಥ ನಿರ್ಧಾರಗಳು ವೆಚ್ಚವನ್ನು ಹೆಚ್ಚಿಸಿ, ಅಭಿವೃದ್ಧಿಗೆ ಕಡಿವಾಣ ಹಾಕಲಿದೆ. ಅಲ್ಲದೆ, ನಾವು ಹಿಮ್ಮುಖವಾಗಿ ಹೆಜ್ಜೆಯಿಟ್ಟಂತಾಗಲಿದೆ ಎಂದೂ ಹೇಳಿದೆ. ಹಲವು ರಾಜ್ಯಗಳು ಒಪಿಎಸ್ ಮರುಜಾರಿ ಮಾಡುವ ಕುರಿತು ಘೋಷಿಸುತ್ತಿರುವ ಹಾಗೂ ಆಶ್ವಾಸನೆಗಳನ್ನು ನೀಡುತ್ತಿರುವಂತೆಯೇ ಆರ್‌ಬಿಐನಿಂದ ಇಂಥ ಸಂದೇಶ ಹೊರಬಿದ್ದಿದೆ.
ಎಲ್ಲ ರಾಜ್ಯಗಳೂ ಹೊಸ ಪಿಂಚಣಿ ವ್ಯವಸ್ಥೆಯಿಂದ ಹಳೆಯ ಪಿಂಚಣಿ ವ್ಯವಸ್ಥೆಗೆ ಮರಳಿದರೆ, ಸಂಚಿತ ಹಣಕಾಸಿನ ಹೊರೆ ಎನ್‌ಪಿಎಸ್‌ಗಿಂತ 4.5 ಪಟ್ಟು ಹೆಚ್ಚಳವಾಗಲಿದೆ. ಜೊತೆಗೆ, 2060ರ ವೇಳೆಗೆ ಹೆಚ್ಚುವರಿ ಹೊರೆಯು ವಾರ್ಷಿಕವಾಗಿ ಜಿಡಿಪಿಯ ಶೇ.0.9ಕ್ಕೆ ತಲುಪಲಿದೆ. ಇದು 2040ರ ದಶಕದ ಆರಂಭದಲ್ಲಿ ನಿವೃತ್ತರಾಗುವವರ ಹಿರಿಯ ಒಪಿಎಸ್ ಪಿಂಚಣಿದಾರರ ಪಿಂಚಣಿ ಹೊರೆಯನ್ನೂ ಹೆಚ್ಚಿಸುತ್ತದೆ ಎಂದು ಹೇಳಿದೆ. ಇದೇ ವೇಳೆ, ಜನರಿಗೆ ಅನಗತ್ಯ ಸಬ್ಸಿಡಿ ಒದಗಿಸುವುದರಿಂದಲೂ ದೂರವಿರುವಂತೆ ರಾಜ್ಯಗಳಿಗೆ ಸಲಹೆ ನೀಡಿದೆ.
2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯಗಳ ಹಣಕಾಸು ಕುರಿತು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ವರದಿ ಪ್ರಕಟಗೊಂಡಿದ್ದು, ಸ್ಟಾಂಪ್ ಶುಲ್ಕ, ನೋಂದಣಿ ಶುಲ್ಕ ಹೆಚ್ಚಳದಂಥ ಕ್ರಮಗಳ ಮೂಲಕ ರಾಜ್ಯಗಳು ತಮ್ಮ ಸ್ವಂತ ತೆರಿಗೆ ಆದಾಯವನ್ನು ಹೆಚ್ಚಳ ಮಾಡಬೇಕು. ಜತೆಗೆ, ಇತರೆ ಶುಲ್ಕಗಳನ್ನು ಹೆಚ್ಚಳ ಮಾಡಿ ತೆರಿಗೆಯೇತರ ಆದಾಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಆರ್‌ಬಿಐ ಸಲಹೆ ನೀಡಿದೆ.
ಹಾದಿತಪ್ಪಿಸುವ ಜಾಹೀರಾತು ಬಗ್ಗೆ ಎಚ್ಚರ
ಸಾಲ ಮನ್ನಾದ ಆಶ್ವಾಸನೆ ನೀಡುತ್ತೇವೆಂದು ಹಾದಿತಪ್ಪಿಸುವಂಥ ಜಾಹೀರಾತುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಆರ್‌ಬಿಐ ಸೂಚನೆ ನೀಡಿದೆ. ಈ ರೀತಿಯ ಜಾಹೀರಾತು ನೀಡುವ ಸಂಸ್ಥೆಗಳು, ನೀವು ಬ್ಯಾಂಕುಗಳಿಗೆ ಬಾಕಿ ಪಾವತಿಸಬೇಕಾದ ಅಗತ್ಯವಿಲ್ಲ ಎಂದು ಪ್ರತಿಪಾದಿಸುತ್ತವೆ. ಇಂಥ ಚಟುವಟಿಕೆಗಳು ಹಣಕಾಸು ಸಂಸ್ಥೆಗಳ ಸ್ಥಿರತೆಯನ್ನು ಮತ್ತು ಠೇವಣಿದಾರರ ಹಿತಾಸಕ್ತಿಯನ್ನು ದುರ್ಬಲಗೊಳಿಸುತ್ತದೆ. ಈ ಸಂಸ್ಥೆಗಳ ಜಾಹೀರಾತುಗಳಿಗೆ ಮಾರುಹೋದರೆ ನೇರ ಆರ್ಥಿಕ ನಷ್ಟಕ್ಕೆ ಸಿಲುಕುತ್ತೀರಿ ಎಂದೂ ಆರ್‌ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.