ಕುಟುಂಬ ಕಾರಣದಿಂದ ರಾಜ್ಯಾಧ್ಯಕ್ಷನಾಗಿಲ್ಲ: ಬಿ.ವೈ. ವಿಜಯೇಂದ್ರ
Team Udayavani, Mar 24, 2024, 12:03 AM IST
ಬೆಂಗಳೂರು: ತಮ್ಮ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ “ಕುಟುಂಬ ರಾಜಕಾರಣ’ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಈ ಹುದ್ದೆಗೆ ನನ್ನನ್ನೇ ಯಾಕೆ ಆಯ್ಕೆ ಮಾಡಿದರು ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಬಿಜೆಪಿ ಚುನಾವಣ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಕೆ.ಎಸ್.ಈಶ್ವರಪ್ಪ ಸಹಿತ ಅನೇಕ ಹಿರಿಯರಿಗೆ ತಿರುಗೇಟು ನೀಡಿದ್ದಾರೆ.
ಕುಟುಂಬ ರಾಜಕಾರಣದ ಹಿನ್ನೆಲೆಯಲ್ಲಿ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ. ಈ ರೀತಿ ಧೈರ್ಯದಿಂದ ಹೇಳುವುದಕ್ಕೆ ನನಗೆ ಯಾವುದೇ ಸಂಕೋಚವೂ ಇಲ್ಲ. ಪಕ್ಷದ ತೀರ್ಮಾನವನ್ನು ಒಪ್ಪಿಕೊಂಡು ನಾನು ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ.
ಯಡಿಯೂರಪ್ಪನವರ ಮಗನಾದರೂ ನನಗೆ ಈ ಹಿಂದೆ ಅವಕಾಶಗಳು ತಪ್ಪಿದ ಉದಾಹರಣೆ ಇದೆ. ಹಿಂದೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಮುಂದಾದಾಗ ವರಿಷ್ಠರು ಒಪ್ಪಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನನ್ನನ್ನು ವಿಧಾನಪರಿಷತ್ ಸದಸ್ಯನನ್ನಾಗಿ ಮಾಡಲು ರಾಜ್ಯ ಕೋರ್ ಕಮಿಟಿ ತೀರ್ಮಾನ ಮಾಡಿತ್ತು. ಆಗಲೂ ವರಿಷ್ಠರು ಸಮ್ಮತಿ ನೀಡಿರಲಿಲ್ಲ. ಪಕ್ಷದ ಎಲ್ಲ ತೀರ್ಮಾನಗಳನ್ನು ನಾನು ಒಪ್ಪಿಕೊಂಡಿದ್ದೇನೆ ಎನ್ನುವ ಮೂಲಕ ನಾನು “ವರಿಷ್ಠರ ಆಯ್ಕೆ’ ಎಂದು ಪರೋಕ್ಷವಾಗಿ ಪ್ರತಿಪಾದಿಸಿದ್ದಾರೆ.
ಹತ್ತು ವರ್ಷಗಳ ಬಳಿಕವೂ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಜನಪ್ರಿಯತೆಯಲ್ಲಿ ಮತ್ತಷ್ಟು ಎತ್ತರಕ್ಕೆ ಹೋಗಿದೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತಾರೆ. ರಾಜ್ಯದ ಯಾವ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಕರ್ನಾಟಕ ಬಿಜೆಪಿಯ ದಕ್ಷಿಣ ಭಾರತದ ಹೆಬ್ಟಾಗಿಲು ಎಂದು ಆರೋಪಿಸಿದರು.
ಕೇಂದ್ರದಲ್ಲಿ ಯಾವುದೇ ಸರಕಾರ ಅಡಳಿತ ನಡೆಸಿದರೂ 10 ವರ್ಷಗಳ ಬಳಿಕ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ ಮೋದಿಯವರ ವರ್ಚಸ್ಸು ಕಿಂಚಿತ್ತೂ ಕಡಿಮೆಯಾಗಿಲ್ಲ. ಇಲ್ಲಿನ ಚುನಾವಣೆ ಫಲಿತಾಂಶ ಏನೆಂಬುದನ್ನು ವಿದೇಶಗಳೂ ಕಾತರದಿಂದ ನೋಡುತ್ತಿವೆ. ನರೇಂದ್ರ ಮೋದಿ ನಾಯಕತ್ವಕ್ಕೆ ಸರಿ ಸಮಾನ ನಾಯಕರು ವಿಪಕ್ಷದಲ್ಲಿ ಯಾರೂ ಇಲ್ಲ. ಇಡೀ ದೇಶದಲ್ಲಿ ನರೇಂದ್ರ ಮೋದಿ ವಾತಾವರಣ ಇದೆ. ಮುಂದಿನ 60 ದಿನಗಳ ಕಾಲ ಎಲ್ಲವನ್ನೂ ಬದಿಗಿಟ್ಟು, ಮೋದಿ ಕೈ ಬಲಪಡಿಸುವ ಕೆಲಸ ನಡೆಯಬೇಕು ಎಂದು ಕರೆ ನೀಡಿದರು.
ರಾಜ್ಯ ಚುನಾವಣ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್, ವಿಪಕ್ಷ ನಾಯಕ ಆರ್.ಅಶೋಕ್, ಚುನಾವಣ ನಿರ್ವಹಣೆ ಸಮಿತಿ ರಾಜ್ಯ ಸಂಚಾಲಕರಾದ ವಿ.ಸುನಿಲ್‌ಕುಮಾರ್, ಮಾಜಿ ಶಾಸಕ ಪ್ರೀತಂ ಗೌಡ, ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.