Job: ನೀರು ಸರಬರಾಜು ಇಲಾಖೆಯ 64 ಹುದ್ದೆ ಭರ್ತಿಗೆ ಅಧಿಸೂಚನೆ
Team Udayavani, Feb 7, 2024, 11:20 PM IST
ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದೆ.
ಮೂಲ ವೃಂದದಲ್ಲಿ 54 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 10 ಮೀಸಲಾತಿ ಹುದ್ದೆಗಳು ದೊರೆಯಲಿವೆ. ಫೆ. 10ರಿಂದ ಮಾರ್ಚ್ 10ರ ವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಮಾ. 14 ಕೊನೆಯ ದಿನವಾಗಿದೆ. ಸಾಮಾನ್ಯ ಮತ್ತು ಇತರ ಪ್ರವರ್ಗಗಳಿಗೆ 750 ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಸಹಾಯಕ ಎಂಜಿನಿಯರ್ ಹುದ್ದೆಗೆ ಬಿಇ/ಬಿ.ಟೆಕ್ ವಿದ್ಯಾರ್ಹತೆ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಬಿ.ಕಾಂ. ಪದವಿ ಪಡೆದಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ಮತ್ತು ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಪರೀಕ್ಷೆಗಳನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ http://kea.kar.nic.in ಭೇಟಿ ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.