“ಲೋಕಲ್ ಫೈಟ್’ಗೆ ಇಂದು ಅಧಿಸೂಚನೆ ಪ್ರಕಟ
Team Udayavani, May 9, 2019, 3:04 AM IST
ಬೆಂಗಳೂರು: ಮೇ 29ರಂದು ಮತದಾನ ನಡೆಯಲಿರುವ ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಗುರುವಾರ ಅಧಿಕೃತವಾಗಿ ಅಧಿಸೂಚನೆ ಹೊರಬೀಳಲಿದ್ದು, ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.
ಅದರಂತೆ ಮೇ 9ರಿಂದಲೇ ಎಲ್ಲಾ ಕಡೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. 2019ರ ಮಾರ್ಚ್ ಹಾಗೂ ಜುಲೈನಲ್ಲಿ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 103 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ 39 ನಗರ ಸ್ಥಳೀಯ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮೇ 2ರಂದು ವೇಳಾಪಟ್ಟಿ ಪ್ರಕಟಿಸಿತ್ತು.
ರಾಜ್ಯದ 22 ಜಿಲ್ಲೆಗಳಲ್ಲಿ 8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 63 ನಗರ ಸ್ಥಳೀಯ ಸಂಸ್ಥೆಗಳ 1,361 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಬಿಬಿಎಂಪಿಯ ಎರಡು ವಾರ್ಡ್, ತುಮಕೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಬೆಳಗಾವಿ ಜಿಲ್ಲೆಯ ಸದಲಗಾ ಪುರಸಭೆ ಮತ್ತು ಮುಗಳಖೋಡ ಪುರಸಭೆಯ ಒಂದೊಂದು ವಾರ್ಡ್‌ಗೆ ಉಪ ಚುನಾವಣೆ ನಡೆಯಲಿದೆ.
ಮೇ 29ಕ್ಕೆ ಮತದಾನ: ಮೇ 29ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಮೇ 20 ಕೊನೆ ದಿನ. ಮೇ 31ರಂದು ಮತಗಳ ಎಣಿಕೆ ನಡೆಯಲಿದೆ.
ಎಲ್ಲೆಲ್ಲಿ ಚುನಾವಣೆ?
8 ನಗರಸಭೆ: ಹಿರಿಯೂರು, ಹರಿಹರ, ಶಿಡ್ಲಘಟ್ಟ, ಸಾಗರ, ತಿಪಟೂರು, ನಂಜನಗೂಡು, ಬಸವಕಲ್ಯಾಣ, ಶಹಾಪುರ.
33 ಪುರಸಭೆ: ಆನೇಕಲ್, ದೇವನಹಳ್ಳಿ, ನೆಲಮಂಗಲ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಶಿಕಾರಿಪುರ, ಪಾವಗಡ, ಕುಣಿಗಲ್, ಕೆ.ಆರ್. ನಗರ, ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವ, ಭಟ್ಕಳ, ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ.
22 ಪಟ್ಟಣ ಪಂಚಾಯಿತಿ: ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಸೊರಬ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಅಳ್ನಾವರ, ಹೊನ್ನಾವರ, ಸಿದ್ದಾಪುರ, ಔರಾದ್, ಕಮಲಾಪುರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.