ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

Team Udayavani, Jun 15, 2024, 11:52 PM IST

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ಮಂಗಳೂರು: ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣ ರಾವ್‌ ನಿಗಮದ ಕೇಂದ್ರ ಕಚೇರಿಗೆ ಶನಿವಾರ ಭೇಟಿ ನೀಡಿ ನಿಗಮದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು.

ಅನಂತರ ಮಂಗಳೂರಿನ ಮೀನುಗಾರಿಕೆ ಬಂದರು, ಮಂಜುಗಡ್ಡೆ ಸ್ಥಾವರ, ಡೀಸೆಲ್‌ ಬಂಕ್‌ಗಳ ಸ್ಥಿತಿಗತಿ ಪರಿಶೀಲಿಸಿದರು. ನಾಡದೋಣಿಗಳ ನಿಲುಗಡೆಗೆ ನಿಗಮದಿಂದ ಕೈಗೊಂಡಿ ರುವ ತೇಲುವ ಜೆಟ್ಟಿ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಅವರು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಮೀನುಗಾರಿಕೆ ಬಂದರಿಗೆ ಭೇಟಿ ವೇಳೆ ಸಮಯದಲ್ಲಿ ಉಪಸ್ಥಿತರಿದ್ದ ಬೋಟ್‌ ಮಾಲಕರು ಮತ್ತು ಮೀನುಗಾರರಿಂದ ಮೀನುಗಾರಿಕೆ ವಿಧಾನಗಳು, ದೋಣಿಗಳು ಮತ್ತು ಮೀನುಗಾರಿಕೆ ಚಟುವಟಟಿಕೆಗಳ ಬಗ್ಗೆ ಮಾಹಿತಿ ಪಡೆದರು.

ನೂತನ ಯೋಜನೆ
ಜಾರಿಗೆ ಸೂಚನೆ
ನಿಗಮದ ಎಲ್ಲ ಶಾಖೆಗಳ ಶಾಖಾಧಿಕಾರಿಗಳೊಂದಿಗೆ ಸಭೆ ಯನ್ನು ನಡೆಸಿದ ಅವರು, ನಿಗಮದಲ್ಲಿ ಮೀನುಗಾರಿಕೆಗೆ ಮತ್ತು ಮೀನುಗಾರರಿಗೆ ಸಂಬಂಧಿಸಿದ ಚಾಲ್ತಿಯಲ್ಲಿರುವ ಯೋಜನೆಗಳು ಮತ್ತು 2024-25ನೇ ವರ್ಷದಲ್ಲಿ ನಿಗಮದಿಂದ ಕರಾವಳಿ ಮತ್ತು ಒಳನಾಡು ವಿಭಾಗದ ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ನೂತನ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ಪ್ರಸ್ತುತ ಯೋಜನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಡದೋಣಿಗಳಿಗೆ
ಸೀಮೆ ಎಣ್ಣೆ
ನಿಗಮದ ವತಿಯಿಂದ ನಾಡದೋಣಿಗಳಿಗೆ ಅವಶ್ಯವಿರುವ ಸೀಮೆ ಎಣ್ಣೆ ವಿತರಣೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮೀನು ಹಿಡುವಳಿಯ ಮಾರಾಟಕ್ಕಾಗಿ ಉತ್ತಮ ವಾತಾವರಣವನ್ನು ಕಲ್ಪಿಸುವ ಹಿನ್ನಲೆಯಲ್ಲಿ ಹೊಸ ಮೀನು ಮಾರುಕಟ್ಟೆಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಾಣ ಚಿಂತನೆ ನಡೆಸಲಾಗಿದೆ ಎಂದರು. ಹೊನ್ನಾವರ ಬಂದರಿನಲ್ಲಿ ಮೀನುಗಾರ ಬೋಟುಗಳಿಗೆ ಕರರಹಿತ ಡೀಸಿಲನ್ನು ವಿತರಿಸಲು ಬಂಕ್‌ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಂವಾದ
ಉಳ್ಳಾಲ ಮಹಿಳಾ ಮೀನುಗಾರಿಕಾ ಸಹಕಾರಿ ಸಂಘದ ಕಚೇರಿಗೆ ಭೇಟಿ ನೀಡಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದವನ್ನು ನಡೆಸಿ, ಮೀನುಗಾರಿಕಾ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರ ಮತ್ತು ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

ಸಂಘದ ಅಧ್ಯಕ್ಷೆ ಜಾನಕಿ ಪುತ್ರನ್‌, ಉಪಾಧ್ಯಕ್ಷೆ ಮೀನಾಕ್ಷಿ ಹಾಗೂ ನಿರ್ದೇಶಕರಾದ ನಾರಾಯಣಿ, ರೋಹಿಣಿ ಮತ್ತು ಸಂಘದ ಕಾರ್ಯದರ್ಶಿ ಉಮಾವತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.