ವಿದೇಶಿ ಹಾಲು ಆಮದು ವಿರುದ್ಧ ಹೋರಾಟಕ್ಕೆ ಸೂಚನೆ
Team Udayavani, Oct 24, 2019, 3:07 AM IST
ಬೆಂಗಳೂರು: ಕೇಂದ್ರ ಸರ್ಕಾರ ವಿದೇಶದಿಂದ ಹಾಲು ಹಾಗೂ ಹಾಲಿನ ಉತ್ಪನ್ನ ಆಮದು ಮಾಡಿಕೊಳ್ಳಲು ಮುಂದಾಗಿರುವುದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸುವಂತೆ ಸಿದ್ದರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಸರಣಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ನಡೆ ವಿರೋಧಿಸಿರುವ ಅವರು, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ)ಅಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ, ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ. ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣ ಶಾಸನವಾಗಲಿದೆ.
ದೇಶದಲ್ಲಿ ಸುಮಾರು 10 ಕೋಟಿ ರೈತರು ಹೈನುಗಾರಿಕೆ ಅವಲಂಬಿಸಿದ್ದಾರೆ. ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವುದರಿಂದ ನಮ್ಮ ರೈತರನ್ನು ಬೀದಿ ಪಾಲು ಮಾಡಿದಂತಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
“ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು “ಕ್ಷೀರಧಾರೆ’ ಮತ್ತು ಶಾಲಾ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು “ಕ್ಷೀರಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಮೋದಿ ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ.
ಯುಪಿಎ ಸರ್ಕಾರ ಆರ್ಸಿಇಪಿ ಮಾತು ಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ, ಮೋದಿ ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ ಎಂದು ದೂರಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೇಂದ್ರದ ನಿರ್ಧಾರವನ್ನು ವಿರೋಧಿಸಿರುವುದನ್ನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಗುರುವಾರ ನಡೆಯುವ ಆರ್‌ಸಿಇಪಿ ಒಪ್ಪಂದ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿವೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ರೈತ ಸಂಘದ ಮುಖಂಡ ಡಾ.ಗುರುಪ್ರಸಾದ್, ಆರ್‌ಸಿಇಪಿ ಒಪ್ಪಂದವು ರೈತರ ಮರಣ ಶಾಸನವಾಗಿದ್ದು, ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಇದಕ್ಕೆ ಸಹಿ ಹಾಕಬಾರದು.
ಭಾರತ ಈಗಾಗಲೇ ಏಷ್ಯಾ ಫೆಸಿಪಿಕ್, ಜಿಎಸ್‌ಟಿಪಿ, ಡಬ್ಲೂéಟಿಒ, ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ನಮ್ಮ ಉತ್ಪನ್ನ ಹಾಗೂ ಮಾರು ಕಟ್ಟೆ ಎರಡನ್ನೂ ಕಳೆದುಕೊಂಡಿದ್ದೇವೆ. ಇದೀಗ ಆರ್‌ಸಿಇಪಿ ಮೂ ಲಕ ಬೇರೆ ರಾಷ್ಟ್ರಗಳು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಭಾರತದ ಮಾರುಕಟ್ಟೆಗೆ ಸುರಿಯುವ ತಂತ್ರ ರೂಪಿಸಿವೆ ಎಂದು ದೂರಿದರು.
ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾಗಳು ಉತ್ಪಾದಿಸುವ ಹಾಲಿನ ಉತ್ಪನ್ನಗಳಿಗೆ ಅಲ್ಲಿ ಮಾರುಕಟ್ಟೆ ಇಲ್ಲದೆ ಸಮುದ್ರಕ್ಕೆ ಚೆಲ್ಲಲಾಗುತ್ತಿದೆ. ಹೀಗಾಗಿ, ಭಾರತದಲ್ಲಿ ಅದನ್ನು ಮಾರುಕಟ್ಟೆ ಮಾಡುವ ಹುನ್ನಾರ ಅಡಗಿದೆ. ಕಾರ್ಪೋರೇಟ್ ಫ್ರೆಂಡ್ಲಿ ಯಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಬೇರೆ ರಾಷ್ಟ್ರದ ಉತ್ಪನ್ನಗಳು ನಮ್ಮಲ್ಲಿಗೆ ಬಂದು, ಕಡಿಮೆ ಬೆಲೆಗೆ ಸಿಗುವಂತಾದರೆ ನಮ್ಮ ರೈತರು ಆತ್ಮ ಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಥಾಯ್ಲೆಂಡ್‌ನ ಬ್ಯಾಂಕಾಂಕ್‌ನಲ್ಲಿ ಅ.24ರಂದು ನಡೆಯುವ ಒಪ್ಪಂದ ವಿರೋ ಧಿ ಸಬೇಕು. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಇದಕ್ಕೆ ಸಹಿ ಹಾಕ ಬಾರದು ಎಂದು ಒತ್ತಾಯಿಸಿ ರೈತ ಸಂಘಟನೆಗಳು ರಾಜ್ಯಾದ್ಯಂತ ಗುರುವಾರ ಹಮ್ಮಿ ಕೊಂ ಡಿರುವ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.