Politics: ಸಚಿವ ರಾಜಣ್ಣರಿಗೆ ನೋಟಿಸ್?
Team Udayavani, Sep 21, 2023, 11:25 PM IST
ಬೆಂಗಳೂರು: ಮೂರು ಉಪ ಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಹಾಗೂ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ವಿಸರ್ಜನೆ ಬಗ್ಗೆ ಹೇಳಿಕೆ ನೀಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಖೀಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಗುರುವಾರ ಶೋಕಾಸ್ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ.
ಪಕ್ಷದ ಶಿಸ್ತು ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರಾಜಣ್ಣರಿಗೆ ನೋಟಿಸ್ ನೀಡಿದಲ್ಲಿ, ಕೇವಲ ಹತ್ತು ದಿನಗಳ ಅಂತರದಲ್ಲಿ ಕಾಂಗ್ರೆಸ್ ನೀಡುತ್ತಿರುವ ಎರಡನೇ ನೋಟಿಸ್ ಇದಾಗ ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ಕಾರಣಕ್ಕೆ ಬಿ.ಕೆ. ಹರಿಪ್ರಸಾದ್ ಅವರಿಗೆ ಸೆ. 12ರಂದು ಎಐಸಿಸಿ ಶೋಕಾಸ್ ನೋಟಿಸ್ ನೀಡಿ, ಹತ್ತು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು.
ಸಮುದಾಯವಾರು ಮೂವರು ಉಪಮುಖ್ಯಮಂತ್ರಿ (ಡಿಸಿಎಂ)ಗಳನ್ನು ಮಾಡಬೇಕು. ಲೋಕಸಭಾ ಚುನಾವಣೆ ಗೆಲುವಿಗೆ ಈ ಕ್ರಮ ಬಹಳ ಪ್ರಮುಖವಾದುದು ಎಂದು ರಾಜಣ್ಣ ಹೇಳಿದ್ದರು. ಬಳಿಕ ಈ ವಿಚಾರ ಪಕ್ಷದಲ್ಲಿ ತೀವ್ರ ಚರ್ಚೆಗೀಡಾಗಿ ಪರ-ವಿರೋಧಗಳು ವ್ಯಕ್ತವಾಗಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಂದ ಈ ಮಾತನ್ನು ಹೇಳಿಸುತ್ತಿದ್ದಾರೆ ಎಂಬ ಮಾತೂ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.