“ಉಸ್ತುವಾರಿ ಸಿಗದಿರುವುದಕ್ಕೆ ಅಸಮಾಧಾನವಿಲ್ಲ’
Team Udayavani, Apr 11, 2020, 5:18 AM IST
ಬೆಂಗಳೂರು: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ವಿಷಯದಲ್ಲಿ ನನಗೆ ಯಾವುದೇ ಬೇಸರವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸುತ್ತಿದ್ದೇನೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನನಗೆ ಕೊಡುವುದು ಬೇಡ. ಸದ್ಯಕ್ಕೆ ಜಗದೀಶ್ ಶೆಟ್ಟರ್ ಅವರೇ ಮುಂದುವರಿಯಲಿ ಎಂದು ನಾನೇ ಮುಖ್ಯಮಂತ್ರಿ ಬಳಿ ವಿನಂತಿಸಿದ್ದೆ. ಇದರಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಉಸ್ತುವಾರಿ ಸಚಿವರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿಯನ್ನು ಮೊದಲ ಬಾರಿಗೆ ಬೇರೆ ಜಿಲ್ಲೆಯ ಸಚಿವರೊಬ್ಬರಿಗೆ ಕೊಡಲು ಸಿಎಂ ಮುಂದಾಗಿದ್ದರು. ಆದರೆ ಶೆಟ್ಟರ್‌ಗೆ ಕೊಡುವಂತೆ ನಾನೇ ವಿನಂತಿಸಿದ್ದೆ. ನನ್ನ ಮನವಿ ಯಂತೆ ಶೆಟ್ಟರ್‌ಗೆ ನೀಡಲಾಗಿದೆ. ಅವರೇ ಮುಂದುವರಿ ಯಲಿ ಎಂದೂ ಹೇಳಿದ್ದೆ. ಸದ್ಯಕ್ಕೆ ನನಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಬೇಡ. ಜಲಸಂಪನ್ಮೂಲ ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ. ಚುನಾವಣೆಗೆ ಒಂದು ವರ್ಷ ಇರುವಾಗ ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.