Medical- Dental Course: ಮೂಲ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ
Team Udayavani, Sep 24, 2023, 11:14 PM IST
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ “ವೈ’ ವರ್ಗದಡಿ ಹೊರತುಪಡಿಸಿ ಬೇರೆ ವರ್ಗಗಳಡಿಯಲ್ಲಿ ಪ್ರವೇಶಾತಿ ಬಯಸಿರುವ ಅರ್ಹ ಅಭ್ಯರ್ಥಿಗಳು ಸೆ.25 ಮತ್ತು 26ರಂದು ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ, ಈ ಸಂಬಂಧದ ವೇಳಾಪಟ್ಟಿಯನ್ನು ಪ್ರಾಧಿಕಾರದ ಜಾಲತಾಣ http://kea.kar.nic.in ನಲ್ಲಿ ಪ್ರಕಟಿಸಿರುವ ಪಿಜಿಸಿಇಟಿ-2023 ವಾರ್ತಾಪತ್ರದಲ್ಲಿ ಗಮನಿಸಬೇಕು ಎಂದು ತಿಳಿಸಿದ್ದಾರೆ.
2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪರಿಷ್ಕರಣೆ
ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಅರ್ಹತಾ ಮಾನದಂಡವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ 2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಕೂಡ ಪರಿಷ್ಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಪ್ರಾಧಿಕಾರಕ್ಕೆ ಮೂಲದಾಖಲೆಗಳನ್ನು ಸಲ್ಲಿಸಿರುವ ಮತ್ತು ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಸೆ.25ರ ಸಂಜೆ 5 ಗಂಟೆಯಿಂದ ಸೆ.27ರ ಮಧ್ಯಾಹ್ನ 2 ಗಂಟೆಯವರೆಗೆ ತಮ್ಮ ಆಪ್ಶನ್ಸ್ ಬದಲಾಯಿಸಲು ಮತ್ತು ರದ್ದುಪಡಿಸಲು ಅವಕಾಶವಿದೆ. ಸೆ.28ರ ರಾತ್ರಿ 9 ಗಂಟೆಯ ನಂತರ 2ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.
ಪಿಜಿ ದಂತ ವೈದ್ಯಕೀಯ
ಎಂಸಿಸಿ ಅರ್ಹತಾ ಮಾನ ದಂಡವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಅರ್ಹ ಸ್ನಾತ ಕೋತ್ತರ ದಂತ ವೈದ್ಯಕೀಯ ಅಭ್ಯರ್ಥಿಗಳು ಸೆ.24ರ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಿ ಸೆ.25ರ ಮಧ್ಯರಾತ್ರಿಯವರೆಗೆ ಆನ್ಲೈನ್ ಮೂಲಕ ನೋಂದಣಿ, ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.